'ಕಬ್ಜ' ಮೇಲೆ ಬಾಲಿವುಡ್‌ ಕಣ್ಣು : ಉಪ್ಪಿ, ಕಿಚ್ಚನ ಸಿನಿಮಾಗೆ ಹಿಂದಿ ಮಂದಿ ವೆಟಿಂಗ್‌ ..!

ಕನ್ನಡ ಚಿತ್ರಗಳು ಈ ವರ್ಷ ರಾಷ್ಟ್ರಮಟ್ಟದಲ್ಲಿ ದೊಡ್ಡ ಹೆಸರು ಮಾಡಿವೆ. 'ಕೆಜಿಎಫ್​ 2' ಮತ್ತು 'ಕಾಂತಾರ' ಚಿತ್ರಗಳು ಬಾಲಿವುಡ್​ ಚಿತ್ರಗಳ ಗಳಿಕೆಯನ್ನೂ ಮೀರಿಸಿ ಹೊಸ ದಾಖಲೆಯನ್ನು ನಿರ್ಮಿಸಿವೆ. ಈ ಎರಡು ಚಿತ್ರಗಳ ನಂತರ ಬಾಲಿವುಡ್​ನ ಕಣ್ಣು ಇದೀಗ ಉಪೇಂದ್ರ ಮತ್ತು ಸುದೀಪ್​ ಅಭಿನಯದ ಅದ್ಧೂರಿ ಚಿತ್ರ 'ಕಬ್ಜ' ಮೇಲೆ ಬಿದ್ದಿದೆ.

Written by - YASHODHA POOJARI | Edited by - Krishna N K | Last Updated : Nov 4, 2022, 06:57 PM IST
  • ಕನ್ನಡ ಚಿತ್ರಗಳು ಈ ವರ್ಷ ರಾಷ್ಟ್ರಮಟ್ಟದಲ್ಲಿ ದೊಡ್ಡ ಹೆಸರು ಮಾಡಿವೆ
  • ಬಾಲಿವುಡ್‌ ಮಂದಿ ಕಣ್ಣು ಇದೀಗ ಉಪೇಂದ್ರ ಮತ್ತು ಸುದೀಪ್​ ಅಭಿನಯದ 'ಕಬ್ಜ' ಚಿತ್ರದ ಮೇಲೆ ಬಿದ್ದಿದೆ
  • ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ
'ಕಬ್ಜ' ಮೇಲೆ ಬಾಲಿವುಡ್‌ ಕಣ್ಣು : ಉಪ್ಪಿ, ಕಿಚ್ಚನ ಸಿನಿಮಾಗೆ ಹಿಂದಿ ಮಂದಿ ವೆಟಿಂಗ್‌ ..! title=

ಬೆಂಗಳೂರು : ಕನ್ನಡ ಚಿತ್ರಗಳು ಈ ವರ್ಷ ರಾಷ್ಟ್ರಮಟ್ಟದಲ್ಲಿ ದೊಡ್ಡ ಹೆಸರು ಮಾಡಿವೆ. 'ಕೆಜಿಎಫ್​ 2' ಮತ್ತು 'ಕಾಂತಾರ' ಚಿತ್ರಗಳು ಬಾಲಿವುಡ್​ ಚಿತ್ರಗಳ ಗಳಿಕೆಯನ್ನೂ ಮೀರಿಸಿ ಹೊಸ ದಾಖಲೆಯನ್ನು ನಿರ್ಮಿಸಿವೆ. ಈ ಎರಡು ಚಿತ್ರಗಳ ನಂತರ ಬಾಲಿವುಡ್​ನ ಕಣ್ಣು ಇದೀಗ ಉಪೇಂದ್ರ ಮತ್ತು ಸುದೀಪ್​ ಅಭಿನಯದ ಅದ್ಧೂರಿ ಚಿತ್ರ 'ಕಬ್ಜ' ಮೇಲೆ ಬಿದ್ದಿದೆ.

ಶ್ರೀ ಸಿದ್ಧೇಶ್ವರ ಎಂಟರ್​ಪ್ರೈಸಸ್​ ನಿರ್ಮಿಸಿರುವ 'ಕಬ್ಜ' ಚಿತ್ರದ ಚಿತ್ರೀಕರಣ ಮುಗಿದು, ಇತ್ತೀಚೆಗೆ ಟೀಸರ್​ ಸಹ ಬಿಡುಗಡೆಯಾಗಿದೆ. ಟೀಸರ್​ಗೆ ಎಲ್ಲಡೆಯಿಂದ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗಿದ್ದು, ಚಿತ್ರದ ಬಿಡುಗಡೆಗೆ ಪ್ರೇಕ್ಷಕರು ಕಾತುರದಿಂದ ಕಾಯುತ್ತಿದ್ದಾರೆ. ಬರೀ ಪ್ರೇಕ್ಷಕರಷ್ಟೇ ಅಲ್ಲ, ಬೇರೆ ಚಿತ್ರರಂಗಗಳು ಸಹ ಈ ಚಿತ್ರವನ್ನು ಎದುರು ನೋಡುತ್ತಿದ್ದು, ಇತ್ತೀಚೆಗೆ ಇದೇ ವಿಚಾರವಾಗಿ ಬಾಲಿವುಡ್​ನ ಖ್ಯಾತ ಸಿನಿಮಾ ವಿಶ್ಲೇಷಕ ತರಣ್​ ಆದರ್ಶ್​ ಸೋಷಿಯಲ್​ ಮೀಡಿಯಾದಲ್ಲಿ ಪೋಸ್ಟರ್​ ಹಂಚಿಕೊಳ್ಳುವುದರ ಜತೆಗೆ ಚಿತ್ರದ ಬಿಡುಗಡೆ ದಿನಾಂಕಕ್ಕೆ ಎದುರು ನೋಡುತ್ತಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: ಉಸಿರುಗಟ್ಟಿಸುತ್ತಿದೆ ಜಾನ್ವಿ ಉಟ್ಟ ಬಟ್ಟೆ : ಚಳಿ, ಮಳೆಯ ನಡುವೆಯೂ ಹೆಚ್ಚಾಯ್ತು ಸೆಕೆ..!

ಇದಕ್ಕೆ ಪೂರಕವಾಗಿ ಚಿತ್ರತಂಡದವರು ಇನ್ನಷ್ಟೇ ಚಿತ್ರದ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಣೆ ಮಾಡಬೇಕಿದೆ. ಆರ್​. ಚಂದ್ರು ನಿರ್ದೇಶನದ 'ಕಬ್ಜ' ಚಿತ್ರವು ಪ್ಯಾನ್​ ಇಂಡಿಯಾ ಚಿತ್ರವಾಗಿದ್ದು ಏಳು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ. ಉಪೇಂದ್ರ ಜತೆಗೆಸುದೀಪ್​ ಸಹ ಒಂದು ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಶ್ರೀಯಾ ಶರಣ್​, ನವಾಬ್​ ಷಾ, ಕಬೀರ್​ ಸಿಂಗ್​ ದುಹಾನ್​, ಪ್ರಮೋದ್​ ಶೆಟ್ಟಿ, ಮುರಳಿ ಶರ್ಮ ಮುಂತಾದವರು ಅಭಿನಯಿಸಿದ್ದಾರೆ. 'ಕೆಜಿಎಫ್​' ಖ್ಯಾತಿಯ ಸಂಗೀತ ನಿರ್ದೇಶಕ ರವಿ ಬಸ್ರೂರು ಈ ಚಿತ್ರಕ್ಕೆ ಸಂಗೀತ ಸಂಯೋಜಿಸಿದ್ದಾರೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News