Burma New Poster Release On Raksh Birthday: ಗಟ್ಟಿಮೇಳ ಸೀರಿಯಲ್ ಮೂಲಕ ಕರುನಾಡ ಮನ-ಮನೆ ಗೆದ್ದಿರುವ ನಟ ರಕ್ಷ್ ರಾಮ್ ಇಂದು ಹುಟ್ಟುಹಬ್ಬದ ಸಂಭ್ರಮದಲ್ಲಿ ಇದ್ದು, ಇದರ ವಿಶೇಷವಾಗಿ ಬರ್ಮ ಚಿತ್ರತಂಡ ಹೊಸ ಪೋಸ್ಟರ್ ಉಡುಗೊರೆಯಾಗಿ ನೀಡಿದೆ. ಕಿರುತೆರೆ ನಟ ರಕ್ಷ್ ಬರ್ತ್ ಡೇ ಅಂಗವಾಗಿ, ಈ ನಟ ಅಭಿನಯಿಸುತ್ತಿರುವ ಬಹು ನಿರೀಕ್ಷಿತ ಚಿತ್ರ ಬರ್ಮ ನಯಾ ಲುಕ್ ಅನಾವರಣ ಮಾಡಿ, ಚಿತ್ರತಂಡ ಶುಭಾಶಯ ಕೋರಿದೆ‌.


COMMERCIAL BREAK
SCROLL TO CONTINUE READING

ಬರ್ಮ ಹೊಸ ಪೋಸ್ಟರ್  ಸಖತ್ ಇಂಪ್ರೆಸಿವ್ ಆಗಿದ್ದು, ಕೈಯಲ್ಲಿ ಕೊಡಲಿ ಹಿಡಿದು, ರಕ್ತಸಿಕ್ತ ಅವತಾರದಲ್ಲಿ ಮಾಸ್ ಗೆಟಪ್ ನಲ್ಲಿ ರಕ್ಷ್ ರಾಮ್ ಪ್ರತ್ಯಕ್ಷರಾಗಿದ್ದಾರೆ. ಅಂದಹಾಗೇ ಬರ್ಮ ಪಕ್ಕಾ ಆಕ್ಷನ್ ಎಂಟರ್‌ಟೈನರ್ ಸಿನಿಮಾವಾಗಿದ್ದು, ಈ ಮೂಲಕ ಕಿರುತೆರೆ ನಟ ರಕ್ಷ್ ಪ್ಯಾನ್ ಇಂಡಿಯಾ ಸ್ಟಾರ್ ಎಮರ್ಜ್ ಆಗಿದ್ದಾರೆ. ಈ ಚಿತ್ರದಲ್ಲಿ ನಾಯಕನಾಗಿ ಬಣ್ಣ ಹೆಚ್ಚಿರುವ ರಕ್ಷ್ ರಾಮ್, ನಿರ್ಮಾಣದ ಜವಾಬ್ದಾರಿ ಕೂಡ ಹೊತ್ತುಕೊಂಡಿದ್ದಾರೆ. 


 

 

 

 



 

 

 

 

 

 

 

 

 

 

 

A post shared by Rakksh (@rakkshofficial)


ಇದನ್ನೂ ಓದಿ: Megastar Chiranjeevi: ಮೆಗಾಸ್ಟಾರ್ ಹನುಮಂತನ ಭಕ್ತನಾದದ್ದು ಹೇಗೆ?.. ಇಂಟ್ರೆಸ್ಟಿಂಗ್‌ ಮ್ಯಾಟರ್‌ ಬಿಚ್ಚಿಟ್ಟ ಚಿರಂಜೀವಿ


ರಕ್ಷ್‌ ರಾಮ್‌ ತಮ್ಮದೇ ನಿರ್ಮಾಣ ಸಂಸ್ಥೆ ಶ್ರೀ ಸಾಯಿ ಆಂಜನೇಯ  ಕಂಪನಿಯಡಿ ಬರ್ಮ ಸಿನಿಮಾಗೆ ಹಣ ಹೂಡಿದ್ದು, ಚಿತ್ರಕ್ಕೆ ಡೈರೆಕ್ಟರ್‌ ಚೇತನ್ ಕುಮಾರ್ ಆಕ್ಷನ್‌ ಕಟ್‌ ಹೇಳಿದ್ದಾರೆ.ಈ ಸಿನಿಮಾಗೆ ವಿ. ಹರಿಕೃಷ್ಣ ಸಂಗೀತ ನಿರ್ದೇಶನ ಮಾಡುತ್ತಿದ್ದಾರೆ. ಸದ್ಯ ಬರ್ಮ ಮೂಲಕ ಮೂರನೇ ಬಾರಿ  ಚೇತನ್ ಕುಮಾರ್ ಹಾಗೂ ಹರಿಕೃಷ್ಣ ಒಟ್ಟಿಗೆ ಕೆಲಸ ಮಾಡುತ್ತಿದ್ದಾರೆ. ಈ ಹಿಂದೆ ಇಬ್ಬರು 'ಬಹದ್ದೂರ್' ಹಾಗೂ 'ಭರ್ಜರಿ' ಸಿನಿಮಾದಲ್ಲಿ ಒಟ್ಟಿಗೆ ಕೆಲಸ ಮಾಡಿದ್ದರು. 


ಶೂಟಿಂಗ್ ಅಖಾಡದಲ್ಲಿರುವ ಬರ್ಮ ಸಿನಿಮಾದಲ್ಲಿ ಶಾವರ್ ಅಲಿ ಪ್ರಮುಖ ಪಾತ್ರದಲ್ಲಿ ನಟಿಸುತ್ತಿದ್ದು, ದೊಡ್ಡ ತಾರಾ ಬಳಗವೇ ಇದೆ. ಬರ್ಮ ಚಿತ್ರ ಪ್ಯಾನ್ ಇಂಡಿಯಾ ಮಟ್ಟದಲ್ಲಿಯೇ ರಿಲೀಸ್ ಆಗುತ್ತಿದ್ದು, ಈ ನಿಟ್ಟಿನಲ್ಲಿಯೇ ದೊಡ್ಡಮಟ್ಟದಲ್ಲಿ ಈ ಚಿತ್ರ ತಯಾರಾಗುತ್ತಿದೆ. ನಿರ್ದೇಶಕ ಚೇತನ್ ಕುಮಾರ್ ಅವರ 'ಜೇಮ್ಸ್' ಹೊರತುಪಡಿಸಿ  ಎಲ್ಲಾ ಚಿತ್ರಗಳೂ 'ಬ' ಅಥವಾ 'ಭ'ದಿಂದಲೇ ಆರಂಭವಾಗಿರುವುದು ವಿಶೇಷವಾಗಿದ್ದು, ಇದೀಗ ಹೊಸ ಸಿನಿಮಾ 'ಬರ್ಮ' ಅಂತ ಟೈಟಲ್‌ ಇಟ್ಟಿದ್ದಾರೆ.


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.