ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಸಿದ್ದರಾಮಯ್ಯರಿಂದ ಏಕಪಾತ್ರಾಭಿನಯ: ಬಿಜೆಪಿ ವ್ಯಂಗ್ಯ

‘ಸ್ವಾಮೀಜಿಗಳ ಶಿರವಸ್ತ್ರದ ಬಗ್ಗೆ ವ್ಯಂಗ್ಯವಾಡುವ ಸಿದ್ದರಾಮಯ್ಯ ಈ ಹಿಂದೆ ವೀರಶೈವ ಲಿಂಗಾಯತ ಸ್ವಾಮೀಜಿಗಳ ಹೆಸರನ್ನು ತಮ್ಮ‌ ಮತ ರಾಜಕಾರಣಕ್ಕೆ ಬಳಸಿಕೊಳ್ಳುವ ವಿಫಲ‌ಯತ್ನ ನಡೆಸಿದ್ದರು'

Written by - Zee Kannada News Desk | Last Updated : Mar 26, 2022, 01:38 PM IST
  • ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತಿದೆ ಸಿದ್ದರಾಮಯ್ಯರ ಧೋರಣೆ
  • ಸಿದ್ದರಾಮಯ್ಯನವರು ಈಗ ಸ್ವಾಮೀಜಿಗಳ‌ ಮೌನವನ್ನೂ ತಮ್ಮ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ
  • ಹಿಂದುಗಳನ್ನು ವಿರೋಧಿಸಲು ಸಿದ್ದರಾಮಯ್ಯನವರಿಗೆ ಯಾವ ಕಾನೂನು ಅಡ್ಡಿ ಬರುವುದಿಲ್ಲ
ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಸಿದ್ದರಾಮಯ್ಯರಿಂದ ಏಕಪಾತ್ರಾಭಿನಯ: ಬಿಜೆಪಿ ವ್ಯಂಗ್ಯ   title=
ಸಿದ್ದರಾಮಯ್ಯ ಹೇಳಿಕೆಗೆ ಬಿಜೆಪಿ ತಿರುಗೇಟು ನೀಡಿದೆ

ಬೆಂಗಳೂರು: ಹೈಕೋರ್ಟ್ ತೀರ್ಪಿನ ಬಳಿಕ ಹಿಜಾಬ್ ವಿವಾದ(Karnataka Hijab Row) ತಣ್ಣಗಾಗಿತ್ತು. ಆದರೆ ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಸಿದ್ದರಾಮಯ್ಯ ಈಗ ಏಕಪಾತ್ರಾಭಿನಯ ಆರಂಭಿಸಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. #ಹಿಂದೂವಿರೋಧಿಬುರುಡೆರಾಮಯ್ಯ ಹ್ಯಾಶ್ ಟ್ಯಾಗ್ ಬಳಸಿ ಬಿಜೆಪಿ ಶನಿವಾರ ಸರಣಿ ಟ್ವೀಟ್ ಮಾಡಿದ್ದಾರೆ.

‘ನಾನು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ’ ಎಂಬ ಸಿದ್ದರಾಮಯ್ಯ(Siddaramaiah)ರ ಸ್ಪಷ್ಟನೆಗೆ ಬಿಜೆಪಿ ತಿರುಗೇಟು ನೀಡಿದೆ. ‘ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತಿದೆ ಸಿದ್ದರಾಮಯ್ಯರ ಧೋರಣೆ. ಈ‌‌ ಹಿಂದೆ ಹಲವು ಮಠಾಧೀಶರ ವಿರುದ್ಧ ಅಗೌರವಯುತವಾಗಿ ನಡೆದುಕೊಂಡಿದ್ದ ಸಿದ್ದರಾಮಯ್ಯ(Siddaramaiah)ನವರು ಈಗ ಸ್ವಾಮೀಜಿಗಳ‌ ಮೌನವನ್ನೂ ತಮ್ಮ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಕುಟುಕಿದೆ.

ಇದನ್ನೂ ಓದಿ: ‘ನಾನು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ; ನನ್ನ ಹೇಳಿಕೆ ತಿರುಚಲಾಗಿದೆ’

‘ಸ್ವಾಮೀಜಿ(Swamijis)ಗಳ ಶಿರವಸ್ತ್ರದ ಬಗ್ಗೆ ವ್ಯಂಗ್ಯವಾಡುವ ಸಿದ್ದರಾಮಯ್ಯ ಈ ಹಿಂದೆ ವೀರಶೈವ ಲಿಂಗಾಯತ ಸ್ವಾಮೀಜಿಗಳ ಹೆಸರನ್ನು ತಮ್ಮ‌ ಮತ ರಾಜಕಾರಣಕ್ಕೆ ಬಳಸಿಕೊಳ್ಳುವ ವಿಫಲ‌ಯತ್ನ ನಡೆಸಿದ್ದರು. ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಸ್ವಾಮೀಜಿಗಳೇ ಮನವಿ ನೀಡಿದ್ದರು ಎಂಬ ಸುಳ್ಳು ಹೇಳಿಕೆಯನ್ನು ರಾಜ್ಯದ ಜನ ಮರೆತಿಲ್ಲ’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.

‘ಬಿಎಸ್‌ವೈ(BS Yediyurappa) ಅವರು ಸಿಎಂ ಆಗಿದ್ದ ಸಂದರ್ಭದಲ್ಲಿ ಮಠಮಂದಿರಗಳಿಗೆ ಉದಾರ ನೆರವು ನೀಡಿದ್ದರು. ಅಂದು ವಿಪಕ್ಷ ನಾಯಕರಾಗಿದ್ದ ಸಿದ್ದರಾಮಯ್ಯ ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದರು. ಸಂವಿಧಾನದ ಮುಂದೆ ಎಲ್ಲರೂ ಸಮಾನರು ಎಂದು ವಾದಿಸುವ ಸಿದ್ದರಾಮಯ್ಯನವರಿಗೆ ಹಿಂದುಗಳನ್ನು ವಿರೋಧಿಸಲು ಯಾವ ಕಾನೂನು ಅಡ್ಡಿ ಬರುವುದಿಲ್ಲ’ವೆಂದು ಬಿಜೆಪಿ ಕಿಡಿಕಾರಿದೆ.

ಇದನ್ನೂ ಓದಿಹಿಜಾಬ್ ಧರಿಸಿ ಎಸ್ಎಸ್ಎಲ್ ಸಿ ಪರೀಕ್ಷೆಗೆ ಬಂದರೆ ನೋ ಎಂಟ್ರಿ ; ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಜಾರಿ

‘ಹೈಕೋರ್ಟ್ ತೀರ್ಪಿನ ಬಳಿಕ ಹಿಜಾಬ್ ವಿವಾದ(Hijab Row) ತಣ್ಣಗಾಗಿತ್ತು. ಆದರೆ ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಸಿದ್ದರಾಮಯ್ಯ ಈಗ ಏಕಪಾತ್ರಾಭಿನಯ ಆರಂಭಿಸಿದ್ದಾರೆ. ಕೋಮು ಸೌಹಾರ್ದ ಎಂಬುದು ಈ ದೇಶದಲ್ಲಿ‌ ಕನಸಾಗಿ ಉಳಿದಿರುವುದಕ್ಕೆ ಸಿದ್ದರಾಮಯ್ಯ ಅವರಂಥಹ ಅವಕಾಶವಾದಿ ರಾಜಕಾರಣಿಗಳೇ ಕಾರಣ’ವೆಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News