ದಕ್ಷಿಣ ಸಿನಿರಂಗಕ್ಕೆ ಎಂಟ್ರಿಕೊಟ್ಟ ಬಾಲಿವುಡ್ ಸ್ಟಾರ್: ಗೂಢಾಚಾರಿ-2 ತಂಡ ಸೇರಿದ ಇಮ್ರಾನ್ ಹಶ್ಮಿ

Goodachari 2 Movie Updates: ಗೂಢಚಾರಿ 2 ಸಿನಿಮಾದಲ್ಲಿ ಬಾಲಿವುಡ್ ಖ್ಯಾತ ನಟ ಇಮ್ರಾನ್ ಹಶ್ಮಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಟೈಗರ್ 3 ಸಿನಿಮಾ ಮೂಲಕ ಪ್ರೇಕ್ಷಕರಿಂದ ಚಪ್ಪಾಳೆ ಪಡೆದಿರುವ ನಟ ಟಾಲಿವುಡ್’ನತ್ತ ಹೆಜ್ಜೆ ಇಟ್ಟಿದ್ದಾರೆ.

Written by - YASHODHA POOJARI | Edited by - Bhavishya Shetty | Last Updated : Feb 17, 2024, 01:11 PM IST
    • ಟಾಲಿವುಡ್’ನಲ್ಲಿ ನೂತನ ದಾಖಲೆ ಮಾಡಿದ ಸೂಪರ್ ಹಿಟ್ ಚಿತ್ರ ಗೂಢಚಾರಿ
    • ಅಡಿವಿ ಶೇಷ್ ಅವರ ಅಭಿನಯದಲ್ಲಿ ಮೂಡಿಬಂದ ಆ್ಯಕ್ಷನ್-ಥ್ರಿಲ್ಲರ್ ಸಿನಿಮಾ
    • ಇದೀಗ ಗೂಢಚಾರಿ 2 ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್
ದಕ್ಷಿಣ ಸಿನಿರಂಗಕ್ಕೆ ಎಂಟ್ರಿಕೊಟ್ಟ ಬಾಲಿವುಡ್ ಸ್ಟಾರ್: ಗೂಢಾಚಾರಿ-2 ತಂಡ ಸೇರಿದ ಇಮ್ರಾನ್ ಹಶ್ಮಿ title=
Emraan Hashmi in Goodachari-2

Goodachari 2 Movie Updates: ಟಾಲಿವುಡ್’ನಲ್ಲಿ ನೂತನ ದಾಖಲೆ ಮಾಡಿದ ಸೂಪರ್ ಹಿಟ್ ಚಿತ್ರ ಗೂಢಚಾರಿ ಬಗ್ಗೆ ಹೊಸದಾಗಿ ಹೇಳಬೇಕಾಗಿಲ್ಲ. ಅಡಿವಿ ಶೇಷ್ ಅವರ ಅಭಿನಯದಲ್ಲಿ ಮೂಡಿಬಂದ ಆ್ಯಕ್ಷನ್-ಥ್ರಿಲ್ಲರ್ ಶೈಲಿಯ ಆ ಸಿನಿಮಾ ಗಲ್ಲಾಪೆಟ್ಟಿಗೆಯಲ್ಲಿ ಭರ್ಜರಿ ಕಲೆಕ್ಷನ್ ಮಾಡಿತ್ತು. ಈಗ ಈ ಸಿನಿಮಾಗೆ ಸೀಕ್ವೆಲ್ ಸಿದ್ಧವಾಗುತ್ತಿರುವುದು ಕೂಡ ಗೊತ್ತಿದೆ. ಗೂಢಚಾರಿ 2 ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಈಗಾಗಲೇ ರಿಲೀಸ್ ಆಗಿ ಸಖತ್ ಸದ್ದು ಮಾಡಿದೆ. ಇದೀಗ ಗೂಢಚಾರಿ ಸೀಕ್ವೆಲ್’ಗೆ ಬಾಲಿವುಡ್ ಸ್ಟಾರ್ ಎಂಟ್ರಿಯಾಗಿದ್ದಾರೆ.

