Suthradaari Movie : ಖ್ಯಾತ ಗಾಯಕ, ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ನಾಯಕನಾಗಿ ನಟಿಸುತ್ತಿರುವ ʼಸೂತ್ರಧಾರಿʼ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ. ಎರಡು ಹಾಡುಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ಲೂಪ್ ಸ್ಟುಡಿಯೋದಲ್ಲಿ ಮಾತಿನ ಜೋಡಣೆ ನಡೆಯುತ್ತಿದೆ‌. 


COMMERCIAL BREAK
SCROLL TO CONTINUE READING

ಚಂದನ್ ಶೆಟ್ಟಿ ಈ ಚಿತ್ರದ ಸಂಗೀತ ನಿರ್ದೇಶಕರೂ ಹೌದು. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಡ್ಯಾಶ್ ಸಾಂಗ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗಿ, ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ. ದಕ್ಷಿಣ ಭಾರತದಲ್ಲಿ ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಇವೆಂಟ್ ಗಳನ್ನು ನಡೆಸುತ್ತಿರುವ ನವರಸನ್, ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ʼಸೂತ್ರಧಾರಿʼ ಇವರ ನಿರ್ಮಾಣದ ಐದನೇ ಚಿತ್ರ. 


ಇದನ್ನೂ ಓದಿ: ಅದಕ್ಕೇ ಕಿವಿ ಕೂದಲು.." ಚಿಟ್ಟಿಬಾಬುಗೆ ಸಮಂತಾ ಸ್ಟ್ರಾಂಗ್ ಕೌಂಟರ್!!


ಕ್ರೈಮ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರವನ್ನು ಕಿರಣ್ ಕುಮಾರ್ ನಿರ್ದೇಶಿಸುತ್ತಿದ್ದಾರೆ. ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಸತೀಶ್ ಚಂದ್ರಯ್ಯ ಸಂಕಲನ ಹಾಗೂ ಮೋಹನ್ ಅವರ ನೃತ್ಯ ನಿರ್ದೇಶನವಿದೆ. ಚಂದನ್ ಶೆಟ್ಟಿ ಅವರಿಗೆ ನಾಯಕಿಯಾಗಿ ಅಪೂರ್ವ ನಟಿಸಿದ್ದಾರೆ‌. ಸಂಜನಾ ಆನಂದ್ ಹಾಡೊಂದಕ್ಕೆ ಹೆಜ್ಜೆ ಹಾಕಿದ್ದಾರೆ. ತಬಲನಾಣಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ‌.https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.