Bigg Boss Kannada: ಈ ವಾರದ ಎಲ್ಲ ಟಾಸ್ಕ್‌ಗಳಲ್ಲಿಯೂ ‘ಮಣ್ಣಿನ ಮಕ್ಕಳು’ ತಂಡ ಸೋತು ಸುಣ್ಣವಾಗಿದೆ. ಆ ತಂಡದ ನಾಯಕತ್ವವನ್ನು ವಹಿಸಿದ್ದ ಡ್ರೋಣ್ ಪ್ರತಾಪ್‌ ಜೈಲುಪಾಲಾಗಿದ್ದಾರೆ! ನಾಯಕತ್ವದ ಪರಿಣಾಮವಾಗಿ ಜೈಲುಡುಗೆ ತೊಟ್ಟ ಪ್ರತಾಪ್ ಚಿತ್ರ JioCinema ಬಿಡುಗಡೆ ಮಾಡಿರುವ ಬೆಳಗಿನ ಫ್ರೊಮೊದಲ್ಲಿ ಜಾಹೀರುಗೊಂಡಿದೆ.


COMMERCIAL BREAK
SCROLL TO CONTINUE READING

ವಾರದ ಕೊನೆಗೆ ಕಳಪೆ ಯಾರು ಉತ್ತಮ ಯಾರು ಎಂಬುದನ್ನು ಆರಿಸುವ ಸಂದರ್ಭದಲ್ಲಿ ಎರಡೂ ತಂಡದ ಬಹುತೇಕ ಸದಸ್ಯರು ಡ್ರೋಣ್ ಪ್ರತಾಪ್ ಹೆಸರನ್ನು ಸೂಚಿಸಿದ್ದಾರೆ. 


ಇದನ್ನೂ ಓದಿ- ಬಿಗ್ ಬಾಸ್ ಸ್ಪರ್ಧಿ ಗರ್ಭಿಣಿ..! ಹೊರಬಂದ ಸ್ಪರ್ಧಿಯಿಂದ ಬಯಲಾಯ್ತು ಅಸಲಿ ಸತ್ಯ


'ನನ್ನನ್ನು ಕ್ಯಾಪ್ಟನ್ಸಿ ಟಾಸ್ಕ್‌ನಿಂದ ಹೊರಗಿಟ್ಟಿದ್ದು ಬೇಜಾರಾಯ್ತು' ಎಂದು ನಮ್ರತಾ ಕಾರಣ ಕೊಟ್ಟಿದ್ದರೆ, 'ಕಾರ್ತಿಕ್ ಅವರಂಥ ಆಟಗಾರನನ್ನು ಹೊರಗಿಟ್ಟಿದ್ದರಿಂದ ತಂಡ ವಾರದ ಎಲ್ಲ ಟಾಸ್ಕ್‌ಗಳಲ್ಲಿಯೂ ಸೋಲುವಂತಾಯ್ತು' ಎಂದು ವಿನಯ್ ಕಾರಣ ನೀಡಿದ್ದಾರೆ. 'ಎಲ್ಲೋ ಒಂದು ಕಡೆ ಕೋಪದಿಂದ ಮಾತಾಡ್ತಾರೆ ಎಂದು ಈ ವಾರನೂ ಅಗ್ರೆಶನ್‌ನಲ್ಲಿಯೇ ಆಡ್ತಾರೆ ಅಂದುಕೊಳ್ಳುವುದು ಸರಿಯಲ್ಲ' ಎಂದು ತನಿಷಾ ಹೇಳಿದ್ದಾರೆ. ಆಶ್ಚರ್ಯಕರವಾಗಿ ವರ್ತೂರು, ಸ್ನೇಹಿತ್‌ ಕೂಡ ಪ್ರತಾಪ್ ಹೆಸರನ್ನೇ ಹೇಳಿದ್ದಾರೆ. 


ಮನೆಯವರ ನಿರ್ಧಾರಕ್ಕೆ ಬದ್ಧನಾಗಿ ಪ್ರತಾಪ್ ಜೈಲುಡುಗೆಯೇನೋ ತೊಟ್ಟಿದ್ದಾರೆ. ಆದರೆ ಅವರ ನಿರ್ಧಾರ ನನಗೆ ಸಮ್ಮತ ಅನಿಸಿಲ್ಲ ಎಂದೂ ಗಟ್ಟಿಯಾಗಿಯೇ ಹೇಳಿದ್ದಾರೆ, "ನನ್ನ ಪ್ರಕಾರ ನಾನು ತೆಗೆದುಕೊಂಡ ನಿರ್ಧಾರಗಳು ಸರಿ ಇತ್ತು. ಎಲ್ಲರೂ ಸೇರಿ ನನಗೆ ಕಳಪೆ ಕೊಟ್ಟಿದ್ದು ಬೇಜಾರಾಗಿದೆ. ಇದಕ್ಕೆ ನನಗೆ ಸಮ್ಮತಿ ಇಲ್ಲ" ಎಂದು ಹೇಳಿ ಅವರು ಜೈಲಿನೊಳಗೆ ಹೋಗಿ ಕೂತಿದ್ದಾರೆ.


ಇದನ್ನೂ ಓದಿ- ಆಕೆಗೋಸ್ಕರ ಪತ್ನಿಯನ್ನೇ ದೂರ ಮಾಡಿದ್ರಾ ವರ್ತೂರು ಸಂತೋಷ್?


ಹಾಗಾದರೆ ಈ ವಾರ ಉತ್ತಮ ಪಟ್ಟ ಯಾರಿಗೆ ಬಂದಿದೆ? ಕ್ಯಾಪ್ಟನ್ಸಿ ಓಟದಲ್ಲಿ ಯಾರು ಗೆದ್ದಿದ್ದಾರೆ? ಈ ಪ್ರಶ್ನೆಗಳಿಗೆ ಉತ್ತರ ಸಿಗಲು JioCinemaದಲ್ಲಿ ಪ್ರಕಟವಾಗುತ್ತಿರುವ ಬಿಗ್‌ಬಾಸ್ ಕನ್ನಡ ಉಚಿತ ನೇರಪ್ರಸಾರವನ್ನು ವೀಕ್ಷಿಸಿ.  ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://youtu.be/--phA9ji8NM
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.