ಇದನ್ನೂ ಓದಿ: ಶ್ರೀಸಿದ್ದಿವಿನಾಯಕನ ಸನ್ನಿಧಿಯಲ್ಲಿ ʻಜನʼ ಚಿತ್ರಕ್ಕೆ ಚಾಲನೆ

ಗೂಢಚಾರಿ 2 ಸಿನಿಮಾದಲ್ಲಿ ಬಾಲಿವುಡ್ ಖ್ಯಾತ ನಟ ಇಮ್ರಾನ್ ಹಶ್ಮಿ ನಟಿಸುತ್ತಿದ್ದಾರೆ. ಇತ್ತೀಚೆಗಷ್ಟೇ ಟೈಗರ್ 3 ಸಿನಿಮಾ ಮೂಲಕ ಪ್ರೇಕ್ಷಕರಿಂದ ಚಪ್ಪಾಳೆ ಪಡೆದಿರುವ ನಟ ಟಾಲಿವುಡ್’ನತ್ತ ಹೆಜ್ಜೆ ಇಟ್ಟಿದ್ದಾರೆ. ಗೂಢಚಾರಿ ಬಳಗ ಇಮ್ರಾನ್ ಫಸ್ಟ್ ಲುಕ್ ರಿಲೀಸ್ ಮಾಡಿ ಅವರನ್ನು ಸ್ವಾಗತಿಸಿದೆ. ಆದ್ರೆ ಯಾವ ಪಾತ್ರದಲ್ಲಿ ಇಮ್ರಾನ್ ನಟಿಸುತ್ತಿದ್ದಾರೆ ಎಂಬ ಕುತೂಹಲವನ್ನು ಹಾಗೇ ಉಳಿಸಿಕೊಂಡಿದೆ.

‘ಗೂಢಚಾರಿ 2’ ಸಿನಿಮಾ ಪ್ಯಾನ್ ಇಂಡಿಯಾ ಪ್ರಾಜೆಕ್ಟ್ ಆಗಿದ್ದು, ದೊಡ್ಡ ಬಜೆಟ್’ನಲ್ಲಿ ನಿರ್ಮಾಣ ಆಗುತ್ತಿದೆ. ಅಡಿವಿ ಶೇಷ್ ಅಭಿನಯಿಸಿದ್ದ ‘ಮೇಜರ್’ ಚಿತ್ರಕ್ಕೆ ಸಂಕಲನಕಾರ ಆಗಿದ್ದ ವಿನಯ್ ಕುಮಾರ್ ಸಿರಿಗಿನೀದಿ ಅವರು ‘ಗೂಢಚಾರಿ 2’ ಮೂಲಕ ನಿರ್ದೇಶಕನಾಗಿ ಬಡ್ತಿ ಪಡೆಯುತ್ತಿದ್ದಾರೆ.

ಇದನ್ನೂ ಓದಿ: ಮಿತಿಮೀರಿ ಕೋಪ ಬರುತ್ತಾ? ಹಾಗಾದ್ರೆ ಈ ಟಿಪ್ಸ್ ಫಾಲೋ ಮಾಡಿ ಐದೇ ನಿಮಿಷದಲ್ಲಿ ಶಾಂತವಾಗುತ್ತೀರಿ

‘ಗೂಢಚಾರಿ 2’ ಚಿತ್ರಕ್ಕೆ ಅಡಿವಿ ಶೇಷ್ ಅವರೇ ಕಥೆ ಬರೆದಿದ್ದಾರೆ. ಕಾರ್ತೀಕೇಯ 2, ಮೇಜರ್ ಮತ್ತು ದಿ ಕಾಶ್ಮೀರ್ ಫೈಲ್ಸ್ ರೀತಿಯ ಸೂಪರ್ ಹಿಟ್ ಚಿತ್ರಗಳನ್ನು ನಿರ್ಮಾಣ ಮಾಡಿರುವ ನಿರ್ಮಾಣ ಸಂಸ್ಥೆಗಳು ಗೂಢಚಾರಿ 2 ಚಿತ್ರಕ್ಕೆ ಬಂಡವಾಳ ಹೂಡುತ್ತಿವೆ. ಪೀಪಲ್ ಮೀಡಿಯಾ ಫ್ಯಾಕ್ಟರಿ, ಅಭಿಷೇಕ್ ಅಗರ್ವಾಲ್ ಆರ್ಟ್ಸ್ ಹಾಗೂ ಎ.ಕೆ. ಎಂಟರ್ಟೇನ್ಮೆಂಟ್ ಇಂಡಿಯಾ ಪ್ರೈವೆಟ್ ಲಿಮಿಟೆಡ್ ಬ್ಯಾನರ್ ಮೂಲಕ ಟಿ.ಜಿ ವಿಶ್ವಪ್ರಸಾದ್ ಹಾಗೂ ಅಭಿಷೇಕ್ ಅಗರ್ವಾಲ್ ಅವರು ಜೊತೆಯಾಗಿ ಗೂಢಚಾರಿ 2 ಸಿನಿಮಾಗೆ ಬಂಡವಾಳ ಹೂಡಿದ್ದಾರೆ. ಬನಿತಾ ಸಂಧು ಅಡಿವಿ ಶೇಷ್ ಗೆ ಜೋಡಿಯಾಗಿ ನಟಿಸುತ್ತಿದ್ದಾರೆ.

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News