Sandalwood Updates: ಕನ್ನಡದಲ್ಲಿ ‌ಸದ್ದಿಲ್ಲದೇ ಮತ್ತೊಂದು ಮಲ್ಟಿ ಸ್ಟಾರ್ ಸಿನಿಮಾ ರೂಪಗೊಳ್ಳುತ್ತಿದೆ. ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಕಾಂಬೋದಲ್ಲಿ ಹೊಸ ಚಿತ್ರವೊಂದು ತಯಾರಾಗುತ್ತಿದೆ. ಈ ನಾಲ್ಕು ಜನ ತಾರೆಯರನ್ನು ಒಂದೇ ಫ್ರೇಮ್’ಗೆ ತಂದು ಆಕ್ಷನ್ ಕಟ್ ಹೇಳುತ್ತಿರುವುದು ಡಬ್ಬಲ್ ಇಂಜಿನ್, ಬ್ರಹ್ಮಚಾರಿ ಸಿನಿಮಾಗಳ‌ ಸಾರಥಿ ಚಂದ್ರ ಮೋಹನ್.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಎರಡನೇ ಮದುವೆಯಾಗಲು ಹೊರಟ ಮಲೈಕಾಗೆ ಮಗನಿಂದಲೇ ಈ ಪ್ರಶ್ನೆ ! ಉತ್ತರಿಸಲು ತಬ್ಬಿಬ್ಬಾದ ನಟಿ


ಚಂದ್ರಮೋಹನ್ ಹೊಸ ಪ್ರಯತ್ನಕ್ಕೆ ಫಾರೆಸ್ಟ್ ಎಂಬ ಕ್ಯಾಚಿ ಟೈಟಲ್ ಇಡಲಾಗಿದೆ. ಟೈಟಲ್ ಹೇಳುವಂತೆ ಫಾರೆಸ್ಟ್ ಅಡ್ವೆಂಚರ್‌ ಕಾಮಿಡಿ ಸಿನಿಮಾ. ಚಿತ್ರ 80%ರಷ್ಟು ಭಾಗ ಕಾಡಿನಲ್ಲಿಯೇ ಸಾಗುತ್ತದೆ.


ಚಿಕ್ಕಣ್ಣ, ಅನೀಶ್, ಗುರುನಂದನ್ ಹಾಗೂ ರಂಗಾಯಣ ರಘು ನಾಲ್ಕು ತಾರೆಯರು ಫಾರೆಸ್ಟ್ ಸಿನಿಮಾದ ಆಧಾರ ಸ್ತಂಭಗಳು. ಫನ್ ಜೊತೆಗೆ ಥ್ರಿಲ್ಲಿಂಗ್ ರೈಡ್ ಅನುಭವ ನೀಡುವ ಫಾರೆಸ್ಟ್ ಚಿತ್ರಕ್ಕೆ ಎನ್ಎಂಕೆ ಸಿನಿಮಾಸ್ ಬ್ಯಾನರ್ ನಡಿ ಕಾಂತರಾಜು ಬಂಡವಾಳ ಹೂಡುತ್ತಿದ್ದಾರೆ. ಅಂದಹಾಗೇ ಕಾಂತರಾಜು ಅವರಿಗಿದು ಚೊಚ್ಚಲ ಚಿತ್ರ. ಸಿನಿಮಾರಂಗದ ಮೇಲಿನ ಆಸಕ್ತಿಯಿಂದ ಫಾರೆಸ್ಟ್ ಮೂಲಕ ನಿರ್ಮಾಪಕರಾಗಿ ಮೊದಲ ಹೆಜ್ಜೆ ಇಡುತ್ತಿದ್ದಾರೆ.


ಇದನ್ನೂ ಓದಿ:  ಎಳನೀರಿಗೆ ಅರ್ಧ ಚಮಚ ಇದನ್ನು ಸೇರಿಸಿ ಕುಡಿಯಿರಿ: ದೇಹದಲ್ಲಿ ಸಂಗ್ರಹವಾದ ಕಠಿಣ ಬೊಜ್ಜು 5 ದಿನದಲ್ಲಿ ಕರಗಿ ಹೀರೋಯಿನ್ ಥರ ಸ್ಲಿಮ್ ಆಗ್ತೀರಿ!


ಫಾರೆಸ್ಟ್ ಸಿನಿಮಾಗೆ ವಿ. ರವಿಶಂಕರ್  ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ, ಧರ್ಮವೀರ್-ವೀರ್ ಸಮರ್ಥ್ ಸಂಗೀತ ನಿರ್ದೇಶನವಿದೆ. ಸದ್ಯ ಟೈಟಲ್ ರಿವೀಲ್ ಮಾಡಿರುವ ಚಿತ್ರತಂಡವೀಗ ಮುಂದಿನ ದಿನಗಳಲ್ಲಿ ಉಳಿದ ತಾರಾಬಳಗದ ಮಾಹಿತಿ ನೀಡಲಿದೆ.


 


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.