ಚಂದನ್ ಶೆಟ್ಟಿ "ಸೂತ್ರಧಾರಿ" ಶೀರ್ಷಿಕೆ ಗೀತೆಗೆ ಸಿನಿಪ್ರಿಯರು ಫಿದಾ

Sutradhari title song: ನವರಸನ್ ನಿರ್ಮಾಣದ ಹಾಗೂ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ ಈ ಚಿತ್ರ ಮೇ 9 ರಂದು ಬಿಡುಗಡೆ ಆಗಲಿದೆ. 

Written by - YASHODHA POOJARI | Last Updated : Apr 21, 2025, 12:38 PM IST
  • ನವರಸನ್ ನಿರ್ಮಾಣದ ಸಿನಿಮಾ
  • ಚಂದನ್ ಶೆಟ್ಟಿ ಹೀರೋ ಆಗಿರುವ "ಸೂತ್ರಧಾರಿ" ಸಿನಿಮಾ
  • "ಸೂತ್ರಧಾರಿ" ಶೀರ್ಷಿಕೆ ಗೀತೆಗೆ ಸಿನಿಪ್ರಿಯರು ಫಿದಾ
ಚಂದನ್ ಶೆಟ್ಟಿ "ಸೂತ್ರಧಾರಿ" ಶೀರ್ಷಿಕೆ ಗೀತೆಗೆ ಸಿನಿಪ್ರಿಯರು ಫಿದಾ

ಬೆಂಗಳೂರು: ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಕನ್ನಡ ಸೇರಿದಂತೆ ಅನೇಕ ಭಾಷೆಗಳ 1800ಕ್ಕೂ ಅಧಿಕ ಚಿತ್ರಗಳ ಇವೆಂಟ್ ಗಳನ್ನು ಆಯೋಜಿಸಿರುವ, ಅಷ್ಟೇ ಅಲ್ಲದೆ ನಿರ್ಮಾಪಕ ಹಾಗೂ ನಿರ್ದೇಶಕರಾಗಿಯೂ ಜನಪ್ರಿಯರಾಗಿರುವ ನವರಸನ್ ನಿರ್ಮಾಣದ ಹಾಗೂ ತಮ್ಮದೇ ಆದ ವಿಶಿಷ್ಟ ಶೈಲಿಯ ಗಾಯನದ ಮೂಲಕ ಜನಮನ ಗೆದ್ದಿರುವ ಗಾಯಕ ಹಾಗೂ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ "ಸೂತ್ರಧಾರಿ" ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಮಂತ್ರಿ ಮಾಲ್ ನಲ್ಲಿ ನೆರೆದಿದ್ದ ಸಹಸ್ರಾರು ಜನರ ಸಮ್ಮಖದಲ್ಲಿ ಅದ್ದೂರಿಯಾಗಿ ಬಿಡುಗಡೆಯಾಯಿತು. 

Add Zee News as a Preferred Source

ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ ಅವರು ಈ ಸಮಾರಂಭವನ್ನು ಆಯೋಜಿಸಿದ್ದರು ಹಾಗೂ ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ನಿರ್ಮಾಪಕರಾದ ಚೇತನ್ ಗೌಡ, ಜಗದೀಶ್ ಗೌಡ, ರಾಜೇಶ್ ಹಾಗೂ ಗಜೇಂದ್ರ ಅವರು ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ತಮ್ಮ ಪ್ರೋತ್ಸಾಹ ಭರಿತ ಮಾತುಗಳ ಮೂಲಕ "ಸೂತ್ರಧಾರಿ" ಚಿತ್ರಕ್ಕೆ ಯಶಸ್ಸನ್ನು ಕೋರಿದರು. 

ವಿಜಯ್ ಈಶ್ವರ್ ಅವರು ಬರೆದಿರುವ "ಸೂತ್ರಧಾರಿ" ಚಿತ್ರದ ಶೀರ್ಷಿಕೆ ಗೀತೆಯನ್ನು ನಾಯಕನಾಗಿ ನಟಿಸಿರುವ ಚಂದನ್ ಶೆಟ್ಟಿ ಅವರೆ ಹಾಡಿದ್ದಾರೆ ಜೊತೆಗೆ ಸಂಗೀತವನ್ನೂ ಸಂಯೋಜಿಸಿದ್ದಾರೆ. A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಅರ್ಥಗರ್ಭಿತ ಹಾಡಿಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ನಮ್ಮ‌ "ಸೂತ್ರಧಾರಿ" ಸಿನಿಮಾ ಆರಂಭವಾದಗಿನಿಂದಲೂ ತಾವೆಲ್ಲರೂ ನೀಡುತ್ತಿರುವ ಪ್ರೋತ್ಸಾಹಕ್ಕೆ ಚಿರ ಋಣಿ. ಇನ್ನೂ ಸದಾ ನನ್ನ ಎಲ್ಲಾ ಕೆಲಸಗಳಿಗೂ ಜೊತೆಗಿದ್ದು, ಪ್ರೋತ್ಸಾಹ ನೀಡುವ  ಸಾಯಿ ಗೋಲ್ಡ್ ಪ್ಯಾಲೆಸ್ ನ ಶರವಣ, ಚೇತನ್ ಗೌಡ, ಜಗದೀಶ್ ಗೌಡ, ರಾಜೇಶ್, ಗಜೇಂದ್ರ ಮುಂತಾದವರು ಇಂದಿನ ಸಮಾರಂಭಕ್ಕೆ ಆಗಮಿಸಿದ್ದಾರೆ. 

