ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು

ನ್ಯೂಮೋನಿಯಾದಿಂದ ಬಳಲುತ್ತಿರುವ ದಿಲೀಪ್ ಕುಮಾರ್

Last Updated : Oct 8, 2018, 06:34 PM IST
ಖ್ಯಾತ ಬಾಲಿವುಡ್ ನಟ ದಿಲೀಪ್ ಕುಮಾರ್ ಆಸ್ಪತ್ರೆಗೆ ದಾಖಲು title=

ಮುಂಬೈ : ಬಾಲಿವುಡ್​ನ ಹಿರಿಯ ನಟ ದಿಲೀಪ್ ಕುಮಾರ್ ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು ಮುಂಬೈನ ಲೀಲಾವತಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಸೋಮವಾರ ತಿಳಿದುಬಂದಿದೆ. 

ನ್ಯೂಮೋನಿಯಾದಿಂದ ಬಳಲುತ್ತಿರುವ ದಿಲೀಪ್ ಕುಮಾರ್ ಅವರಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಅವರ ಕುಟುಂಬ ಮಿತ್ರರಾಗಿರುವ ಫೈಸಲ್‌ ಫಾರೂಕಿ ಅವರು ಟ್ವಿಟರ್‌ನಲ್ಲಿ ತಿಳಿಸಿದ್ದಾರೆ. 

ಈ ಹಿಂದೆ ಕೂಡ ನಿಮೋನಿಯಾದಿಂದಾಗಿ ದಿಲೀಪ್ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ದಿಲೀಪ್‌ ಕುಮಾರ್‌ ಅವರಿಗೆ ಪದೇ ಪದೇ ನ್ಯೂಮೋನಿಯಾ ಕಾಡುತ್ತಿದೆ. ಈಚೆಗಷ್ಟೇ ಅವರು ಗುಣಮುಖರಾಗಿ ಮನೆಗೆ ಮರಳಿದ್ದರು. ಇದೀಗ ಪುನಃ ಅದೇ ತೊಂದರೆ ಕಾಣಿಸಿಕೊಂಡಿದೆ. ವೈದ್ಯರ ಚಿಕಿತ್ಸೆಯಿಂದ ಅವರು ಶೀಘ್ರ ಗುಣಮುಖರಾಗುತ್ತಾರೆ ಎಂದು ಅವರ ಪತ್ನಿ ಹೇಳಿದ್ದಾರೆ. 

 

ಈ ಖ್ಯಾತ ನಟನಿಗೆ 1994ರಲ್ಲಿ ದಾದಾ ಸಾಹೇಬ್ ಪಾಲ್ಕೆ, 2015ರಲ್ಲಿ ಪದ್ಮಭೂಷಣ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ದಿಲೀಪ್ ಕುಮಾರ್ 1998ರಲ್ಲಿ ಕೊನೆಯಬಾರಿಗೆ ಚಲನಚಿತ್ರದಲ್ಲಿ ನಟಿಸಿದ್ದರು.

Trending News