ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ದೇಶಕ ಎನ್. ಓಂಪ್ರಕಾಶ್ ರಾವ್ ನಿರ್ದೇಶನದ "ಚಂದ್ರಲೇಖ ರಿಟರ್ನ್ಸ್" ಚಿತ್ರ ಮೇ 25ರಂದು ಆರಂಭವಾಗಲಿದೆ. ಇದು ಓಂಪ್ರಕಾಶ್ ರಾವ್ ಅವರ ನಿರ್ದೇಶನದ 48ನೇ ಚಿತ್ರ.
ಇದನ್ನು ಓದಿ: ವಾತಕ್ಕೆ ಉತ್ತಮ ಪರಿಹಾರ ನೀಡುತ್ತದೆ ʼಪಿಸ್ತಾʼ
"ಲವ್ ಮಾಕ್ಟೇಲ್" ಚಿತ್ರದ ಮೂಲಕ ಜನಪ್ರಿಯರಾಗಿರುವ ಅಭಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನೂತನ ಪ್ರತಿಭೆ ಭೂಮಿಕ ಎಲ್. ಮಧುಸೂದನ್ ಈ ಚಿತ್ರದ ನಾಯಕಿ. ಅನನ್ಯ ಪಂಡಿತ್, ರಂಗಾಯಣ ರಘು, ಅಚ್ಯುತಕುಮಾರ್, ಅವಿನಾಶ್, ಸುಧಾ ಬೆಳವಾಡಿ, ಅವಿನಾಶ್, ಸುಚೀಂದ್ರ ಪ್ರಸಾದ್, ಚಿತ್ರ ಶೆಣೈ, ಸಂಗೀತ ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ.
ಇದನ್ನು ಓದಿ: ಏ. 28ರಂದು "ಮೈ ನೇಮ್ ಇಸ್ ರಾಜ್" ಅದ್ದೂರಿ ಸಂಗೀತ ಕಾರ್ಯಕ್ರಮ
ಹಾರರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಓಂಪ್ರಕಾಶ್ ರಾವ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಎಂ.ಎಸ್. ರಮೇಶ್ ಸಂಭಾಷಣೆ ಬರೆದಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಓಂ ಪ್ರೊಡಕ್ಷನ್ ಲಾಂಛನದಲ್ಲಿ ಓಂಪ್ರಕಾಶ್ ರಾವ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.