ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಸಿದ್ದರಾಮಯ್ಯರಿಂದ ಏಕಪಾತ್ರಾಭಿನಯ: ಬಿಜೆಪಿ ವ್ಯಂಗ್ಯ
‘ಸ್ವಾಮೀಜಿಗಳ ಶಿರವಸ್ತ್ರದ ಬಗ್ಗೆ ವ್ಯಂಗ್ಯವಾಡುವ ಸಿದ್ದರಾಮಯ್ಯ ಈ ಹಿಂದೆ ವೀರಶೈವ ಲಿಂಗಾಯತ ಸ್ವಾಮೀಜಿಗಳ ಹೆಸರನ್ನು ತಮ್ಮ ಮತ ರಾಜಕಾರಣಕ್ಕೆ ಬಳಸಿಕೊಳ್ಳುವ ವಿಫಲಯತ್ನ ನಡೆಸಿದ್ದರು`
ಬೆಂಗಳೂರು: ಹೈಕೋರ್ಟ್ ತೀರ್ಪಿನ ಬಳಿಕ ಹಿಜಾಬ್ ವಿವಾದ(Karnataka Hijab Row) ತಣ್ಣಗಾಗಿತ್ತು. ಆದರೆ ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಸಿದ್ದರಾಮಯ್ಯ ಈಗ ಏಕಪಾತ್ರಾಭಿನಯ ಆರಂಭಿಸಿದ್ದಾರೆ ಎಂದು ಬಿಜೆಪಿ ವ್ಯಂಗ್ಯವಾಡಿದೆ. #ಹಿಂದೂವಿರೋಧಿಬುರುಡೆರಾಮಯ್ಯ ಹ್ಯಾಶ್ ಟ್ಯಾಗ್ ಬಳಸಿ ಬಿಜೆಪಿ ಶನಿವಾರ ಸರಣಿ ಟ್ವೀಟ್ ಮಾಡಿದ್ದಾರೆ.
‘ನಾನು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ, ಅಗೌರವ ತೋರಿಲ್ಲ. ಅನಗತ್ಯವಾಗಿ ನನ್ನ ಹೇಳಿಕೆಯನ್ನು ತಿರುಚಲಾಗಿದೆ’ ಎಂಬ ಸಿದ್ದರಾಮಯ್ಯ(Siddaramaiah)ರ ಸ್ಪಷ್ಟನೆಗೆ ಬಿಜೆಪಿ ತಿರುಗೇಟು ನೀಡಿದೆ. ‘ಜಟ್ಟಿ ನೆಲಕ್ಕೆ ಬಿದ್ದರೂ ಮೀಸೆ ಮಣ್ಣಾಗಿಲ್ಲ ಎಂಬಂತಿದೆ ಸಿದ್ದರಾಮಯ್ಯರ ಧೋರಣೆ. ಈ ಹಿಂದೆ ಹಲವು ಮಠಾಧೀಶರ ವಿರುದ್ಧ ಅಗೌರವಯುತವಾಗಿ ನಡೆದುಕೊಂಡಿದ್ದ ಸಿದ್ದರಾಮಯ್ಯ(Siddaramaiah)ನವರು ಈಗ ಸ್ವಾಮೀಜಿಗಳ ಮೌನವನ್ನೂ ತಮ್ಮ ರಕ್ಷಣೆಗೆ ಬಳಸಿಕೊಳ್ಳುತ್ತಿದ್ದಾರೆ’ ಎಂದು ಕುಟುಕಿದೆ.
‘ನಾನು ಸ್ವಾಮೀಜಿಗಳಿಗೆ ಅವಮಾನ ಮಾಡಿಲ್ಲ; ನನ್ನ ಹೇಳಿಕೆ ತಿರುಚಲಾಗಿದೆ’
‘ಸ್ವಾಮೀಜಿ(Swamijis)ಗಳ ಶಿರವಸ್ತ್ರದ ಬಗ್ಗೆ ವ್ಯಂಗ್ಯವಾಡುವ ಸಿದ್ದರಾಮಯ್ಯ ಈ ಹಿಂದೆ ವೀರಶೈವ ಲಿಂಗಾಯತ ಸ್ವಾಮೀಜಿಗಳ ಹೆಸರನ್ನು ತಮ್ಮ ಮತ ರಾಜಕಾರಣಕ್ಕೆ ಬಳಸಿಕೊಳ್ಳುವ ವಿಫಲಯತ್ನ ನಡೆಸಿದ್ದರು. ಲಿಂಗಾಯತ ಪ್ರತ್ಯೇಕ ಧರ್ಮ ಸ್ಥಾಪನೆಗೆ ಸ್ವಾಮೀಜಿಗಳೇ ಮನವಿ ನೀಡಿದ್ದರು ಎಂಬ ಸುಳ್ಳು ಹೇಳಿಕೆಯನ್ನು ರಾಜ್ಯದ ಜನ ಮರೆತಿಲ್ಲ’ ಅಂತಾ ಬಿಜೆಪಿ ಟ್ವೀಟ್ ಮಾಡಿದೆ.
ಹಿಜಾಬ್ ಧರಿಸಿ ಎಸ್ಎಸ್ಎಲ್ ಸಿ ಪರೀಕ್ಷೆಗೆ ಬಂದರೆ ನೋ ಎಂಟ್ರಿ ; ಶಿಕ್ಷಣ ಇಲಾಖೆಯಿಂದ ಸುತ್ತೋಲೆ ಜಾರಿ
‘ಹೈಕೋರ್ಟ್ ತೀರ್ಪಿನ ಬಳಿಕ ಹಿಜಾಬ್ ವಿವಾದ(Hijab Row) ತಣ್ಣಗಾಗಿತ್ತು. ಆದರೆ ಹಿಜಾಬ್ ಧರಿಸಲು ಅವಕಾಶ ನೀಡಿ ಎಂದು ಸಿದ್ದರಾಮಯ್ಯ ಈಗ ಏಕಪಾತ್ರಾಭಿನಯ ಆರಂಭಿಸಿದ್ದಾರೆ. ಕೋಮು ಸೌಹಾರ್ದ ಎಂಬುದು ಈ ದೇಶದಲ್ಲಿ ಕನಸಾಗಿ ಉಳಿದಿರುವುದಕ್ಕೆ ಸಿದ್ದರಾಮಯ್ಯ ಅವರಂಥಹ ಅವಕಾಶವಾದಿ ರಾಜಕಾರಣಿಗಳೇ ಕಾರಣ’ವೆಂದು ಬಿಜೆಪಿ ಟೀಕಾಪ್ರಹಾರ ನಡೆಸಿದೆ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.