`ಹಿರಿಯ ನಟಿ ಲೀಲಾವತಿ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ` : ಸಿ ಎಂ ಸಿದ್ದರಾಮಯ್ಯ ಹೇಳಿಕೆ!
CM Siddharamaiah: ಹಿರಿಯ ನಟಿ ಸಿದ್ದರಾಮಯ್ಯ ನಿನ್ನೆ ಡಿಸೆಂಬರ್ 3 ರಂದು ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿಯವರ ತೋಟದ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವುದರ ಜೊತೆಗೆ ಅವರ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ ಎಂದು ಭರವಸೆ ನೀಡಿದ್ದಾರೆ.
CM Siddharamaiah Meets Veteran Actress Leelavathi: ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ವಯೋಸಹಜ ಅನಾರೋಗ್ಯ ಸಮಸ್ಯೆಗಳಿಂದ ಬಳಲುತ್ತಿದ್ದು, ತಮ್ಮ ತೊಟದ ಮನೆಯಲ್ಲಿ ತಮ್ಮ ಮಗ ವಿನೋದ್ ರಾಜ್ ಆರೈಕೆಯಲ್ಲಿ ಇದ್ದಾರೆ. ನಟಿ ಲೀಲಾವತಿಗೆ ಟ್ಯೂಬ್ ಸಹಾಯದಿಂದ ದ್ರವಾಹಾರವನ್ನು ನೀಡಲಾಗುತ್ತಿದ್ದು, ಕಳೆದೆರಡು ದಿನಗಳ ಹಿಂದೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಲೀಲಾವತಿಯವರ ನೀವಾಸಕ್ದಕೆ ಭೇಟಿ ನೀಡಿದ್ದರು. ಜೊತೆಗೆ ಮೊನ್ನೆ ಮೊನ್ನೆ ದರ್ಶನ್ ತೂಗುದೀಪ, ಬಹುಭಾಷಾ ನಟ ಅರ್ಜುನ್ ಸರ್ಜಾ, ಅಭಿಷೇಕ್ ಅಂಬರೀಶ್ ಸಹ ಹಿರಿಯ ನಟಿಯ ಆರೋಗ್ಯ ವಿಚಾರಿಸಿದ್ದರು.
ಸೆಂಚುರಿ ಸ್ಟಾರ್ ಡಾ. ಶಿವರಾಜ್‌ಕುಮಾರ್ ಲೀಲಾವತಿ ಹಾಗೂ ವಿನೋದ್ ರಾಜ್ ಭೇಟಿ ಮಾಡಿದ ಬಳಿಕ, ಮಾಧ್ಯಮಗಳ ಜೊತೆ ಮಾತನಾಡಿ, "ಈ ವಯಸ್ಸಿನಲ್ಲಿ ಇದನ್ನೆಲ್ಲಾ ತಡೆದುಕೊಳ್ಳುವ ಶಕ್ತಿ ಯಾರಿಗೂ ಇರಲ್ಲ. ಯೋಗಪುರುಷರು ಅಂತಾರೆ. ಅದಕ್ಕೆ ಲೀಲಾವತಿಯವರು ಅಷ್ಟು ಶಕ್ತಿಯಿಂದ ತಡೆದುಕೊಂಡಿದ್ದಾರೆ. ಆಗಿನ ಕಾಲದವರು ಬಹಳ ಸ್ಟ್ರಾಂಗ್ ಆಗಿ ಇರ್ತಾರೆ. ಲೀಲಾವತಿ ಅವರನ್ನು ನಾವು ಯಾಕೆ ಪ್ರೀತಿಸುತ್ತೀವಿ ಅಂದ್ರೆ ಅವತ್ತಿನಿಂದ ಅದೇ ಅನುಬಂಧ ಇದೆ. ಚಿಕ್ಕ ವಯಸ್ಸಿನಿಂದ ಅವರನ್ನು ನೋಡುತ್ತಿದ್ದೇನೆ. ಯಾವಾಗ ಕಂಡರೂ ಅದೇ ಆತ್ಮೀಯತೆ, ಅನುಬಂಧ ಇದೆ. ಅವರನ್ನು ಮರೆಯೋಕೆ ಸಾಧ್ಯವಿಲ್ಲ. ವಿನೋದ್ ಅವರನ್ನು ನೋಡಿದರೆ ಅವ್ರ ತಾಯಿಯನ್ನು ನೋಡಿದಂತೆ ಆಗುತ್ತದೆ" ಎಂದು ಹೇಳಿದ್ದರು.