ಇದನ್ನೂ ಓದಿ : Top 10 Series: ಬಾಕ್ಸ್ ಆಫೀಸ್ ಹಿಟ್ ಆಧಾರದ ಮೇಲೆ ಸಾರ್ವಕಾಲಿಕ ಕನ್ನಡದ ಟಾಪ್ 10 ನಟರು..! 

ಅವರಿಗೆ ಹಾಗೂ ನನ್ನ ಇಡೀ ಚಿತ್ರತಂಡಕ್ಕೆ ಧನ್ಯವಾದ. ವಿಜಯ್ ಈಶ್ವರ್ ಅವರು ಬರೆದಿರುವ ಈ ಚಿತ್ರದ ಟೈಟಲ್ ಸಾಂಗ್ ತುಂಬಾ ಚೆನ್ನಾಗಿದೆ. ಅರ್ಥಗರ್ಭಿತ ಈ ಹಾಡು ಎಲ್ಲರ ಮನಸ್ಸಿಗೂ ಹತ್ತಿರವಾಗಲಿದೆ. ಚಿತ್ರ ಮೇ 9 ರಂದು ಬಿಡುಗಡೆಯಾಗಲಿದೆ ಎಂದರು ನಿರ್ಮಾಪಕ ನವರಸನ್. 

ನಾನು ನಾಯಕನಾಗಬೇಕೆಂಬ ಆಸೆ ನಮ್ಮ ಅಪ್ಪನದು. ಇದೇ ಮೇ 9 ನೇ ತಾರೀಖು ಅವರ ಆಸೆ ಈಡೇರುತ್ತಿದೆ. ನಾನು ನಾಯಕನಾಗಿ ನಟಿಸಿರುವ ಮೊದಲ ಸಿನಿಮಾ ಅಂದು ಬಿಡುಗಡೆಯಾಗುತ್ತಿದೆ. ಗಾಯಕನಾಗಿ ನನ್ನನ್ನು ಎಲ್ಲರೂ ಮೆಚ್ಚಿಕೊಂಡು ಆಶೀರ್ವದಿಸಿದ್ದೀರಿ. ಈಗ ನಾಯಕನಾಗೂ ಮೆಚ್ಚಿಕೊಳ್ಳುತ್ತೀರಾ ಎಂಬ ಭರವಸೆ ಇದೆ. ಈ ಚಿತ್ರದಲ್ಲಿ ನಾನು ಪೊಲೀಸ್ ಅಧಿಕಾರಿ ಪಾತ್ರದಲ್ಲಿ ಕಾಣಿಸಿಕೊಂಡಿದ್ದೀನಿ. 

ಅಪೂರ್ವ ನಾಯಕಿಯಾಗಿ ಅಭಿನಯಿಸಿದ್ದಾರೆ. ಸಂಜನಾ ಆನಂದ್, ತಬಲ ನಾಣಿ ಮುಂತಾದವರು ತಾರಾಬಳಗದಲ್ಲಿದ್ದಾರೆ. ವಿಜಯ್ ಈಶ್ವರ್ ಅವರು ಬರೆದು ನಾನೇ ಹಾಡಿ ಸಂಗೀತವನ್ನೂ ನೀಡಿರುವ ಚಿತ್ರದ ಶೀರ್ಷಿಕೆ ಗೀತೆ ಇಂದು ಬಿಡುಗಡೆಯಾಗಿದೆ. "ಸೂತ್ರಧಾರಿ" ಚಿತ್ರದ "ಡ್ಯಾಶ್" ಸಾಂಗ್ ಅಂತೂ ನಿರೀಕ್ಷೆಗೂ ಮೀರಿ ಜನಪ್ರಿಯವಾಗಿದೆ. 

ಈ ಹಾಡು ಕೂಡ ಎಲ್ಲರಿಗೂ ಪ್ರಿಯವಾಗಲಿದೆ. ಉತ್ತಮ ತಂಡದೊಂದಿಗೆ ಕೆಲಸ ಮಾಡಿದ ಖುಷಿ ಇದೆ.‌ ಈ ಚಿತ್ರದಲ್ಲಿ ನಾನು ನಾಯಕನಾಗಿ‌ ನಟಿಸಲು ನವರಸನ್ ಅವರೆ ಮುಖ್ಯ ಕಾರಣ ಅವರಿಗೆ ವಿಶೇಷ ಧನ್ಯವಾದ ಎಂದರು ಚಂದನ್‌ ಶೆಟ್ಟಿ.

ಚಿತ್ರದ ನಿರ್ದೇಶಕ ಕಿರಣ್ ಕುಮಾರ್, ನಾಯಕಿ ಅಪೂರ್ವ, ನಟ ತಬಲ ನಾಣಿ ಹಾಗೂ ಹಾಡು ಬರೆದಿರುವ ವಿಜಯ್ ಈಶ್ವರ್ ಮುಂತಾದವರು "ಸೂತ್ರಧಾರಿ" ಕುರಿತು ಮಾತನಾಡಿದರು.

ಇದನ್ನೂ ಓದಿ : ವಿಚ್ಛೇದನ ವದಂತಿ ಮಧ್ಯೆ ಗುಡ್‌ ನ್ಯೂಸ್‌... ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರ ಐಶ್ವರ್ಯಾ? ಸ್ಟಾರ್‌ ನಟನ ಪ್ರಶ್ನೆಗೆ ನಾಚುತ್ತಲೇ ಉತ್ತರಿಸಿದ ಅಭಿಷೇಕ್‌ ಬಚ್ಚನ್‌

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ.

About the Author

Trending News