Vikrant Rona: ಇಡೀ ಜಗತ್ತೇ ಇಂದು ಕನ್ನಡ ಸಿನಿರಂಗದತ್ತ ತಿರುಗಿ ನೋಡುವ ಕಾಲ ಬಂದಿದೆ. ಕೆಜಿಎಫ್, ಚಾರ್ಲಿ ಇದೀಗ ವಿಕ್ರಾಂತ್ ರೋಣನ ಸರದಿ. ಭುರ್ಜ್ ಖಲೀಫಾದಿಂದ ಶುರುವಾದ ವಿಕ್ರಾಂತ್ ರೋಣನ ಹವಾ ದಿನ ಕಳೆದಂತೆ ಹೆಚ್ಚಾಗುತ್ತಲೇ ಇದೆ. ಇನ್ನೇನು ಕೆಲವೇ ದಿನಗಳಲ್ಲಿ ವಿಕ್ರಾಂತ್ ರೋಣ ಬೆಳ್ಳಿತೆರೆಗೆ ಬರಲಿದೆ. ಈ ಬೆನ್ನಲ್ಲೇ ಚಿತ್ರತಂಡ ಭರ್ಜರಿ ಪ್ರಮೋಷನ್ ಕೂಡ ಆರಂಭಿಸಿದೆ.
ಇದನ್ನೂ ಓದಿ:ಶಾರುಖ್ ಖಾನ್ ಜೊತೆಗಿನ ಲೈಂಗಿಕ ಸಂಬಂಧದ ವದಂತಿಯ ಬಗ್ಗೆ ಕರಣ್ ಜೋಹರ್ ಹೇಳಿದ್ದೇನು?
ಕಿಚ್ಚ ಸುದೀಪ್ ಅಭಿನಯದ ಬಹುನಿರೀಕ್ಷಿತ ಸಿನಿಮಾ ವಿಕ್ರಾಂತ್ ರೋಣ ಈಗಾಗಲೇ ರಿಲೀಸ್ ಆದ ಹಾಡು, ಟ್ರೈಲರ್ ಮೂಲಕ ಸಖತ್ ಸದ್ದು ಮಾಡುತ್ತಿದೆ. ಬಾಲಿವುಡ್, ಟಾಲಿವುಡ್ ಸೇರಿದಂತೆ ಭಾರತ ಸಿನಿರಂಗದ ಖ್ಯಾತ ನಾಮರು ವಿಕ್ರಾಂತ್ ರೋಣನಿಗೆ ಸಾಥ್ ನೀಡಿದ್ದಾರೆ. ಇದೀಗ ಬಾಲಿವುಡ್‌ನ ಬಿಗ್ ಬಿ ಅಮಿತಾಬ್ ಬಚ್ಚನ್ ಕೂಡ ವಿಕ್ರಾಂತ್ ರೋಣನಿಗೆ ಕೈಜೋಡಿಸಿದ್ದಾರೆ.
T 4331 - Kannada star SUDEEP .. a pan india film VIKRANT RONA in 3 D .. releasing in 5 languages on July 28 th https://t.co/fWdBFkmjT7
— Amitabh Bachchan (@SrBachchan) June 27, 2022
ಕನ್ನಡದಲ್ಲಿ ಇತ್ತೀಚೆಗೆ ಬರುತ್ತಿರುವ ಸಿನಿಮಾಗಳು ಹೊಸ ಸೆನ್ಸೆಷನ್ ಕ್ರಿಯೇಟ್ ಮಾಡುತ್ತಿವೆ. 3ಡಿ ಅಲ್ಲಿ ವಿಕ್ರಾಂತ್ ರೋಣ ಸಿನಿಮಾ ರಿಲೀಸ್ ಆಗಲಿದೆ. ಈ ಬಗ್ಗೆ ಟ್ವೀಟ್ ಮಾಡಿರುವ ಬಾಲಿವುಡ್ ಹಿರಿಯ ನಟ ಅಮಿತಾಬ್ ಬಚ್ಚನ್, ವಿಕ್ರಾಂತ್ ರೋಣ ಸಿನಿಮಾದ ಎಲ್ಲ ಭಾಷೆಗಳ ಟ್ರೇಲರ್‌ಗಳನ್ನು ಶೇರ್ ಮಾಡಿದ್ದಾರೆ. "ಕನ್ನಡದ ಸ್ಟಾರ್ ಸುದೀಪ್ ನಟನೆಯ, ಪ್ಯಾನ್ ಇಂಡಿಯಾ ಸಿನಿಮಾ ವಿಕ್ರಾಂತ್ ರೋಣ ಐದು ಭಾಷೆಗಳಲ್ಲಿ ಜುಲೈ 28ರಂದು 3ಡಿಯಲ್ಲಿ ಬಿಡುಗಡೆಯಾಗಲಿದೆ" ಎಂದು ಬರೆದುಕೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಸುದೀಪ್ ಸಹ ಅಮಿತಾಬ್ ಬಚ್ಚನ್ ಅವರಿಗೆ ಧನ್ಯವಾದ ತಿಳಿಸಿದ್ದಾರೆ.
ಇದನ್ನೂ ಓದಿ:"Our baby coming soon.." ತಾಯಿಯಾಗ್ತಿದ್ದಾರೆ ಆಲಿಯಾ ಭಟ್! ಫೋಟೋ ಮೂಲಕ ಸೀಕ್ರೇಟ್ ರಿವೀಲ್
ಅನೂಪ್ ಭಂಡಾರಿ ನಿರ್ದೇಶನದ ಈ ಸಿನಿಮಾ ಮೂಲಕ ಬಾಲಿವುಡ್ ನಟಿ ಜಾಕ್ವೆಲಿನ್ ಫರ್ನಾಂಡಿಸ್ ಸ್ಯಾಂಡಲ್‌ವುಡ್‌ಗೆ ಹೆಜ್ಜೆ ಇಡುತ್ತಿದ್ದಾರೆ. ರಕೇಲ್ ಡಿಕೋಸ್ಟ ಉರ್ಫ್ ಗಡಂಗ್ ರಕ್ಕಮ್ಮನಾಗಿ ತೆರೆ ಮೇಲೆ ಅವರು ಕಾಣಿಸಿಕೊಂಡಿದ್ದಾರೆ. ನಿರೂಪ್ ಭಂಡಾರಿ ಹಾಗೂ ನೀತಾ ಅಶೋಕ್ ಮುಖ್ಯಭೂಮಿಕೆಯಲ್ಲಿ ಕಾಣಿಸಿಕೊಂಡಿದ್ದಾರೆ. ಕನ್ನಡದ ಜೊತೆಗೆ, ಹಿಂದಿ, ತಮಿಳು, ತೆಲುಗು ಹಾಗೂ ಇಂಗ್ಲಿಷ್‌ನಲ್ಲಿ ಸುದೀಪ್ ಅವರೇ ಡಬ್ ಮಾಡಿದ್ದಾರೆ.
Honored @SrBachchan sir... thank you so much .. 🥳🙏🏼🙏🏼 https://t.co/rySSVsQLy0
— Kichcha Sudeepa (@KicchaSudeep) June 27, 2022
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