ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ಖ್ಯಾತ ನಿರ್ದೇಶಕ ಎನ್. ಓಂಪ್ರಕಾಶ್ ರಾವ್ ನಿರ್ದೇಶನದ  "ಚಂದ್ರಲೇಖ ರಿಟರ್ನ್ಸ್" ಚಿತ್ರ ಮೇ 25ರಂದು ಆರಂಭವಾಗಲಿದೆ. ಇದು ಓಂಪ್ರಕಾಶ್ ರಾವ್ ಅವರ ನಿರ್ದೇಶನದ 48ನೇ ಚಿತ್ರ. 


COMMERCIAL BREAK
SCROLL TO CONTINUE READING

ಇದನ್ನು ಓದಿ: ವಾತಕ್ಕೆ ಉತ್ತಮ ಪರಿಹಾರ ನೀಡುತ್ತದೆ ʼಪಿಸ್ತಾʼ 


"ಲವ್ ಮಾಕ್ಟೇಲ್" ಚಿತ್ರದ ಮೂಲಕ ಜನಪ್ರಿಯರಾಗಿರುವ ಅಭಿ ಈ ಚಿತ್ರದ ನಾಯಕನಾಗಿ ನಟಿಸುತ್ತಿದ್ದಾರೆ. ನೂತನ ಪ್ರತಿಭೆ ಭೂಮಿಕ ಎಲ್. ಮಧುಸೂದನ್ ಈ ಚಿತ್ರದ ನಾಯಕಿ. ಅನನ್ಯ ಪಂಡಿತ್, ರಂಗಾಯಣ ರಘು, ಅಚ್ಯುತಕುಮಾರ್, ಅವಿನಾಶ್, ಸುಧಾ ಬೆಳವಾಡಿ, ಅವಿನಾಶ್, ಸುಚೀಂದ್ರ ಪ್ರಸಾದ್, ಚಿತ್ರ ಶೆಣೈ, ಸಂಗೀತ ಮುಂತಾದವರು ಈ ಚಿತ್ರದ ತಾರಾ ಬಳಗದಲ್ಲಿದ್ದಾರೆ. 


ಇದನ್ನು ಓದಿ: ಏ. 28ರಂದು "ಮೈ ನೇಮ್ ಇಸ್ ರಾಜ್" ಅದ್ದೂರಿ ಸಂಗೀತ ಕಾರ್ಯಕ್ರಮ


ಹಾರರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಓಂಪ್ರಕಾಶ್ ರಾವ್ ಅವರೇ ಕಥೆ, ಚಿತ್ರಕಥೆ ಬರೆದಿದ್ದಾರೆ. ಎಂ.ಎಸ್. ರಮೇಶ್ ಸಂಭಾಷಣೆ ಬರೆದಿದ್ದಾರೆ. ಅನೂಪ್ ಸೀಳಿನ್ ಸಂಗೀತ ನಿರ್ದೇಶನ, ರವಿಕುಮಾರ್ ಛಾಯಾಗ್ರಹಣ, ಲಕ್ಷ್ಮಣ್ ರೆಡ್ಡಿ ಸಂಕಲನ ಹಾಗೂ ರವಿವರ್ಮ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಓಂ ಪ್ರೊಡಕ್ಷನ್ ಲಾಂಛನದಲ್ಲಿ ಓಂಪ್ರಕಾಶ್ ರಾವ್ ಅವರೇ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.