ಸಖಿಯೆ ಎಂದ ದೀಕ್ಷಿತ್ ಶೆಟ್ಟಿ..’ಬ್ಲಿಂಕ್’ ಸಿನಿಮಾದ ಮೆಲೋಡಿ ಹಾಡು ರಿಲೀಸ್

Blink Movie Song: ಮಿಡಲ್ ಕ್ಲಾಸ್ ಹುಡುಗನ ಜೀವನದಲ್ಲಿ ನಡೆಯುವ ಆಕಸ್ಮಿಕ ಘಟನೆಗಳು ಹೇಗೆ ಆವನ ಸುತ್ತ- ಮುತ್ತಲಿನ ವಾತಾವರಣ ಬದಲಿಸುತ್ತದೆ ಎಂಬುದು ಈ ಕಥೆಯ ಸಾರಾಂಶ.

Written by - Yashaswini V | Last Updated : Oct 13, 2023, 12:23 PM IST
  • ಸೈನ್ಸ್ ಫಿಕ್ಷನ್ ಎಂದರೆ ಒಂದು ಲ್ಯಾಬ್ ಅಥವಾ ಬೇರೆ ಪ್ರಪಂಚದಲ್ಲಿ ನಡೆಯುವ ಕಥೆಯಾಗಿರುತ್ತದೆ.
  • ಬಟ್ ಇದು ಹಾಗಲ್ಲ. ನಮ್ಮಂತಹ ಮಧ್ಯಮ ವರ್ಗದ ನಡುವೆ ಸೈನ್ಸ್ ಫಿಕ್ಷನ್ ಆದರೆ ಏನೆಲ್ಲ ಕಳವಳ ಆಗಬಹುದು..
  • ಏನೆಲ್ಲಾ ಸನ್ನಿವೇಶ ಎದುರಿಸಬಹುದು ಅನ್ನೋದು ಈ ಸಿನಿಮಾದ ಮುಖ್ಯಕಥೆ- ಸಿನಿಮಾ ನಾಯಕ
ಸಖಿಯೆ ಎಂದ ದೀಕ್ಷಿತ್ ಶೆಟ್ಟಿ..’ಬ್ಲಿಂಕ್’ ಸಿನಿಮಾದ ಮೆಲೋಡಿ ಹಾಡು ರಿಲೀಸ್ title=

Blink Movie Song: ಟೀಸರ್ ಮೂಲಕ ನಿರೀಕ್ಷೆ ಹೆಚ್ಚಿಸಿರುವ ಬ್ಲಿಂಕ್ ಸಿನಿಮಾದ ಎರಡನೇ ಹಾಡು ರಿಲೀಸ್ ಆಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ಆಗಂತುಕ ಸಾಂಗ್ ಗೆ ಒಳ್ಳೆ ರೆಸ್ಪಾನ್ಸ್ ಸಿಕ್ಕಿತ್ತು. ಇದೀಗ ಬ್ಲಿಂಕ್ ಅಂಗಳದಿಂದ ಸಖಿಯೆ ಎಂಬ ಮೆಲೋಡಿ ಹಾಡು ಅನಾವರಣಗೊಂಡಿದೆ. ಪ್ರಮೋದ್ ಮರವಂತೆ ಸಾಹಿತ್ಯದ ಗೀತೆಗೆ ಸಿದ್ದಾರ್ಥ್ ಬೆಳ್ಮಣ್ಣು ಧ್ವನಿಯಾಗಿದ್ದು, ಪ್ರಸನ್ನ ಕುಮಾರ್ ಎಂ.ಎಸ್ ಸಾಹಿತ್ಯ ಒದಗಿಸಿದ್ದಾರೆ. ಬೆಂಗಳೂರಿನ ಎಸ್ ಆರ್ ವಿ ಥಿಯೇಟರ್ ನಲ್ಲಿ ಹಾಡು ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಈ ವೇಳೆ ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ. 

