Bigg Boss Kannada Season 10 : ಬಿಗ್ ಬಾಸ್ ಮನೆಯಲ್ಲಿ ತಣ್ಣನೆಯ ರಾತ್ರಿ. ಆದರೆ ಎಲ್ಲರ ಕಣ್ಣಲ್ಲೂ ಕೋಡಿಯಾಗಿ ಹರಿಯುತ್ತಿದೆ ಬಿಸಿಯಾದ ಕಂಬನಿ. ಎದುರಲ್ಲಿ ಅಗ್ಗಷ್ಟಿಗೆ ಧಗಧಗ ಉರಿಯುತ್ತಿದ್ದರೆ, ಸ್ಪರ್ಧಿಗಳೆಲ್ಲ ಕುಟುಂಬದವರ ನೆನಪಲ್ಲಿ ಕರಗಿ ಕಣ್ಣೀರಾಗಿ ಹರಿಯುತ್ತಿದ್ದಾರೆ. ಅಪ್ಪ-ಅಮ್ಮನಿಗೆ ಕೊಟ್ಟ ಮಾತು, ಸಂಗಾತಿಯ ನೆನಪು, ಈಡೇರದೇ ಉಳಿದುಬಿಟ್ಟ ಭಾಷೆ, ಕೊನೆಗೂ ಒಪ್ಪಿಕೊಳ್ಳದೇ ತಮ್ಮೊಳಗೆ ಒಂದಾಗಿಸಿಕೊಂಡು ಅಪ್ಪಿಕೊಳ್ಳದೇ ಹೋದ ಕುಟುಂಬ, ಹೆತ್ತವರ ಬೆಂಬಲಕ್ಕೆ ಪ್ರತಿಫಲ ನೀಡಲಾಗದ ಅಸಹಾಯಕತೆ ಹೀಗೆ ಎಲ್ಲ ನೆನೆದು ಕಂಬನಿ ಇಟ್ಟಿದ್ದಾರೆ ಬಿಗ್‌ ಬಾಸ್‌ ಸ್ಪರ್ಧಿಗಳು. 


COMMERCIAL BREAK
SCROLL TO CONTINUE READING

ಮನುಷ್ಯ ಮನುಷ್ಯರ ನಡುವಿನ ಗೋಡೆ ಒಡೆಯಲು ನೋವಿಗಿಂತ ಬೇರೆ ಆಯುಧ ಬೇಕೆ? ಅಗ್ಗಷ್ಟಿಕೆಯ ಬೆಳಕಲ್ಲಿ, ನೆನಪುಗಳ ಕಾವಿನಲ್ಲಿ ನೋವಿನ ನೆಪದಲ್ಲಿ ಮನೆಯ ಸ್ಪರ್ಧಿಗಳೆಲ್ಲ ಒಂದಾಗಿದ್ದಾರೆ. ಒಬ್ಬರ ಕಣ್ಣೀರನ್ನು ಇನ್ನೊಬ್ಬರು ವರೆಸಿದ್ದಾರೆ. ಒಬ್ಬರ ದುಃಖಕ್ಕೆ ಇನ್ನೊಬ್ಬರು ಹೆಗಲಾಗಿದ್ದಾರೆ. ಒಬ್ಬರಿಗೊಬ್ಬರು ಒದಗಿಬರುತ್ತ ಎಲ್ಲರೂ ಒಂದೇ ಆಗಿದ್ದಾರೆ. 


ಇದನ್ನೂ ಓದಿ : Bigg Boss : ತುಕಾಲಿ ಸಂತೋಷ್​ - ಡ್ರೋನ್​​ ಪ್ರತಾಪ್ ಮಧ್ಯೆ ಹೊಡೆದಾಟ!! 


ಬಿಗ್‌ ಬಾಸ್‌ ಮನೆಯಲ್ಲಿ ಎಲ್ಲ ಭಾವನೆಗಳನ್ನೂ ಒಂದೆಡೆ ನೋಡಬಹುದು. ಅಲ್ಲಿ ನಗು ಇದೆ, ಅಳು ಇದೆ.. ಸಂತಸದ ಹೊನಲಿದೆ.. ಜಗಳ ಕಿತ್ತಾಟದ ಕಾವಿದೆ. ಇದೆಲ್ಲದರ ಮಧ್ಯೆ ತಮಗರಿವಿಲ್ಲದೇ ತಾವೆಲ್ಲ ಒಂದು ಕುಟುಂಬ ಎಂಬಂತೆ ಒಂದಾಗಿ ಬಿಡುತ್ತಾರೆ. 


ಬಿಗ್ ಬಾಸ್ ಮನೆಯ ಸ್ಪರ್ಧಿಗಳ ಭಾವುಕ ಗಳಿಗೆಗಳು ಇಂದಿನ ಸಂಚಿಕೆಯಲ್ಲಿ ಪ್ರಸಾರವಾಗಲಿವೆ. ಬಿಗ್ ಬಾಸ್ ಮನೆಯೊಳಗಿನ ಪ್ರತಿ ಗಳಿಗೆಯೂ ವ್ಯಕ್ತಿತ್ವದ ಅಗ್ನಿಪರೀಕ್ಷೆಯ ಹಾಗಿರುತ್ತದೆ. ಈ ಆಟದಲ್ಲಿ ಒಂದಾಗಿರುವವರು ಮತ್ತೆ ಬೇರಾಗುತ್ತಾರಾ? ಪರಸ್ಪರ ಹೆಗಲುಕೊಟ್ಟವರು ತೊಡೆ ತಟ್ಟಿ ನಿಲ್ಲುತ್ತಾರಾ? ಇದೆನ್ನೆಲ್ಲ ಕಾಲವೇ ನಿರ್ಧರಿಸಲಿದೆ.


ಬಿಗ್‌ಬಾಸ್ ಕನ್ನಡ 24 ಗಂಟೆ ನೇರಪ್ರಸಾರವನ್ನು JioCinemaದಲ್ಲಿ ಉಚಿತವಾಗಿ ನೋಡಿ. ಪ್ರತಿದಿನದ ಎಪಿಸೋಡ್‌ಗಳನ್ನು Colors Kannada ದಲ್ಲಿ ಪ್ರತಿದಿನ ರಾತ್ರಿ 9.30ಗೆ ವೀಕ್ಷಿಸಿ.


ಇದನ್ನೂ ಓದಿ : ಬಿಗ್ ಬಾಸ್ ಮನೆಯಲ್ಲಿ ವಿನಯ್ ಗೌಡ ಇರಬೇಕಾ? ಡ್ರೋನ್ ಪ್ರತಾಪ್ ಇರಬೇಕು? 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.