Chandan Shetty new movie : ಕನ್ನಡ ರ್ಯಾಪರ್‌ ಚಂದನ್‌ ಶೆಟ್ಟಿ ತಮ್ಮ ಅದ್ಭುತ ಹಾಡುಗಳ ಮೂಲಕ ಸಿನಿ ಪ್ರೇಕ್ಷಕರಿಗೆ ಹತ್ತಿರವಾದ ಗಾಯಕ. ಇತ್ತೀಚಿಗೆ ನಟನೆಗೂ ಕಾಲಿಟ್ಟಿರುವ ಚಂದನ್‌ ಶೆಟ್ಟಿ, ಎಲ್ಲರ ಕಾಲೆಳೆಯುತ್ತೆ ಕಾಲ, ಸೂತ್ರಧಾರಿ ಸೇರಿದಂತೆ ಅನೇಕ ಸಿನಿಮಾಗಳಲ್ಲಿ ನಾಯಕ ನಟನಾಗಿ ನಟಿಸಿದ್ದು ರಿಲೀಸ್‌ಗೆ ರೆಡಿಯಾಗಿವೆ. ಇದೀಗ ನಡುವೆ ಹೊಸ ಸಿನಿಮಾದ ಮೂಲಕ ತೆರೆ ಮೇಲೆ ಬರಲು ರೆಡಿಯಾಗಿದ್ದು, ಚಿತ್ರದ ಟೈಟಲ್‌ ಅನೌನ್ಸ್‌ ಮಾಡೋಕೆ ಸಿದ್ಧತೆ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಹೌದು.. ರ್ಯಾಪರ್ ಆಗಿ ಸ್ಯಾಂಡಲ್‌ವುಡ್‌ಗೆ ಕಾಲಿಟ್ಟ ಚಂದನ್‌ ಶೆಟ್ಟಿ, ಕನ್ನಡಿಗರಿಗೆ ಹತ್ತಿರವಾದರು. ಸಧ್ಯ ನಾಯಕ ನಟನಾಗಿ ನಟಿಸಿರುವ ಒಂದೆರಡು ಸಿನಿಮಾಗಳು ಅಂತಿಮ ಘಟ್ಟದಲ್ಲಿರುವಾಗಲೇ ಚಂದನ್ ಮತ್ತೊಂದು ಸಿನಿಮಾಕ್ಕೆ ಸಹಿ ಹಾಕಿದ್ದಾರೆ. ಯುವ ನಿರ್ದೇಶಕ ಅರುಣ್ ಅಮುಕ್ತ ನಿರ್ದೇಶನದಲ್ಲಿ ಮೂಡಿ ಬರಲಿರೋ ಈ ಚಿತ್ರದ ಟೈಟಲ್ ಇದೇ 25ರಂದು ಅಂದರೆ, ವರಮಹಾಲಕ್ಷ್ಮಿ ಹಬ್ಬದ ದಿನದಂದೇ ಅನಾವರಣಗೊಳ್ಳಲಿದೆ.