ನಿರ್ದೇಶಕ ಶ್ರೀನಿಧಿ ಬೆಂಗಳೂರು ಮಾತನಾಡಿ, ರಂಗಭೂಮಿ ಜೊತೆ ಜೊತೆಯಲಿ ಸಿನಿಮಾ ಮಾಡಬೇಕೆಂಬ ಕನಸು ಇತ್ತು. ಕೋವಿಡ್ ಸಮಯದಲ್ಲಿ ಒಂದಿಷ್ಟು ಸಿನಿಮಾ ನೋಡ್ತಾ ನಾವು ಯಾಕೆ ಈ ರೀತಿ ಸಿನಿಮಾಗಳನ್ನು ಕನ್ನಡದಲ್ಲಿ ಮಾಡಬಾರದೆಂಬ ಯೋಚನೆ ಬಂತು. ಸ್ನೇಹಿತರು ಮತ್ತು ರಂಗಭೂಮಿ ಗೆಳೆಯರಿಂದ ಈ ಸಿನಿಮಾ ತಯಾರಾಗಿದೆ. ಸಿನಿಮಾ ಮಾಡಬೇಕೆಂಬ ಆಲೋಚನೆ ನಮ್ಮದು. ಸಿನಿಮಾ ಆಗಿದ್ದೆಲ್ಲಾ ಪ್ರಕೃತಿ ನಮಗೆ ನೀಡಿದ ಬೆಂಬಲ ಎಂದರು.

ನಾಯಕ ದೀಕ್ಷಿತ್ ಮಾತನಾಡಿ, ಬ್ಲಿಂಕ್ ಸಿನಿಮಾ ಯಾವುದೇ ಒಂದು ಪರ್ಟಿಕ್ಯೂಲರ್ ವಿಷಯ ಎನ್ನುವುದಕ್ಕಿಂತ  ಸೈನ್ಸ್ ಫಿಕ್ಷನ್ ಸಣ್ಣ ಎಳೆ ಇಟ್ಟುಕೊಂಡು ಸಿನಿಮಾ ಮಾಡಲಾಗಿದೆ. ಮನುಷ್ಯತ್ವ, ಮನುಷ್ಯ ಪ್ರೀತಿ ಅನ್ನೋವುದನ್ನು ಸಿನಿಮಾ ತೋರಿಸಿಕೊಡುತ್ತದೆ. ಸೈನ್ಸ್ ಫಿಕ್ಷನ್ ಎಂದರೆ ಒಂದು ಲ್ಯಾಬ್ ಅಥವಾ ಬೇರೆ ಪ್ರಪಂಚದಲ್ಲಿ ನಡೆಯುವ ಕಥೆಯಾಗಿರುತ್ತದೆ. ಬಟ್ ಇದು ಹಾಗಲ್ಲ. ನಮ್ಮಂತಹ ಮಧ್ಯಮ ವರ್ಗದ ನಡುವೆ ಸೈನ್ಸ್ ಫಿಕ್ಷನ್ ಆದರೆ ಏನೆಲ್ಲ ಕಳವಳ ಆಗಬಹುದು.. ಏನೆಲ್ಲಾ ಸನ್ನಿವೇಶ ಎದುರಿಸಬಹುದು ಅನ್ನೋದು ಈ ಸಿನಿಮಾದ ಮುಖ್ಯಕಥೆ ಎಂದು ಹೇಳಿದರು. 

ಇದನ್ನೂ ಓದಿ- Bigg Boss 10 : ಬಿಗ್‌ ಬಾಸ್‌ ನಲ್ಲಿ ಮೊದಲ ವಾರವೇ ಚಿಗುರೊಡೆಯಿತು ಪ್ರೇಮ.!

ನಾಯಕಿ ಮಂದಾರ ಮಾತನಾಡಿ, ನಾನು ಸ್ವಪ್ನ ಎಂಬ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದೇನೆ. ನಮ್ಮ ನಿರ್ದೇಶಕರು ನನಗೆ ಐದಾರು ವರ್ಷಗಳಿಂದ ಪರಿಚಯ. ಅವರೇ ನಾಟಕಗಳನ್ನು ಬರೆದು ನಟಿಸಿ ನಿರ್ದೇಶಿಸುತ್ತಿದ್ದರು. ಅಂದಿನಿಂದ ಅವರು ನನಗೆ ಸ್ನೇಹಿತರು. ಬ್ಲಿಂಕ್ ಸಿನಿಮಾದ ಸ್ಕ್ರೀಪ್ಟ್ ಕೇಳಿದಾಗ ಖುಷಿಯಾಯಿತು. ನಾನು ಮಧ್ಯಮ ವರ್ಗದ ಹುಡುಗಿಯಾಗಿ ಕಾಣಿಸಿಕೊಂಡಿದ್ದೇನೆ. ಸಿನಿಮಾದ ಎಲ್ಲಾ ಹಾಡುಗಳು ಅದ್ಭುತವಾಗಿ ಮೂಡಿಬಂದಿದೆ. ಕನ್ನಡದಲ್ಲಿ ಲೂಸಿಯಾ, ಬೆಲ್ ಬಾಟಂ, ರಂಗಿತರಂಗ ಸಿನಿಮಾಗಳು ಹೇಗೆ ಕ್ರಾಂತಿ ಮಾಡಿದವೋ. ಹಾಗೆಯೇ ಈ ಚಿತ್ರವೂ ಮೈಲಿಗಲ್ಲಾಗಲಿದೆ ಎಂಬ ಭರವಸೆ ಇದೆ ಎಂದರು.

ಜನನಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆಯ ಅಡಿಯಲ್ಲಿ ಮೂಡಿ ಬರ್ತಿರುವ ಬ್ಲಿಂಕ್ ಕನ್ನಡದಲ್ಲಿ ಒಂದು ಹೊಸ ಶೈಲಿಯ ಸಿನಿಮಾ , ವಿನೂತನ ಚಿತ್ರಕಥೆಯ ಈ ಚಿತ್ರ ಕನ್ನಡದ ಮಟ್ಟಿಗೆ ಹೊಸ ಪ್ರಯೋಗ. ಬ್ಲಿಂಕ್ ಸಿನಿಮಾಗೆ ರವಿಚಂದ್ರ ಎ ಜೆ ಬಂಡವಾಳ ಹೂಡಿದ್ದು, ಶ್ರೀನಿಧಿ ಬೆಂಗಳೂರು ಆಕ್ಷನ್ ಕಟ್ ಹೇಳಿದ್ದಾರೆ. ಇದು ಇವರ ಚೊಚ್ಚಲ ಹೆಜ್ಜೆ. 

ಇದನ್ನೂ ಓದಿ- ಮಹೇಶ್ ಬಾಬು ಬೈಸೆಪ್ಸ್ ನೋಡಿ ಶಾಕ್‌ ಆದ ಪತ್ನಿ ನಮ್ರತಾ..! 'ಮಾತೆ ಬರ್ತಿಲ್ಲವಂತೆ'

ಮಿಡಲ್ ಕ್ಲಾಸ್ ಹುಡುಗನ ಜೀವನದಲ್ಲಿ ನಡೆಯುವ ಆಕಸ್ಮಿಕ ಘಟನೆಗಳು ಹೇಗೆ ಆವನ ಸುತ್ತ- ಮುತ್ತಲಿನ ವಾತಾವರಣ ಬದಲಿಸುತ್ತದೆ ಎಂಬುದು ಈ ಕಥೆಯ ಸಾರಾಂಶ. Sci-Fi ಶೈಲಿಯಲ್ಲಿ ಮೂಡಿಬರುತ್ತಿರುವ ಬ್ಲಿಂಕ್ ಚಿತ್ರಕ್ಕೆ ನಾಯಕ ನಟರಾಗಿ ದಿಯಾ ಹಾಗೂ ದಸರಾ ಖ್ಯಾತಿಯ ದೀಕ್ಷಿತ್ ಶೆಟ್ಟಿ ಅಭಿನಯಿಸಿದ್ದಾರೆ. ನಾಯಕಿಯಾರಾಗಿ ಮಂದಾರ ಬಟ್ಟಲಹಳ್ಳಿ ಹಾಗೂ ಚೈತ್ರ ಜೆ ಆಚಾರ್ ನಟಿಸುತ್ತಿದ್ದು, ವಜ್ರಧೀರ್ ಜೈನ್ , ಗೋಪಾಲ ಕೃಷ್ಣದೇಶಪಾಂಡೆ , ಕಿರಣ್ ನಾಯ್ಕ್ ಮತ್ತು ಹಲವಾರು ಕಲಾವಿದರ ತಾರಗಣವಿದ್ದು,  ಅವಿನಾಶ ಶಾಸ್ರ್ತಿ ರವರ ಛಾಯಾಗ್ರಹಣ, ಮತ್ತು  ಸಂಜೀವ್ ಜಾಗಿರ್ದಾರ್ ರವರ ಸಂಕಲನವಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News