ಇದನ್ನೂ ಓದಿ: ವಿನೋದ್ ಹಾಗೂ ನನ್ನ ನಡುವೆ ಇರುವ ಆತ್ಮೀಯತೆ ನಮಗಿಬ್ಬರಿಗಷ್ಟೇ ಗೊತ್ತು : ಶಿವಣ್ಣ
ನಟ ಶಿವರಾಜ್ ಕುಮಾರ್ ಭೇಟಿಯಾಗಿ ಬಂದ ಎರಡು ದಿನಗಳ ಬಳಿಕ ಡಿಸೆಂಬರ್ 3 ಭಾನುವಾರದಂದು, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ನೆಲಮಂಗಲದ ಸೋಲದೇವನಹಳ್ಳಿಯಲ್ಲಿರುವ ಲೀಲಾವತಿಯವರ ತೋಟದ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸುವಿದರ ಜೊತೆಗೆ "ಲೀಲಾವತಿ ಅವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ" ಎಂದು ಭರವಸೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೂಡ ಅವರ ಯೋಗಕ್ಷೇಮ ವಿಚಾರಿಸಿದ್ದಾರೆ.
ಈ ಬಗ್ಗೆ ಮುಖ್ಯಮಂತ್ರಿಗಳ ಅಧಿಕೃತ ಖಾತೆಯಲ್ಲಿ ಮಾಹಿತಿ ನೀಡಲಾಗಿದ್ದು, "ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಸೋಲದೇವನಹಳ್ಳಿಯಲ್ಲಿ ಇರುವ ಹಿರಿಯ ನಟಿ ಲೀಲಾವತಿ ಅವರ ನಿವಾಸಕ್ಕೆ ಭೇಟಿ ನೀಡಿ, ಅವರ ಆರೋಗ್ಯವನ್ನು ವಿಚಾರಿಸಿದರು. ಲೀಲಾವತಿಯವರಿಗೆ ಚಿಕಿತ್ಸೆಯ ಅಗತ್ಯ ಕಂಡುಬಂದು ಅವರನ್ನು ಆಸ್ಪತ್ರೆಗೆ ದಾಖಲಿಸಿದರೆ ಚಿಕಿತ್ಸಾ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಅವರ ಮಗ ವಿನೋದ್ ರಾಜ್ ಕೂಡ ತಾಯಿಯನ್ನು ಕಾಳಜಿಯಿಂದ ಆರೈಕೆ ಮಾಡುತ್ತಿದ್ದಾರೆ. ಸರ್ಕಾರದಿಂದ ಏನೇ ಸಹಾಯದ ಅಗತ್ಯವಿದ್ದರು ಅದನ್ನು ಒದಗಿಸಲಾಗುವುದು" ಎಂದು ಭರವಸೆ ನೀಡಿದ್ದಾರೆ. ಹಾಗೆಯೇ "ಲೀಲಾವತಿಯವರು ಆರೋಗ್ಯವಂತರಾಗಿದ್ದಾಗ ಜಮೀನು ವಿಚಾರವಾಗಿ ಸಮಸ್ಯೆ ಬಗೆಹರಿಸಿಕೊಳ್ಳಲು ಭೇಟಿಯಾಗುತ್ತಿದ್ದರು. ಈಗ ವಯೋಸಹಜವಾಗಿ ಕಾಯಿಲೆಗಳಿಂದ ಹಾಸಿಗೆ ಹಿಡಿದಿದ್ದಾರೆ. ಅವರು ಒಬ್ಬ ನೈಜ ಪ್ರತಿಭೆಯ ಕಲಾವಿದೆ" ಎಂದು ಲೀಲಾವತಿ ಬಗ್ಗೆ ಸಿದ್ದರಾಮಯ್ಯ ಮಾತನಾಡಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.