ಬಿಗ್ ಬಾಸ್ ಸ್ಪರ್ಧಿಗಳ ಹೊಡೆದಾಟಕ್ಕೆ ಕಾರಣವಾಯ್ತು ʼಹೂʼ..! ದೋಸ್ತಿಗಳ ಮಧ್ಯ ಜಿದ್ದಾಜಿದ್ದಿ
Vinay Karthik fight : ಹೂವಿನಿಂದ ಶುರುವಾದ ಈ ಆಟ ಸ್ವಲ್ಪವೇ ಹೊತ್ತಿನಲ್ಲಿ ಜಿದ್ದಾಜಿದ್ದಿಯ ಬೆಂಕಿಯಾಗಿ ಬೆಳೆದಿದೆ. ಹೂ ದೋಸ್ತ್ಗಳ ನಡುವೆ ಜಗಳ ತಂದು ಇಟ್ಟಿದೆ. ಕಾರ್ತಿಕ್ ಎದುರಾಳಿ ತಂಡದ ಹೂಬುಟ್ಟಿಯನ್ನು ಹೊತ್ತೊಯ್ದಿದ್ದಾರೆ. ಅವರನ್ನು ಹಿಂಬಾಲಿಸಿದ ವಿನಯ್ ಅವರನ್ನು ಜಗ್ಗಾಡಿದ್ದಾರೆ.
BBK 10 : ಬಿಗ್ಬಾಸ್ ಮನೆಯಲ್ಲಿ ಮಾತುಗಳ ಚಕಮಕಿ ತಾರಕಕ್ಕೇರಿದೆ. ಮಾತಿನ ಜೊತೆಗೆ ಕೈ ಕೈ ಮಿಲಾಯಿಸುವ, ಎದುರಾಬದಿರು ನಿಂತು ಕೆಣಕುವ ಪ್ರಸಂಗಗಳೂ ನಡೆದಿವೆ. ವಿನಯ್ ಮತ್ತು ಕಾರ್ತಿಕ್ ಮಧ್ಯೆ ಮತ್ತೆ ಬೆಂಕಿ ಹೊತ್ತಿಕೊಂಡಿದೆ. ದೊಸ್ತಿಗಳ ಜಗಳದ ಪ್ರೊಮೊ ಸಖತ್ ವೈರಲ್ ಆಗುತ್ತಿದೆ.
ಹೌದು.. ಬಿಗ್ಬಾಸ್ ಮನೆಯ ಸದಸ್ಯರಿಗೆ ‘ಮಣ್ಣಿನಲ್ಲಿ ಬಣ್ಣದ ಹೂಗಳನ್ನು ನೆಟ್ಟು, ಎದುರಾಳಿ ತಂಡದಿಂದ ಅವುಗಳನ್ನು ಕಾಪಾಡಿಕೊಳ್ಳಬೇಕು’ ಎಂಬ ಟಾಸ್ಕ್ ನೀಡಲಾಗಿದೆ. ಹೂವಿನಿಂದ ಶುರುವಾದ ಈ ಆಟ ಸ್ವಲ್ಪವೇ ಹೊತ್ತಿನಲ್ಲಿ ಜಿದ್ದಾಜಿದ್ದಿಯ ಬೆಂಕಿಯಾಗಿ ಬೆಳೆದಿದೆ. ಒಂದು ತಂಡದ ಹೂವನ್ನು ಇನ್ನೊಂದು ತಂಡ ಕಿತ್ತುಕೊಳ್ಳಲು ಹಾಳುಗೆಡವಲು ಯತ್ನಿಸಿದ್ದು ಮಾತಿನ ಚಕಮಕಿಗೆ ಕಾರಣವಾಗಿದೆ.
ಇದನ್ನೂ ಓದಿ: ಭಿಮಾನಿಗಳ ಮನೆಗೆ ದಿಢೀರ್ ಎಂಟ್ರಿ ಕೊಟ್ಟ ನಾಗ ಚೈತನ್ಯ..! ವಿಡಿಯೋ ವೈರಲ್
ಒಬ್ಬರು ಇನ್ನೊಬ್ಬರನ್ನು ಎಳದಾಡಿ, ಜಗಳವಾಡಿಕೊಳ್ಳುವವರೆಗೂ ಮುಟ್ಟಿದೆ. ತುಕಾಲಿ ಸಂತೋಷ್, ಪ್ರತಾಪ್ ಅವರನ್ನು ನೆಲಕ್ಕುರುಳಿಸಿ ಹೂ ಹಾಳು ಮಾಡಿದ್ದಾರೆ. ಕಾರ್ತಿಕ್ ಎದುರಾಳಿ ತಂಡದ ಹೂಬುಟ್ಟಿಯನ್ನು ಹೊತ್ತೊಯ್ದಿದ್ದಾರೆ. ಅವರನ್ನು ಹಿಂಬಾಲಿಸಿದ ವಿನಯ್ ಅವರನ್ನು ಜಗ್ಗಾಡಿದ್ದಾರೆ. ಮೈಕಲ್ ಹೂಬುಟ್ಟಿ ಗಟ್ಟಿಯಾಗಿ ಹಿಡಿದುಕೊಂಡರೆ ಉಳಿದವರೆಲ್ಲ ಅವರ ಮೇಲೆ ಬಿದ್ದಿದ್ದಾರೆ.
ಕಳೆದ ಒಂದೆರಡು ವಾರಗಳಲ್ಲಿ ಸೈಲೆಂಟ್ ಆಗಿದ್ದ ವಿನಯ್ ಈ ವಾರ ಸಖತ್ ಅಗ್ರೆಸಿವ್ ಆಗಿದ್ದಾರೆ. ಅದರ ಪರಿಣಾಮ ಈ ಗೇಮ್ನಲ್ಲಿ ಸ್ಪಷ್ಟವಾಗಿಯೇ ಕಾಣಿಸಿಕೊಳ್ಳುತ್ತಿದೆ. ಈ ಜಗಳ ಎಲ್ಲಿಗೆ ಮುಟ್ಟುತ್ತದೆ? ಏನಾಗುತ್ತದೆ ಎಂಬುದನ್ನು ತಿಳಿದುಕೊಳ್ಳಲು JioCinemaದಲ್ಲಿ ಪ್ರಸಾರವಾಗುತ್ತಿರುವ ಬಿಗ್ಬಾಸ್ ಕನ್ನಡವನ್ನು ವೀಕ್ಷಿಸಿ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.