ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಬ್ರಿಟೀಷ್ ಪಾರ್ಲಿಮೆಂಟ್ ಪ್ರಶಸ್ತಿ

ಬ್ರಿಟೀಷ್ ಪಾರ್ಲಿಮೆಂಟ್ ಪ್ರಶಸ್ತಿಗೆ ಭಾಜನರಾದ ಪ್ರಥಮ ದಕ್ಷಿಣ ಭಾರತದ ನಟ ಹೆಗ್ಗಳಿಕೆಗೆ ಭಾಜರಾದ ದರ್ಶನ್.

Last Updated : Oct 17, 2017, 04:25 PM IST
ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಬ್ರಿಟೀಷ್ ಪಾರ್ಲಿಮೆಂಟ್ ಪ್ರಶಸ್ತಿ title=

ಚಾಲೆಂಜಿಂಗ್ ಸ್ಟಾರ್ ದರ್ಶನ್ ಗೆ ಬ್ರಿಟೀಷ್ ಪಾರ್ಲಿಮೆಂಟ್ ಗೌರವಿಸಲು ನಿರ್ಧರಿಸಿದ್ದು, ಈ ಮೂಲಕ ಬ್ರಿಟಿಷ್ ಪಾರ್ಲಿಮೆಂಟ್‌ನಿಂದ ಸನ್ಮಾನಿಸಲ್ಪಡುವ ಪ್ರಥಮ ದಕ್ಷಿಣ ಭಾರತದ ನಟ ಎಂಬ ಹೆಗ್ಗಳಿಕೆಗೆ ದರ್ಶನ್ ಭಾಜನರಾಗಿದ್ದಾರೆ. 

ಮೂಲಗಳ ಪ್ರಕಾರ ದರ್ಶನ್ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಭಾಗವಹಿಸಲು ಇದೇ 18ಕ್ಕೆ ಲಂಡನ್ ಗೆ ತೆರಳಲಿದ್ದಾರೆ. 19 ರಂದು ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದ್ದು, 26ಕ್ಕೆ ದರ್ಶನ್ ಭಾರತಕ್ಕೆ ಹಿಂದಿರುಗಲಿದ್ದಾರೆ. 

ಹಿಂದಿರುಗಿದ ನಂತರ ಮತ್ತೆ 'ಕುರುಕ್ಷೇತ್ರ' ಚಿತ್ರದ ಶೂಟಿಂಗ್‌ನಲ್ಲಿ ಪಾಲ್ಗೊಳ್ಳಲಿದ್ದಾರೆ. ದರ್ಶನ್‌ಗೆ ಈ ಗೌರವ ಲಭಿಸುತ್ತಿರುವ ವಿಷಯ ತಿಳಿಯುತ್ತಿದ್ದಂತೆ ಕುರುಕ್ಷೇತ್ರ ಸೆಟ್‌ನಲ್ಲಿ ಸಂಭ್ರಮಾಚರಣೆ ಮನೆಮಾಡಿದೆ. 

ಇತ್ತೀಚೆಗೆ ಬಾಲಿವುಡ್ ನಟ ಸಲ್ಮಾನ್ ಖಾನ್‌ಗೆ ಬ್ರಿಟಿಷ್ ಪಾರ್ಲಿಮೆಂಟ್‌ ಹೌಸ್‌ನಿಂದ ಗ್ಲೋಬಲ್ ಡೈವರ್ಸಿಟಿ ಅವಾರ್ಡ್ ದೊರಕಿತ್ತು. ಈಗ ದರ್ಶನ್ ಆ ಗೌರವಕ್ಕೆ ಪಾತ್ರವಾಗುತ್ತಿದ್ದು, ಬ್ರಿಟಿಷ್‌ ಪಾರ್ಲಿಮೆಂಟ್‌ನಿಂದ ಪಶಸ್ತಿ ಪಡೆಯುತ್ತಿರುವ 5ನೇ ಭಾರತೀಯ ನಟ ಎಂಬ ಹೆಗ್ಗಳಿಕೆಗೆ ಪಾತ್ರವಾಗುತ್ತಿದ್ದಾರೆ.

Trending News