ಸ್ಯಾಂಡಲ್ ವುಡ್ ಅಂಗಳದ ಪ್ರತಿಭಾನ್ವಿತ ನಟ ಪ್ರಮೋದ್ ನಟನೆಯ ಬಹು ನಿರೀಕ್ಷಿತ ಚಿತ್ರ ಬಾಂಡ್ ರವಿ. ಟೀಸರ್ ಮೂಲಕ ಎಲ್ಲರಿಂದ ಉತ್ತಮ ರೆಸ್ಪಾನ್ಸ್ ಪಡೆದುಕೊಂಡಿರುವ ಈ ಚಿತ್ರದ ಮೇಲೆ ಸಿನಿರಸಿಕರು ಅಪಾರ ನಿರೀಕ್ಷೆ ಇಟ್ಟುಕೊಂಡಿದ್ದಾರೆ. ಸಿನಿಮಾ ಕೆಲಸ ಮುಗಿಸಿ ಬಿಡುಗಡೆಗೆ ಎದುರು ನೋಡುತ್ತಿರುವ ಚಿತ್ರತಂಡ ಚಿತ್ರದ ಮೊದಲ ಸಾಂಗ್ ಬಿಡುಗಡೆ ಮಾಡಿದೆ. 


COMMERCIAL BREAK
SCROLL TO CONTINUE READING

ವಿ.ನಾಗೇಂದ್ರ ಪ್ರಸಾದ್ ಸಾಹಿತ್ಯದಲ್ಲಿ ಅರಳಿರುವ 'ಮಜಾ ಮಜಾ ಮಾಡು ಬಾ' ಹಾಡಿಗೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ದನಿಯಾಗಿದ್ದು, ಮನೋಮೂರ್ತಿ ಸಂಗೀತ ಹಾಡಿಗಿದೆ. ಜೋಶ್ ಜೊತೆಗೆ ಒಂದೊಳ್ಳೆ ಮೋರಲ್ ಇರುವ ಸಾಂಗ್ ಇದಾಗಿದೆ. ಜೈಲಿನಲ್ಲಿ ನಡೆಯುವ ಸಾಂಗ್ ಇದಾಗಿದ್ದು ಜೈಲಿನಲ್ಲಿರುವ ಅಪರಾಧಿಗಳಿಗೆ ಧೈರ್ಯ ತುಂಬುವ ಈ ಸಾಂಗ್ ಗೆ ಸಖತ್ ಜೋಶ್ ನಲ್ಲಿ ಎಲ್ಲರೊಂದಿಗೆ ನಾಯಕ ಪ್ರಮೋದ್ ಹೆಜ್ಜೆ ಹಾಕಿದ್ದಾರೆ.  


ಇದನ್ನೂ ಓದಿ: Bangalore Police : ಚಿಲುಮೆ ಕಚೇರಿ ಮೇಲೆ‌ ಪೊಲೀಸರ ದಾಳಿ: ನಾಲ್ವರು ವಶಕ್ಕೆ


 ‘ಗೀತಾ ಬ್ಯಾಂಗಲ್ ಸ್ಟೋರ್' ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ನಾಯಕ ನಟನಾಗಿ ಎಂಟ್ರಿ ಕೊಟ್ಟ ಪ್ರಮೋದ್ ‘ಮತ್ತೆ ಉದ್ಭವ', ‘ಪ್ರೀಮಿಯರ್ ಪದ್ಮಿನಿ' ಹಾಗೂ ‘ರತ್ನನ್ ಪ್ರಪಂಚ’ ಸಿನಿಮಾಗಳಲ್ಲಿ ಅಭಿನಯಿಸಿದ್ದಾರೆ. 'ಬಾಂಡ್ ರವಿ' ಮೂಲಕ ಮಾಸ್ ಅವತಾರದಲ್ಲಿ ತೆರೆ ಮೇಲೆ ಮಿಂಚಲು ಸಜ್ಜಾಗಿದ್ದಾರೆ.   


'ಬಾಂಡ್ ರವಿ' ಆಕ್ಷನ್ ಲವ್ ಸ್ಟೋರಿ ಸಿನಿಮಾ. ಯುವ ಪ್ರತಿಭೆ ಪ್ರಜ್ವಲ್ ಎಸ್.ಪಿ ಈ ಚಿತ್ರದ ಮೂಲಕ ಡೈರೆಕ್ಟರ್ ಕ್ಯಾಪ್ ತೊಟ್ಟಿದ್ದಾರೆ.  ನರಸಿಂಹಮೂರ್ತಿ.ವಿ  ಲೈಫ್ ಲೈನ್ ಫಿಲಂ ಬ್ಯಾನರ್ ನಡಿ ಚಿತ್ರಕ್ಕೆ ಬಂಡವಾಳ ಹೂಡಿದ್ದು, ಮಲ್ಲಿಕಾರ್ಜುನ್ ಕಾಶಿ ಹಾಗೂ ಝೇವಿಯರ್ ಫರ್ನಾಂಡಿಸ್ ಸಹ ನಿರ್ಮಾಣ ಚಿತ್ರಕ್ಕಿದೆ. 


ಇದನ್ನೂ ಓದಿ- ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಅವಶ್ಯವಾಗಿ ತಿನ್ನಿಸಬೇಕು ಈ ಐದು ಸೂಪರ್‌ಫುಡ್‌


ಚಿತ್ರದಲ್ಲಿ ಕಾಜಲ್ ಕುಂದರ್ ನಾಯಕಿಯಾಗಿ ನಟಿಸಿದ್ದು, ರವಿಕಾಳೆ, ಧರ್ಮ, ವಿಜಯ್ ಚೆಂಡೂರ್, ಶೋಭರಾಜ್, ಗೋವಿಂದೇ ಗೌಡ.‌ ಹಂಸ, ಮಿಮಿಕ್ರಿ ಗೋಪಿ, ಪವನ್, ಕಾಮಿಡಿ ಕಿಲಾಡಿ ಸಂತೋಷ್, ರವಿಪ್ರಕಾಶ್ ಚಿತ್ರದ ತಾರಾ ಬಳಗದಲ್ಲಿದ್ದಾರೆ. ಕೆ.ಎಸ್. ಚಂದ್ರಶೇಖರ್ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಸುನೀಲ್ ಮತ್ತು ದೇವ್ ಎನ್ ರಾಜ್ ಸಂಭಾಷಣೆ, ಬಿ. ಧನಂಜಯ ನೃತ್ಯ ನಿರ್ದೇಶನ, ಮನೋಮೂರ್ತಿ ಸಂಗೀತ ನಿರ್ದೇಶನ ಚಿತ್ರಕ್ಕಿದೆ. ಡಿಸೆಂಬರ್ ನಲ್ಲಿ ಸಿನಿಮಾ ತೆರೆಗೆ ತರಲು ಚಿತ್ರತಂಡ ಪ್ಲ್ಯಾನ್ ಮಾಡಿಕೊಂಡಿದ್ದು, ಸದ್ಯದಲ್ಲೇ ರಿಲೀಸ್ ಡೇಟ್ ಅನೌನ್ಸ್ ಮಾಡಲಿದೆ ಚಿತ್ರತಂಡ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.