BBK 10 : ಡಬಲ್ ಎಲಿಮಿನೇಷನ್..‌ ನಿನ್ನೆ ಇಶಾನಿ ಔಟ್‌, ಇಂದು ಹೊರ ಬರ್ತಾರಾ ಈ ಸ್ಪರ್ಧಿ?

Ishani Eliminated : ಈ ವಾರ ಡಬಲ್ ಎಲಿಮಿನೇಷನ್ ವೀಕ್. ಇಬ್ಬರು ಈ ಮನೆಯಿಂದ ಹೊರಗೆ ಹೋಗಲಿದ್ದಾರೆ ಎಂದು ಕಿಚ್ಚ ಹೇಳಿದ್ದರು.

Written by - Chetana Devarmani | Last Updated : Nov 19, 2023, 07:25 AM IST
  • ಈ ವಾರ ಡಬಲ್ ಎಲಿಮಿನೇಷನ್ ವೀಕ್
  • ಬಿಗ್‌ಬಾಸ್‌ ಮನೆಯಲ್ಲಿ ಇಶಾನಿ ಜರ್ನಿ ಎಂಡ್
  • ಬಿಗ್‌ಬಾಸ್ ಮನೆಯಿಂದ ಹೊರಗೆಬಿದ್ರು ಇಶಾನಿ
BBK 10 : ಡಬಲ್ ಎಲಿಮಿನೇಷನ್..‌ ನಿನ್ನೆ ಇಶಾನಿ ಔಟ್‌, ಇಂದು ಹೊರ ಬರ್ತಾರಾ ಈ ಸ್ಪರ್ಧಿ?  title=
ಇಶಾನಿ

Bigg Boss Kannada Season 10 : ಕೊನೆಗೂ ಗ್‌ಬಾಸ್‌ ಮನೆಯಲ್ಲಿ ಇಶಾನಿ ಜರ್ನಿ ಎಂಡ್  ಆಗಿದೆ. ಕಳೆದ ವಾರ ವರ್ತೂರ್ ಸಂತೋಷ್‌ ಅವರ ಕಾರಣದಿಂದ ಎಲಿಮಿನೇಷನ್ ನಡೆದಿರಲಿಲ್ಲ. ಈ ವಾರ ಡಬಲ್ ಎಲಿಮಿನೇಷನ್ ವೀಕ್. ಇಬ್ಬರು ಈ ಮನೆಯಿಂದ ಹೊರಗೆ ಹೋಗಲಿದ್ದಾರೆ ಎಂದು ಕಿಚ್ಚ ಹೇಳಿದ್ದರು.

ಶನಿವಾರದ ಎಪಿಸೋಡ್ ಕೊನೆಯಲ್ಲಿ, ಕಿಚ್ಚ, ‘ಈ ವಾರ ಒಬ್ಬರು ಮನೆಯಿಂದ ಹೊರಗೆ ಹೋಗುತ್ತಿದ್ದಾರೆ. ಅವರು ಯಾರು ಎಂದು ನಿಮಗೇ ಗೊತ್ತಿರಬೇಕು. ಅವರೇ ಎದ್ದು ನಿಂತುಕೊಳ್ಳಿ’ ಎಂದು ಕೇಳಿದರು. ಇಶಾನಿ ಎದ್ದು ನಿಂತುಕೊಂಡರು. ಕಿಚ್ಚ, ‘ನಿಜ. ನಿಮ್ಮ ಪಯಣ ಬಿಗ್‌ಬಾಸ್‌ ಮನೆಯಲ್ಲಿ ಮುಗಿಯುತ್ತಿದೆ. ಆಲ್‌ದಿ ಬೆಸ್ಟ್ ಎಂದು ಹೇಳಿದರು.

ಇದನ್ನೂ ಓದಿ: ಬಿಗ್ ಬಾಸ್ ಮನೆಯಿಂದ ಕಾಣೆಯಾದ ಸಂಗೀತಾ! ಇದ್ದಕ್ಕಿದ್ದಂತೆ ಆಚೆ ಬಂದ್ರಾ?

ಇಂದಿನ ಎಪಿಸೋಡ್‌ನಲ್ಲಿ ಇನ್ನೊಬ್ಬರು ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಲಿದ್ದಾರೆ. ಹೊರಬಿದ್ದ ಇಬ್ಬರೂ ಸ್ಪರ್ಧಿಗಳ ಜೊತೆ ನಾಳೆಯ ಎಪಿಸೋಡ್‌ನಲ್ಲಿ ಕಿಚ್ಚ ಸಂವಾದ ನಡೆಸಲಿದ್ದಾರೆ.

ಕೊನೆಯದಾಗಿ ಇಶಾನಿ, ‘ನಾನು ಇನ್ನಷ್ಟು ಎಫರ್ಟ್‌ ಹಾಕಬೇಕಾಗಿತ್ತು. ಆಗಲಿಲ್ಲ. ಮನೆಯಿಂದ ಸಾಕಷ್ಟು ಕಲಿತುಕೊಂಡಿದ್ದೀನಿ. ಉಳಿದ ಎಲ್ಲ ಸ್ಪರ್ಧೆಗಳಿಗೆ ಆಲ್‌ ದಿ ಬೆಸ್ಟ್’ ಎಂದು ಹೇಳಿದರು. 

ಇದನ್ನೂ ಓದಿ: ವಿಜಯ್, ರಜನಿಕಾಂತ್, ಪ್ರಭಾಸ್ ಮೂವರು ಅಲ್ಲ.. ದಕ್ಷಿಣ ಭಾರತದ ಶ್ರೀಮಂತ ಸೂಪರ್ ಸ್ಟಾರ್ ಈತ 

ಅಲ್ಲಿಗೆ ಶನಿವಾರದ ‘ಕಿಚ್ಚನ ಪಂಚಾಯಿತಿ’ ಮುಗಿದಿದೆ. ನಾಳೆ ಮತ್ಯಾವ ಸ್ಪರ್ಧಿ ಮನೆಯಿಂದ ಹೊರಬೀಳಲಿದ್ದಾರೆ ಎಂಬ ಕುತೂಹಲ ಹಾಗೆಯೇ ಉಳಿದುಕೊಂಡಿದೆ. ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ. ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ರಾತ್ರಿ 9.30ಕ್ಕೆ ವೀಕ್ಷಿಸಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News