ಇದನ್ನೂ ಓದಿ: ರಾಘು ಮೊದಲ ʼಸ್ಪಂದನʼ..! ಮುದ್ದಿನ ಮಡದಿಗೆ ಪ್ರೀತಿಯ ನಮನ


ಇಂದು ಚಿತ್ರತಂಡ ಟೈಟಲ್ ಪ್ರೋಮೋ ಒಂದನ್ನು ಬಿಡುಗಡೆಗೊಳಿಸಿದೆ. ಅದಕ್ಕೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಮೆಚ್ಚುಗೆಗಳೂ ಸಿಕ್ಕಿವೆ. ವಿಡಿಯೋ ಚಿತ್ರದ ಟೈಟಲ್‌ ಕುರಿತು ಕುತೂಹಲ ಮೂಡಿಸಿದೆ. ಪ್ರತಿಭಾನ್ವಿತ ಯುವ ತಂಡ, ಒಂದೊಳ್ಳೆ ಕಥೆಯ ಮೂಲಕ ಚಂದನ್ ಜೊತೆಗೆ ಪ್ರೇಕ್ಷಕರ ಮುಂದೆ ಬರಲು ಸಿದ್ದವಾಗಿದೆ. ಒಟ್ಟಾರೆ ಸಿನಿಮಾ ಹೇಗಿರಬಹುದೆಂಬ ಸಣ್ಣ ಸೂಚನೆ ಟೈಟಲ್ ಜೊತೆಗೆ ಅನಾವರಣಗೊಳ್ಳುವ ನಿರೀಕ್ಷೆಗಳಿವೆ.


ಈ ಹಿಂದೆ ಶ್ರೀ ಮುರುಳಿ ನಾಯಕನಾಗಿ ನಟಿಸಿದ್ದ `ಲೂಸ್ ಗಳು’ ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದವರು ಅರುಣ್ ಅಮುಕ್ತ. ಮೂಲತಃ ಆಡ್ ಫಿಲಂ ಮೇಕರ್ ಆಗಿರುವ ಅರುಣ್, ಚಿತ್ರರಂಗದಲ್ಲಿ ಹತ್ತಾರು ವರ್ಷಗಳಿಂದ ಕಾರ್ಯ ನಿರ್ವಹಿಸಿದ್ದಾರೆ. ಅಷ್ಟೆಲ್ಲ ಅನುಭವಗಳನ್ನು ಒಗ್ಗೂಡಿಸಿಕೊಂಡು ಒಂದೊಳ್ಳೆ ಕಥೆಯೊಂದಿಗೆ ಈ ಚಿತ್ರವನ್ನು ನಿರ್ದೇಶನ ಮಾಡಲು ಮುಂದಾಗಿದ್ದಾರಂತೆ. ಸದ್ಯದ ಮಟ್ಟಿಗೆ ಇದೊಂದು ಟೀನೇಜ್ ಡ್ರಾಮಾ ಆಗಿರಲಿದೆ ಎಂಬ ಏಕಮಾತ್ರ ಸುಳಿವು ಚಿತ್ರತಂಡ ನೀಡಿದೆ.


ಇದನ್ನೂ ಓದಿ: ಮದುವೆ ಮುನ್ನವೇ ಭಾವಿ ಪತ್ನಿಯನ್ನ ಪ್ರೋಡ್ಯೂಸರ್ ಮಾಡಿದ ಭುವನ್ ಪೊನ್ನಣ್ಣ 


ಇನ್ನು ಈ ಚಿತ್ರದಲ್ಲಿ ಚಂದನ್ ಶೆಟ್ಟಿ ಜೊತೆಗೆ ಅಮರ್, ಭಾವನಾ, ಮಾನಸಿ, ವಿವಾನ್, ಭವ್ಯ, ಸುನೀಲ್ ಪುರಾಣಿಕ್, ಅರವಿಂದ ರಾವ್, ಸಿಂಚನಾ, ರಘು ರಾಮನಕೊಪ್ಪ, ಪ್ರಶಾಂತ್‌ ಸಂಬರ್ಗಿ ಮುಂತಾದವರು ನಟಿಸಲಿದ್ದಾರೆ ಎಂದು ಹೇಳಲಾಗಿದೆ. ಇನ್ನುಳಿದಂತೆ ತಾಂತ್ರಿಕ ವರ್ಗವೂ ಸೇರಿದಂತೆ, ಬಹುಮುಖ್ಯವಾದ ಇನ್ನೊಂದಷ್ಟು ವಿಚಾರಗಳನ್ನು ಹಂತ ಹಂತವಾಗಿ ಪ್ರೇಕ್ಷಕರ ಮುಂದಿಡಲು ಚಿತ್ರತಂಡ ತೀರ್ಮಾನಿಸಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.