Sushant Singh Rajput ಪ್ರಕರಣ: ಕೊನೆಗೂ ಪ್ರಕರಣದ CBI ತನಿಖೆ ನಡೆಸಲು ಒಪ್ಪಿಕೊಂಡ ಕೇಂದ್ರ ಸರ್ಕಾರ

ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಬಿಹಾರ ಸರ್ಕಾರ ಶಿಫಾರಸ್ಸು ಮಾಡಿತ್ತು. ಬಿಹಾರ ಸರ್ಕಾರದ ಈ ಬೇಡಿಕೆಯನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ.

Last Updated : Aug 5, 2020, 04:20 PM IST
Sushant Singh Rajput ಪ್ರಕರಣ: ಕೊನೆಗೂ ಪ್ರಕರಣದ CBI ತನಿಖೆ ನಡೆಸಲು ಒಪ್ಪಿಕೊಂಡ ಕೇಂದ್ರ ಸರ್ಕಾರ title=

ನವದೆಹಲಿ: ದಿವಂಗತ ನಟ ಸುಶಾಂತ್ ಸಿಂಗ್ ರಜಪೂತ್ (Sushant Singh Rajput) ಸಾವಿನ ಪ್ರಕರಣದಲ್ಲಿ ಸಿಬಿಐ ವಿಚಾರಣೆಗೆ ಬೇಡಿಕೆ ಹೆಚ್ಚಾಗುತ್ತಿದೆ. ಸುಶಾಂತ್ ಸಿಂಗ್ ರಜಪೂತ್ ಪ್ರಕರಣದ ಬಗ್ಗೆ ಸಿಬಿಐ ತನಿಖೆಗೆ ಕೋರಿ ಬಿಹಾರ ಸರ್ಕಾರಕ್ಕೆ ಶಿಫಾರಸ್ಸು ಕೂಡ ಸಲ್ಲಿಸಿತ್ತು. ಬಿಹಾರ ಸರ್ಕಾರದ ಈ ಬೇಡಿಕೆಯನ್ನು ಒಪ್ಪಿಕೊಳ್ಳಲು ಕೇಂದ್ರ ನಿರ್ಧರಿಸಿದೆ.

ಈ ಕುರಿತು ಸುಪ್ರೀಂಕೋರ್ಟ್ ನಲ್ಲಿ ಹೇಳಿಕೆ ನೀಡಿರುವ ಕೇಂದ್ರ ಸರ್ಕಾರದ ವಕೀಲ ತುಷಾರ್ ಮೆಹ್ತಾ, "ಬಿಹಾರ ಸರ್ಕಾರ ಪ್ರಕರಣದಲ್ಲಿ CBI ತನಿಖೆಯ ಶಿಫಾರಸ್ಸು ಮಾಡಿದೆ. ಕೇಂದ್ರ ಸರ್ಕಾರ ಕೂಡ ಬಿಹಾರದ ಶಿಫಾರಸ್ಸನ್ನು ಒಪ್ಪಿಕೊಳ್ಳಲು ನಿರ್ಧರಿಸಿದ್ದು, ಪ್ರಕರಣ ಹಸ್ತಾಂತರಿಸುವ ಅರ್ಜಿಯ ವಿಚಾರಣೆ ಅವಶ್ಯಕವಾಗಿಲ್ಲ" ಎಂದು ಹೇಳಿದ್ದಾರೆ.

ಈ ಎರಡು ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ಸುಪ್ರೀಂ ಕೋರ್ಟ್‌ನಲ್ಲಿ ಮಂಗಳವಾರ ದಾಖಲಿಸಲಾಗಿದೆ. ಈ ಹಿಂದೆ ರಿಯಾ ಚಕ್ರವರ್ತಿ ಅವರ ಅರ್ಜಿಯನ್ನು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಸಲಾಗಿದ್ದು, ಇದರಲ್ಲಿ ರಿಯಾ ಅವರು ಪಾಟ್ನಾದಲ್ಲಿರುವ ತಮ್ಮ ವಿರುದ್ಧದ ಪ್ರಕರಣವನ್ನು ಮುಂಬೈಗೆ ವರ್ಗಾಯಿಸುವಂತೆ ಕೋರಿದ್ದರು.

ಸುಶಾಂತ್ ಸಿಂಗ್ ರಜಪೂತ್ ಅವರ ತಂದೆ ಕೆ.ಕೆ. ಸಿಂಗ್ ಅವರು ಸಿಯಾ ರಿಯಾ ಚಕ್ರವರ್ತಿ ವಿರುದ್ಧ ಬಿಹಾರ ಬಿಹಾರ ಪೊಲೀಸರ ಬಳಿ ಹಲವು ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಸುಶಾಂತ್ ಸಿಂಗ್ ರಜಪೂತ್ ಸಾವಿನ ಬಗ್ಗೆ ಸಿಬಿಐ ವಿಚಾರಣೆಗೆ ಕೇಂದ್ರಕ್ಕೆ ಬಿಹಾರ ಸರ್ಕಾರ ಶಿಫಾರಸು ಮಾಡಿದ ಸಂದರ್ಭದಲ್ಲಿ ಅಜೇಯ ಕುಮಾರ್ ಅಗರ್ವಾಲ್ ಮತ್ತು ಮುಂಬೈ ಮೂಲದ ಕಾನೂನು ವಿದ್ಯಾರ್ಥಿ ದ್ವಿವೇಂದ್ರ ದೇವತಾದೀನ್ ದುಬೆ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ದಾಖಲಿಸಿದ್ದರು.

ಕಳೆದ ಜೂನ್ 14 ರಂದು ಮುಂಬೈನ ಬಾಂದ್ರಾದಲ್ಲಿರುವ ತಮ್ಮ ನಿವಾಸದಲ್ಲಿ ಸುಶಾಂತ್ ಶವವಾಗಿ ಪತ್ತೆಯಾಗಿದ್ದರು. ರಾಜಕೀಯವಾಗಿ ಸೂಕ್ಷ್ಮವಾಗಿದ್ದ ಬೋಫೋರ್ಸ್ ಹಗರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಭಾರಿ ಸಕ್ರಿಯವಾಗಿರುವ ಅಗರ್‌ವಾಲ್, ಬಾಲಿವುಡ್ ನಟನ ಸಾವಿನ ಬಗ್ಗೆ ತನಿಖೆ ನಡೆಸಲು ಸಿಬಿಐಗೆ ನಿರ್ದೇಶನ ನೀಡುವಂತೆ ಸುಪ್ರೀಂ ಕೋರ್ಟ್‌ಗೆ ಮನವಿ ಮಾಡಿದ್ದಾರೆ.

Trending News