Bigg Boss Kannada 10: ಕಳೆದ ಕೆಲವು ದಿನಗಳಿಂದ ತುಕಾಲಿ ಸಂತೋಷ್‌ ಗಂಭೀರವಾಗಿಬಿಟ್ಟಿದ್ದರು. ಮೊದಲ ವಾರದಲ್ಲಿ ಅವರು ಮಾಡಿದ ಕಾಮಿಡಿಯ ಕ್ವಾಲಿಟಿ ಬಗ್ಗೆ ಸ್ವತಃ ಕಿಚ್ಚ ಸುದೀಪ್ ಅವರೇ ತರಾಟೆಗೆ ತೆಗೆದುಕೊಂಡಿದ್ದರು. ‘ನಿಮ್ಮ ಕಾಮಿಡಿ ಬೇರೆಯವರ ಮನಸ್ಸನ್ನು ನೋಯಿಸುತ್ತದೆ’ ಎಂಬ ಮಾತು ಪದೇ ಪದೇ ಮನೆಮಂದಿಯ ಬಾಯಲ್ಲಿ ಬರುತ್ತಿತ್ತು. ಇದರಿಂದ ಹಾಸ್ಯ ಮಾಡಲೇ ಹಿಂಜರಿಯುತ್ತಿದ್ದ ತುಕಾಲಿ ಅವರು ಗಂಭೀರವಾಗಿಬಿಟ್ಟಿದ್ದರು. 


COMMERCIAL BREAK
SCROLL TO CONTINUE READING

ಮನೆಯೊಳಗಿನ ಸನ್ನಿವೇಶಗಳು, ಟಾಸ್ಕ್‌ಗಳು ಮತ್ತು ಜಗಳಗಳೂ ಅವರು ಗಂಭೀರವಾಗಲು ಕಾರಣವಿರಬಹುದು. ಆದರೆ ಈವತ್ತು ಬಿಗ್‌ಬಾಸ್‌ ಮನೆಯಲ್ಲಿ ಮತ್ತೆ ನಗೆಯ ಹೊನಲು ಹರಡಿದೆ. ಆ ನಗೆಯ ಅಲೆಯಲ್ಲಿ ಮನೆಯ ಸದಸ್ಯರು ಪರಸ್ಪರ ಭಿನ್ನಾಭಿಪ್ರಾಯಗಳನ್ನು ಮರೆತು ನಕ್ಕು ನಲಿದಿದ್ದಾರೆ. ಆ ನಗುವಿಗೆ ಕಾರಣವಾದವರು ತುಕಾಲಿ ಸಂತೋಷ್!


ಇದನ್ನೂ ಓದಿ- Bigg Boss 10: ದೊಡ್ಮನೆಯಲ್ಲಿ ಲವ್ ಸ್ಟೋರಿಗಳ ಹಾವಳಿ ಜೋರು..!


ಇಂದಿನ  ಎಪಿಸೋಡ್ ಸಖತ್ ಎಂಟರ್‍ಟೈನಿಂಗ್ ಆಗಿರುತ್ತದೆ ಎಂಬುದರ ಸೂಚನೆ JioCinema ಬಿಡುಗಡೆ ಮಾಡಿರುವ ಬೆಳಗಿನ ಪ್ರೋಮೊದಲ್ಲಿಯೇ ಸಿಕ್ಕಿದೆ. ‘ಬಾರೇ ರಾಜಕುಮಾರಿ’ ಎಂದು ಕಾರ್ತಿಕ್ ಅವರು ತುಕಾಲಿ ಸಂತೋಷ್ ಹೆಗಲ ಮೇಲೆ ಕೈ ಹಾಕಿ ಕರೆದುಕೊಂಡು ಬಂದಾಗ ಇಡೀ ಮನೆಯೇ ದಂಗಾಬಿಟ್ಟಿತ್ತು. ಯಾಕೆಂದರೆ ತುಕಾಲಿ ಅವರ ವೇಷ ಬದಲಾಗಿತ್ತು! ಅವರು ‘ಚೂಡಿದಾರ ತೊಟ್ಟ ಮರಿಜಿಂಕೆ’ಯಾಗಿ ಬದಲಾಗಿದ್ದರು! ಬಂದವರು ವರ್ತೂರ್ ಸಂತೋಷ್ ಅವರ ಹೆಗಲಿಗೆ ಕೈ ಹಾಕಿ ನುಲಿಯುತ್ತ, ‘ವರ್ತೂ… ಯಾಕೆ ನನ್ನನ್ನ ಬಿಟ್ಬಟ್ಟು ಒಬ್ನೇ ಟೊಮೆಟೊ ಮಾರೋಕೆ ಹೋಗಿದ್ದೆ’ ಎಂದು ಕೇಳಿದಾಗಲಂತೂ ಮನೆಯವರೆಲ್ಲರೂ ಬಿದ್ದು ಬಿದ್ದು ನಗುವಂತಾಯ್ತು.


‘ಇನ್ನೊಂದ್ ವಿಷ್ಯ ಗೊತ್ತಾ? ಯಾವಾಗ ನನ್ನ ತಂಗಿ ಸಿಕ್ರೂ ನಾನು ಜೋರಾಗಿ ತಬ್ಕೋತೀನಿ’ ಎಂದು ನಮ್ರತಾ ಕಡೆಗೆ ಹೋದರೆ, ನಮ್ರತಾಕಿ ರುಚುತ್ತ ಓಡಿಹೋಗಿಬಿಟ್ಟರು. 


ಇದನ್ನೂ ಓದಿ- ‘ರೊಚ್ಚಿಗೆದ್ದಿದ್ದಾರೆ ಮನೆಮಂದಿ: ಸಂಗೀತಾ-ಕಾರ್ತಿಕ್ ವ್ಯಕ್ತಿತ್ವ ಮಾತಿನಲ್ಲೇ ಚಿಂದಿ!’


ಅಷ್ಟೇ ಅಲ್ಲ, ಈ ‘ಹೊಸ ಹುಡುಗಿ’ಯಿಂದ ‘ಪಪ್ಪಿ’ ತೆಗೆದುಕೊಳ್ಳಲು ಪೈಪೋಟಿಯೇ ನಡೆದಿದೆ.  ‘ನೀವೆಷ್ಟು ಬರ್ಗೆಟ್ಟಿದೀರಾ ಅಂತ ಈವಾಗ ಗೊತ್ತಾಗ್ತಿದೆ’ ಎಂದು ಸಂತೋಷ್‌ ಹಣೆ ಹಣೆ ಚಚ್ಚಿಕೊಳ್ತಿದ್ದಾರೆ.


ಈ ಮೋಜಿನ ಆಟ ನೋಡಿ ಮಜಾ ತೆಗೆದುಕೊಳ್ಳಲು JioCinemaದಲ್ಲಿ ಪ್ರಸಾರವಾಗುತ್ತಿರುವ ಬಿಗ್‌ಬಾಸ್‌ ಕನ್ನಡವನ್ನು ವೀಕ್ಷಿಸಿ. ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.