Bigg Boss Kannada : ಕೆಲವು ದಿನಗಳ ಹಿಂದೆ ಬಿಗ್‌ಬಾಸ್‌, ಮನೆಯಲ್ಲಿರುವ ಆರು ಸ್ಪರ್ಧಿಗಳಿಗೆ ಅವರ ಆಸೆಗಳನ್ನು ಕೇಳಿತ್ತು. ಈಗ ಅವರ ಆಸೆಗಳನ್ನೆಲ್ಲ ಒಂದೊಂದಾಗಿ ಈಡೇರಿಸುತ್ತಿದ್ದಾರೆ ಬಿಗ್‌ಬಾಸ್. ಆ ಸನ್ನಿವೇಶ ಹೇಗಿದೆ ಎಂಬುದು ಇಂದು ಬಿಡುಗಡೆಯಾದ  ಪ್ರೋಮೊದಲ್ಲಿ ಜಾಹೀರಾಗಿದೆ.


COMMERCIAL BREAK
SCROLL TO CONTINUE READING

‘ತುಕಾಲಿಯವರೆ ಕೆಲಸಮಯಕ್ಕೆ ರಾಜನಂತೆ ಬದುಕಬೇಕು’ ಎಂದು ಬಿಗ್‌ಬಾಸ್‌ ಹೇಳಿದ್ದಾರೆ. ಅದಕ್ಕೆ ಅನುಗುಣವಾಗಿ ಕೆಂಪು ಸೂಟ್ ತೊಟ್ಟುಕೊಂಡ ತುಕಾಲಿ ಮಹಾರಾಜ್‌, ಮರುಕ್ಷಣವೇ ಮನೆಮಂದಿಗೆ ಅಪ್ಪಣೆಗಳನ್ನು ನೀಡಲು ಪ್ರಾರಂಭಿಸಿದ್ದಾರೆ. 


ಇದನ್ನೂ ಓದಿ:ಎಲಿಮಿನೇಟ್ ಆದ ಸ್ಪರ್ಧಿಗಳಿಂದ ಬಯಲಿಗೆ ಬಂತು ವಿನ್ನರ್‌ ಹೆಸರು..! ಗೆಲ್ಲೋದು ಯಾರ್‌ ಗೊತ್ತೆ?


‘ಪಿಲ್ಲೊವನ್ನು ತೆಗೆದುಕೊಂಡು ನನಗೆ ಬೀಸು’ ಎಂದು ಕಾರ್ತಿಕ್‌ಗೆ ಅಪ್ಪಣೆ ಮಾಡಿದ್ದಾರೆ. ಅಷ್ಟೇ ಅಲ್ಲ, ತುಕಾಲಿ ಮಹಾರಾಜರ ಮನಗೆಲ್ಲಲು ಬಿಗ್‌ಬಾಸ್‌ ಮನೆಯಲ್ಲಿ ಹೊಸ ರಾಜಕುಮಾರಿ ಅವತರಿಸಿದ್ದಾಳೆ. ಅಪ್ಪಣೆ ಮಾಡುವ ಮುನ್ನವೇ ತುಕಾಲಿ ಅವರಿಗೆ ಅವಸರವಸರವಾಗಿ ಮುತ್ತಿಟ್ಟು ತನ್ನ ಪ್ರೇಮವನ್ನೂ ವ್ಯಕ್ತಪಡಿಸಿದ್ದಾಳೆ. ‘ಎಷ್ಟು ಆತುರದಿಂದ ಕಾಯುತ್ತಿದ್ದೀಯಾ ಎಂದು ಈಗ ಗೊತ್ತಾಯ್ತು’ ಎಂದು ಆ ರಾಜಕುಮಾರಿಯ ಪ್ರೇಮಕ್ಕೆ ಮಹಾರಾಜರೇ ತಬ್ಬಿಬ್ಬಾಗಿದ್ದಾರೆ. 


ಅಷ್ಟೇ ಅಲ್ಲ, ಪ್ರತಾಪ್‌ ಕಂಪನಿಯ ಡ್ರೋನ್‌ ಬಿಗ್‌ಬಾಸ್‌ ಮನೆಯೊಳಗೆ ಲ್ಯಾಂಡ್ ಆಗಿದೆ. ನೀಲಿ ಬಣ್ಣದ ಈ ಡ್ರೋಣ್ ಚೆಲುವೆಯನ್ನು ನೋಡಿ ಪ್ರತಾಪ್‌, ಹಳೆಯ ಪ್ರೇಯಸಿಯನ್ನು ಕಂಡಷ್ಟೇ ಉತ್ಸಾಹದಿಂದ ಮುನ್ನುಗ್ಗಿ ಬಂದು ಎತ್ತಿಕೊಂಡಿದ್ದಾರೆ. ಬಿಗ್‌ಬಾಸ್‌ನ ಈ ಸೀಸನ್‌ ಕೊನೆಯ ದಿನಗಳು ಭಾವುಕತೆ, ಸಾರ್ಥಕತೆ ಮತ್ತು ಭರಪೂರ ಮನರಂಜನೆಯ ನಗುವಿನಲ್ಲಿ ತುಂಬಿಹೋಗುತ್ತಿದೆ. ಮನೆಯೊಳಗಿನ ಆರು ಸ್ಪರ್ಧಿಗಳೂ ತಮ್ಮೆಲ್ಲ ಜಿದ್ದು ಮರೆತು ಈ ಕ್ಷಣದ ಖುಷಿಯಲ್ಲಿ ಕಳೆದುಹೋಗುತ್ತಿದ್ದಾರೆ. ‘ಹ್ಯಾಪಿ ಬಿಗ್‌ಬಾಸ್’ ಎಂಬ ಟ್ಯಾಗ್‌ ಲೈನ್‌ ಅನ್ನು ಅಕ್ಷರಶಃ ಸತ್ಯವಾಗಿಸುತ್ತಿದ್ದಾರೆ. 


ಇದನ್ನೂ ಓದಿ:ಮೊದಲ ದಿನವೇ 'ಫೈಟರ್'ಗೆ ಉತ್ತಮ ಪ್ರತಿಕ್ರಿಯೆ: ಬಾಕ್ಸ್‌ ಆಫೀಸ್‌ ಕಲೆಕ್ಷನೆಷ್ಟು ಗೊತ್ತೇ?


ಬಿಗ್‌ಬಾಸ್‌ ಸೀಸನ್ 10 ಫಿನಾಲೆ ಈ ವಾರಾಂತ್ಯದಲ್ಲಿ ನಡೆಯಲಿದ್ದು, ಯಾರು ಗೆಲ್ಲುತ್ತಾರೆ ಎಂಬ ಕೋಟಿ ಜನರ ಕುತೂಹಲಕ್ಕೆ ಉತ್ತರ ಸಿಗಲಿದೆ. 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=xFI-KJNrEP8
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.