Bigg Boss Kannada Nomination: ಬಿಗ್‌ಬಾಸ್ ಕನ್ನಡ ಹತ್ತನೇ ಸೀಸನ್‌ ಫೈನಲ್‌ ಹಂತಕ್ಕೆ ಇನ್ನು ಎರಡೇ ಹೆಜ್ಜೆ ಬಾಕಿ ಇದೆ. ಈ ಹಂತದಲ್ಲಿ ಮನೆಯೊಳಗೆ ಪೈಪೋಟಿ ಜೋರಾಗಿಯೇ ನಡೆಯುತ್ತಿದೆ. ಅದರ ಒಂದು ಭಾಗವಾಗಿ ನಾಮಿನೇಷನ್‌ ಚಟುವಟಿಕೆ ನಡೆದಿದೆ. ಅದರ ಝಲಕ್ JioCinema ಬಿಡುಗಡೆ ಮಾಡಿರುವ ಪ್ರೋಮೊದಲ್ಲಿ ಕಾಣಿಸಿಕೊಂಡಿದೆ.


COMMERCIAL BREAK
SCROLL TO CONTINUE READING

ಎಲ್ಲ ಸ್ಪರ್ಧಿಗಳ ಎದೆಯ ಮೇಲೆ ಹೃದಯಾಕಾರದ ಬೋರ್ಡ್‌ ಅನ್ನು ನೇತುಹಾಕಲಾಗಿದೆ. ಸಂಗೀತಾ ಹೊರತುಪಡಿಸಿ ಎಲ್ಲ ಸ್ಪರ್ಧಿಗಳೂ ತಾವು ನಾಮಿನೇಷನ್ ಮಾಡಲು ಇಚ್ಛಿಸುವ ಇಬ್ಬರು ಸ್ಪರ್ಧಿಗಳ ಹೆಸರು ಹೇಳಿ ಅವರ ಕತ್ತಿನಲ್ಲಿ ತೂಗು ಹಾಕಿದ್ದ ಬೋರ್ಡ್‌ಗೆ ಚೂರಿ ಹಾಕಬೇಕು. 


ಇದನ್ನೂ ಓದಿ-'ಬೊಂಬಾಟ್ ಭೋಜನ' 1000 ಸಂಚಿಕೆಯ ಸಂಭ್ರಮ: ಸಂಕ್ರಾಂತಿಗೆ ಹೊಸ ಸೀಸನ್ ಶುರು..


ಈ ಚಟುವಟಿಕೆಯಲ್ಲಿ ಕಾರ್ತಿಕ್‌ ಅವರು ವರ್ತೂರು ಸಂತೋಷ್ ಮತ್ತು ತನಿಷಾ ಅವರ  ಹೆಸರನ್ನು ಸೂಚಿಸಿ ಚೂರಿ ಹಾಕಿದ್ದಾರೆ. ತನಿಷಾ ನಮ್ರತಾ ಅವರ ಹೆಸರು ಹೇಳಿದ್ದಾರೆ. ವಿನಯ್‌ ಮತ್ತು ಪ್ರತಾಪ್ ಫೈಟ್‌ನ ಪರಿಣಾಮ ಈ ಚಟುವಟಿಕೆಯಲ್ಲಿಯೂ ಕಾಣಿಸಿಕೊಂಡಿದೆ. ಅವರಿಬ್ಬರೂ ಪರಸ್ಪರ ಚೂರಿ ಹಾಕಿಕೊಂಡಿದ್ದಾರೆ. 


ಒಟ್ಟಾರೆ ಈ ವಾರ ನಾಮಿನೇಟ್ ಆಗುವ ಸ್ಪರ್ಧಿಗಳು ಯಾರು ಯಾರು? ಅವರಲ್ಲಿ ಯಾರು ಸೇವ್ ಆಗಲಿದ್ದಾರೆ? ಯಾರು ಬಿಗ್‌ಬಾಸ್ ಮನೆಯಿಂದ ಹೊರಗೆ ಹೋಗಲಿದ್ದಾರೆ ಎಂಬುದನ್ನು ತಿಳಿದುಕೊಳ್ಳಲು ವಾರಾಂತ್ಯದವರೆಗೂ ಕಾಯಲೇಬೇಕು.
ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.
ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ ವೀಕ್ಷಿಸಿ.


ಇದನ್ನೂ ಓದಿ-Devara: ಹಿಂದೆಂದೂ ಕಂಡಿರದ ಅವತಾರದಲ್ಲಿ Jr. NTR.. 'ದೇವರ' ಚಿತ್ರದ ಝಲಕ್‌ ನೋಡಿದ್ದೀರಾ?