Arbaaz Khan Marriage: ಬಾಲಿವುಡ್’ನ ಖ್ಯಾತ ನಟ ಅರ್ಬಾಜ್ ಖಾನ್ ನಟ ಮಾತ್ರವಲ್ಲದೆ ನಿರ್ಮಾಪಕ ಮತ್ತು ನಿರ್ದೇಶಕರೂ ಹೌದು. ಸಹೋದರ ಸಲ್ಮಾನ್ ಖಾನ್ ಅವರಂತೆ ಚಿತ್ರರಂಗದಲ್ಲಿ ಯಶಸ್ಸು ಕಂಡಿಲ್ಲದಿದ್ದರೂ, ಅನೇಕ ಚಿತ್ರಗಳಲ್ಲಿ ಪೋಷಕ ಪಾತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇದರಿಂದಾಗಿ ಅವರು ಸಾಕಷ್ಟು ಪ್ರಶಂಸೆಯನ್ನು ಕೂಡ ಗಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಹಿಜಾಬ್ ನಿಷೇಧ ವಾಪಸ್: ಸಿಎಂ ಸಿದ್ದರಾಮಯ್ಯಗೆ ಧನ್ಯವಾದ ತಿಳಿಸಿದ ಮುಸ್ಕಾನ್


ಇನ್ನು ಅರ್ಬಾಜ್ ಸಿನಿಮಾಗಳ ಹೊರತಾಗಿ, ತನ್ನ ವೈಯಕ್ತಿಕ ಜೀವನದಿಂದ ಹೆಚ್ಚು ಸುದ್ದಿಯಲ್ಲಿರುತ್ತಾರೆ. ಇದೀಗ ನಟ ಶೀಘ್ರದಲ್ಲೇ ವಿವಾಹವಾಗಲು ಸಿದ್ಧರಾಗಿದ್ದಾರೆ ಎಂಬ ಸುದ್ದಿ ಕೇಳಿಬರುತ್ತಿದೆ.


ಬಾಲಿವುಡ್ ನಟ ಮತ್ತು ನಿರ್ಮಾಪಕ ಅರ್ಬಾಜ್ ಖಾನ್ ಮತ್ತೊಮ್ಮೆ ದಾಂಪತ್ಯ ಜೀವನಕ್ಕೆ ಕಾಲಿಡಲು ಸಿದ್ಧರಾಗಿದ್ದಾರೆ. ಮಾಧ್ಯಮ ವರದಿಗಳ ಪ್ರಕಾರ, ಅರ್ಬಾಜ್ ಮೇಕಪ್ ಆರ್ಟಿಸ್ಟ್ ಶುರಾ ಖಾನ್ ಅವರೊಂದಿಗೆ ಡೇಟಿಂಗ್ ಮಾಡುತ್ತಿದ್ದಾರೆ. ಹೀಗಾಗಿ ತಮ್ಮ ಸಂಬಂಧವನ್ನು ಮುಂದಿನ ಹಂತಕ್ಕೆ ಕೊಂಡೊಯ್ಯಲು ಯೋಜಿಸುತ್ತಿದ್ದಾರೆ ಎಂದು ಹೇಳಲಾಗುತ್ತದೆ. ಅಂದಹಾಗೆ ಅರ್ಬಾಜ್ ಈ ಹಿಂದೆ ನಟಿ ಮಲೈಕಾ ಅರೋರಾ ಜೊತೆ ಮದುವೆಯಾಗಿದ್ದರು. ಇವರಿಬ್ಬರಿಗೆ ಒಬ್ಬ ಮಗನಿದ್ದಾನೆ. ಆದ್ರೆ ವಿಚ್ಛೇದನ ಪಡೆದುಕೊಂಡು ಬೇರೆ ಬೇರೆ ವಾಸಿಸುತ್ತಿದ್ದಾರೆ.


ಇನ್ನು ವರದಿಗಳ ಪ್ರಕಾರ, ಡಿಸೆಂಬರ್ 24ರಂದು ಕುಟುಂಬ ಸದಸ್ಯರ ಸಮ್ಮುಖದಲ್ಲಿ ಅರ್ಬಾಜ್ ಮತ್ತು ಶುರಾ ವಿವಾಹವಾಗಲಿದ್ದಾರೆ. ಆದರೆ ಅರ್ಬಾಜ್ ಮತ್ತು ಶೂರಾ ಇಬ್ಬರೂ ತಮ್ಮ ಸಂಬಂಧದ ಬಗ್ಗೆ ಮೌನ ವಹಿಸಿದ್ದಲ್ಲದೆ, ಮದುವೆಯ ಬಗ್ಗೆ ಯಾವುದೇ ಅಧಿಕೃತ ಹೇಳಿಕೆಯನ್ನು ಹಂಚಿಕೊಂಡಿಲ್ಲ.


ಇದನ್ನೂ ಓದಿ:RCBಗೆ ಕಪ್ ಗೆಲ್ಲಲು ಸಹಾಯ ಮಾಡಿ ಎಂದ ಅಭಿಮಾನಿಗೆ ಧೋನಿ ಕೊಟ್ಟ ಉತ್ತರವೇನು ಗೊತ್ತಾ?


ಇನ್ನು ಅರ್ಬಾಜ್’ಗಿಂತ ಶುರಾ 22 ವರ್ಷ ಕಿರಿಯವಳು ಎಂದು ಹೇಳಲಾಗುತ್ತಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.