Bigg Boss Kannada10: ದೊಡ್ಮನೆಗೆ ಎಂಟ್ರಿ ಕೊಡುವ ಬಗ್ಗೆ ಮೇಘಾ ಶೆಟ್ಟಿ ಹೇಳಿದ್ದೇನು?
Megha Shetty Entry to Bigg Boss: ಕನ್ನಡದ ಕಿರುತೆರೆ ನಟಿ ಮೇಘಾ ಶೆಟ್ಟಿ ಬಿಗ್ ಬಾಸ್ ಸೀಸನ್ 10ಕ್ಕೆ ಎಂಟ್ರಿ ಕೊಡಲಿದ್ದಾರೆ ಎನ್ನಲಾಗುತ್ತಿತ್ತು. ಇದೀಗ ಈ ವಿಚಾರವಾಗಿ ಸ್ವತಃ ಅವರೇ ಸ್ಪಷ್ಟನೆ ನೀಡಿದ್ದಾರೆ.
Megha Shetty: ಜೊತೆ ಜೊತೆಯಲಿ ಸೀರಿಯಲ್ ಮೂಲಕ ಕನ್ನಡ ಕಿರುತೆರೆ ಅಭಿಮಾನಿಗಳ ಅಚ್ಚು ಮೆಚ್ಚಾಗಿರುವ ಮಂಗಳೂರಿನ ಬೆಡಗಿ ಮೇಘಾ ಶೆಟ್ಟಿ ಸದ್ಯ ಚಂದನವನಕ್ಕೂ ಕಾಲಿಟ್ಟಿದ್ದಾರೆ. ಇತ್ತೀಚೆಗೆ ಕನ್ನಡದಲ್ಲಿ ನಟ ಡಾರ್ಲಿಂಗ್ ಕೃಷ್ಣ ಅವರ ಜೊತೆ ನಟಿಸಿ ಸೈ ಎನಿಸಿಕೊಂಡಿದ್ದರು.
ಇನ್ನು ಈ ಬಾರೀ ಸಾಕಷ್ಟು ಕುತೂಹಲ ಕೆರಳಿಸಿರುವ ಬಿಗ್ ಬಾಸ್ ಮನೆಗೆ ಮೇಘಾ ಶೆಟ್ಟಿ ಎಂಟ್ರಿ ಕೊಡುತ್ತಿದ್ದಾರೆ ಎನ್ನುವ ಸುದ್ದಿಗಳು ಹರಿದಾಡುತ್ತಿದ್ದವು. ಆದರೆ ಅದು ಅಧಕೃತವಾಗಿರಲಿಲ್ಲ. ಇದೀಗ ಈ ಸುದ್ದಿಗೆ ಉತ್ತರ ಸಿಕ್ಕಿದೆ.
ಇದನ್ನೂ ಓದಿ- ನಾನು ನನ್ನ ಮಕ್ಕಳ ಮುಂದೆ ಏನೂ ಮುಚ್ಚಿಡುವುದಿಲ್ಲ, ಆ ಎಲ್ಲ ಸಂಗತಿಗಳನ್ನೂ ಹೇಳಿದ್ದೇನೆ : ರವೀನಾ ಟಂಡನ್
ಕಿರುತೆರೆಯಲ್ಲಿ ಜನಪ್ರಿಯತೆ ಪಡೆದ ಬಳಿಕ ಮೇಘಾ ಶೆಟ್ಟಿ ಬಿಗ್ ಬಾಸ್ ಮನೆಗೆ ಹೋಗುತ್ತಿದ್ದಾರೆ ಎನ್ನಲಾಗುತ್ತಿತ್ತು. ಆದರೆ ಈಗ ಈ ವಿಚಾರ ಸುಳ್ಳಾಗಿದೆ
ಹೌದು ಕೆಲವು ಮೂಲಗಳ ಪ್ರಕಾರ ಬಿಗ್ ಬಾಸ್‌ಗೆ ಮೇಘಾ ಶೆಟ್ಟಿ ಆಗಮಿಸುತ್ತಿಲ್ಲ. ಅಕ್ಟೋಬರ್ 4ರಿಂದ ವಿನಯ್ ರಾಜ್‌ಕುಮಾರ್ ನಟನೆಯ ‘ಗ್ರಾಮಾಯಣ’ ಚಿತ್ರದ ಚಿತ್ರೀಕರಣ ಪ್ರಾರಂಭವಾಗಲಿದೆ. ಈ ಚಿತ್ರದಲ್ಲಿ ಮಂಗಳೂರು ಚೆಲುವೆಯೂ ನಟಿಸಲಿದ್ದಾರೆ. ಹೀಗಾಗಿ ಅನು ಅಲಿಯಾಸ್ ಮೇಘಾ ಶೆಟ್ಟಿ ಬಿಗ್ ಬಾಸ್‌ಗೆ ಎಂಟ್ರಿ ಕೊಡುತ್ತಾ ಇಲ್ಲ.
ಈ ‘ಗ್ರಾಮಾಯಣ’ ಚಿತ್ರದಲ್ಲಿ ನಟಿ ಹಳ್ಳಿ ಹುಡುಗಿಯ ಪಾತ್ರದಲ್ಲಿ ನಟಿಸುತ್ತಿದ್ದು, ಅದಕ್ಕಾಗಿ ನಟಿ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ಮತ್ತು ಚಿತ್ರದ ಶೂಟಿಂಗ್ ಸಹ ಬೆಂಗಳೂರು ಬಿಟ್ಟು ಬೇರೆ ಕಡೆ ನಡೆಯಲಿದೆ ಎನ್ನಲಾಗಿದೆ.
ಇದನ್ನೂ ಓದಿ- ವಿದೇಶದಲ್ಲೂ ʼಮೋದಿ ಮಾತುʼ ಪಾಲಿಸಿದ ಅಕ್ಷಯ್ : ಪೊರಕೆ ಹಿಡಿದು ಫೋಟೋ ಹಾಕಿದ ಬಿಟೌನ್ ಸ್ಟಾರ್
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.