ಬೆಂಗಳೂರು : ರಾಜಕೀಯ ನಾಯಕರ ಜೊತೆ ರೌಡಿ ಶೀಟರ್‌ಗಳು ವೇದಿಕೆ ಹಂಚಿಕೊಳ್ಳುವುದಕ್ಕೆ ಶುರು ಮಾಡಿದ್ರೋ ಆಗಿನಿಂದ ಇದು ಪೊಲೀಸ್‌ ಇಲಾಖೆಗೆ ದೊಡ್ಡ ತಲೆನೋವಾಗಿದೆ. ಸದ್ಯ ರಾಜಕೀಯದಿಂದ ಮುಜಗರಕ್ಕೆ ಇಡಾಗಿದ್ದ ಸಿಸಿಬಿ ಬೆಂಗಳೂರು ರೌಡಿಗಳ ವಿಷಯದಲ್ಲಿ ಖಡಕ್ ತೀರ್ಮಾನ ತೆಗೆದುಕೊಂಡಿದೆ. ರೌಡಿಗಳಿಗೆ ಊರು ಬಿಡುವಂತೆ ಖಡಕ್‌ ವಾರ್ನಿಂಗ್ ಕೊಟ್ಟಿದ್ದಾರೆ. 


COMMERCIAL BREAK
SCROLL TO CONTINUE READING

ಸಿಸಿಬಿ ಬೀಸುವ ದೊಣ್ಣೆಯಿಂದ ತಪ್ಪಿಸಿಕೊಳ್ಳೋದಕ್ಕಾಗಿ ರೌಡಿಗಳನ್ನ ಊರು ಬಿಡಿಸಿದ್ದಾರೆ. ಸೈಲೆಂಟ್ ಸುನೀಲ ರಾಜಕೀಯ ಕಾರ್ಯಕ್ರಮದಲ್ಲಿ ಕಾಣಿಸಿಕೊಂಡಿದ್ದು, ಸಿಸಿಬಿಗೆ ದೊಡ್ಡ ಮುಜುಗರ ಊಂಟು ಮಾಡಿದೆ. ಇದು ಹಿರಿಯ ಅಧಿಕಾರಿಗಳ ಕೆಂಗಣ್ಣಿಗೆ ಗುರಿಯಾಗಿದ್ದು, ರೌಡಿ ಸುನೀಲನ ಹುಡುಕಾಟಲ್ಲಿ ಸಿಸಿಬಿ ಅಧಿಕಾರಿಗಳು ಬ್ಯುಸಿಯಾಗಿದ್ದಾರೆ. ಮುಂದೆ ಇಂತಹ ಘಟನೆಗಳು ಮರುಕಳಿಸಬಾರದು ಎಂದು ಉಳಿದ ರೌಡಿಗಳನ್ನ ಸಿಸಿಬಿ ಪೊಲೀಸರು ಬೆಂಗಳೂರು ಬಿಡಿಸಿ ಕಳಿಸಿದ್ದಾರೆ ಎನ್ನಲಾಗಿದೆ.


ಇದನ್ನೂ ಓದಿ: Viral Video: ತುಮಕೂರಿನಲ್ಲಿ ಅಪರೂಪದ ಬೆಕ್ಕಿನ ಕಣ್ಣಿನ ಹಾವು ಪತ್ತೆ..!


ಬೆಂಗಳೂರಿನಲ್ಲಿ ನಡೆಯುವ ರಾಜಕೀಯ ಕಾರ್ಯಕ್ರಮಗಳ ವೇದಿಕೆಯಲ್ಲಿ ಕಂಡು ಬಂದರೆ ಕಾನೂನು ಕ್ರಮದ ಎಚ್ಚರಿಕೆ ಸಹ ಕೊಟ್ಟಿದ್ದಾರೆ. ಹೀಗಾಗಿ ಬೆಂಗಳೂರಿನಲ್ಲಿ ತನ್ನದೇ ಹವಾ ಅಂತಾ ತಿರಗಾಡುತ್ತಿದ್ದ ರೌಡಿಗಳು ನೆರೆಯ ತಮಿಳುನಾಡು, ಆಂಧ್ರಪ್ರದೇಶ ಸೇರಿ ಇತರೆ ರಾಜ್ಯಗಳತ್ತ ಮುಖ ಮಾಡಿದ್ದಾರೆ ಎನ್ನಲಾಗಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.