Renukaswamy murder case: ದರ್ಶನ್ ವಿರುದ್ಧ ಚಾರ್ಜ್ ಶೀಟ್ ಸಲ್ಲಿಕೆ, 17 ಆರೋಪಿಗಳು.. 231 ಸಾಕ್ಷಿ.. 3991 ಪುಟಗಳಲ್ಲಿ ಇದೆ ಈ ಎಲ್ಲ ಅಂಶ !
Charge sheet filed against Darshan: ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಪೊಲೀಸರು 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ.
ಬೆಂಗಳೂರು: ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ದರ್ಶನ್ ಹಾಗೂ ಸಹಚರರ ವಿರುದ್ಧ ಕಾಮಾಕ್ಷಿಪಾಳ್ಯ ಪೊಲೀಸರು ದೋಷಾರೋಪ ಪಟ್ಟಿ ಸಲ್ಲಿಸಿದ್ದಾರೆ. 3991 ಪುಟಗಳ ಚಾರ್ಜ್ ಶೀಟ್ ಸಲ್ಲಿಸಲಾಗಿದೆ. ಸೆಪ್ಟೆಂಬರ್ 4 ರ ಬೆಳಿಗ್ಗೆ ಬೆಂಗಳೂರಿನ 24ನೇ ಎಸಿಎಂಎಂ ಕೋಟ್ನಲ್ಲಿ ಪೊಲೀಸರು ಚಾರ್ಜ್ ಶೀಟ್ ಸಲ್ಲಿಕೆ ಮಾಡಿದ್ದಾರೆ.
ಈ ಕೊಲೆ ಪ್ರಕರಣದ FIR ನಲ್ಲಿ ಪವಿತ್ರಾ ಗೌಡ A1 ಮತ್ತು ದರ್ಶನ್ A2 ಆಗಿದ್ದರು. ಅನೇಕರು ಇದು ಬದಲಾಗಬಹುದೆಂದು ಭಾವಿಸಿದ್ದರು. ಆದರೆ ಚಾರ್ಜ್ ಶೀಟ್ ನಲ್ಲಿಯೂ ಪವಿತ್ರಾ ಗೌಡ A1 ಮತ್ತು ದರ್ಶನ್ A2 ಎಂದೇ ದಾಖಲಿಸಿದ್ದಾರೆ. ಎಸಿಪಿ ಚಂದನ್ ಕುಮಾರ್ ಹಾಗೂ ತನಿಖಾ ತಂಡ ಈ ಚಾರ್ಜ್ಶೀಟ್ ಸಲ್ಲಿಕೆ ಮಾಡಿದೆ.
ಇದನ್ನೂ ಓದಿ: ಹಳೆ ಮುನಿಸು ಮರೆತು ದರ್ಶನ್ಗೆ ಧೈರ್ಯ ಹೇಳ್ತಾರಾ ‘ಮಾಣಿಕ್ಯ’..? ಸೋಶಿಯಲ್ ಮೀಡಿಯಾದಲ್ಲಿ ನಡೆಯುತ್ತಿದೆ ಭಯಂಕರ ಚರ್ಚೆ..!
ಚಿತ್ರದುರ್ಗ ಮೂಲದ ರೇಣುಕಾ ಸ್ವಾಮಿ ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆ ಎನ್ನಲಾದ 17 ಆರೋಪಿಗಳ ವಿರುದ್ಧ ದೋಷಾರೋಪ ಪಟ್ಟಿಯನ್ನು ನ್ಯಾಯಾಲಯದ ಮುಂದೆ ಪೊಲೀಸರು ಇಟ್ಟಿದ್ದಾರೆ. ಮೂವರು ಪ್ರತ್ಯಕ್ಷ ಸಾಕ್ಷಿದಾರರು, ಎಫ್ಎಸ್ಎಲ್ ಮತ್ತು ಸಿಎಫ್ಎಸ್ ನ 8 ವರದಿಗಳು, 27 ಜನರ 164 ಹೇಳಿಕೆ, 8 ಇತರೆ ಸರ್ಕಾರಿ ಅಧಿಕಾರಿಗಳ ಸಾಕ್ಷಿ, 56 ಜನ ಪೊಲೀಸರು, 59 ಪಂಚರ ಸಮಕ್ಷಮದಲ್ಲಿ ಮಹಜರು ಸೇರಿ ಈ ಪ್ರಕರಣದಲ್ಲಿ ಒಟ್ಟು 231 ಸಾಕ್ಷಿಗಳನ್ನು ಪೊಲೀಸರು ಕಲೆ ಹಾಕಿದ್ದಾರೆ.
ಸಿಆರ್ಪಿಸಿ 173(8) ಅಡಿಯಲ್ಲಿ ಪ್ರಿಲಿಮಿನರಿ ಚಾರ್ಜ್ ಶೀಡ್ ಸಲ್ಲಿಕೆ ಮಾಡಲಾಗಿದ್ದು,
ಕೊಲೆ ಪ್ರಕರಣದ ತನಿಖೆ ಇನ್ನೂ ಪೂರ್ಣಗೊಂಡಿಲ್ಲ. ಈ ಪ್ರಕರಣದಲ್ಲಿ ವಿಶೇಷ ಕೋರ್ಟ್ಗಾಗಿ ಪೊಲೀಸರು ಸರ್ಕಾರದ ಎದುರು ಮನವಿ ಮಾಡಿದ್ದಾರೆ.
ಇದನ್ನೂ ಓದಿ: ʼದರ್ಶನ್ ತುಂಬಾ ಒಳ್ಳೆಯವರು.. ದೇವರು ಅವರನ್ನು ಕೈ ಬಿಡೋದಿಲ್ಲʼ-ನಟಿ ಮಾಲಾಶ್ರೀ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.