ಎಸ್.ಪಿ. ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ

ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. 

Last Updated : Sep 25, 2020, 02:26 PM IST
  • ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಎಸ್.ಪಿ. ಬಾಲಸುಬ್ರಮಣ್ಯಂ
  • ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದ ಎಸ್.ಪಿ. ಬಾಲಸುಬ್ರಮಣ್ಯಂ
  • ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದ ಎಸ್.ಪಿ. ಬಾಲಸುಬ್ರಮಣ್ಯಂ
ಎಸ್.ಪಿ. ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಸಂತಾಪ title=

ಬೆಂಗಳೂರು: ಖ್ಯಾತ ಸಂಗೀತ ದಿಗ್ಗಜ, ಗಾಯಕರಾದ  ಎಸ್.ಪಿ. ಬಾಲಸುಬ್ರಮಣ್ಯಂ (S.P. Balasubramanyam) ಅವರ ನಿಧನಕ್ಕೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ಅವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.  

ಚಲನಚಿತ್ರರಂಗದ ಶ್ರೇಷ್ಠ ಗಾಯಕರಾಗಿದ್ದ ಅವರು, ಹಿಂದಿ ಸೇರಿದಂತೆ ದಕ್ಷಿಣ ಭಾರತದ ಎಲ್ಲ ಭಾಷೆಗಳ ಚಲನಚಿತ್ರ ಗೀತೆಗಳಿಗೆ ಹಿನ್ನೆಲೆಗಾಯನ ಮಾಡಿ ಅಪಾರ ಜನಪ್ರಿಯತೆಯನ್ನು ಗಳಿಸಿದ್ದರು. ನಟನೆ, ಸಂಗೀತ ಸಂಯೋಜನೆ, ಸಂಗೀತ ಕಾರ್ಯಕ್ರಮಗಳ ನಿರ್ವಹಣೆಯನ್ನೂ ಮಾಡಿ ಸಂಗೀತ ಕ್ಷೇತ್ರದಲ್ಲಿ ಅದ್ವಿತೀಯ ಸಾಧನೆಯನ್ನು ಮಾಡಿದ್ದರು.

ಜೀವನಯಾನ ಮುಗಿಸಿದ ಗಾನಗಾರುಡಿಗ: ಖ್ಯಾತ ಗಾಯಕ 'ಎಸ್ ಪಿ ಬಾಲಸುಬ್ರಹ್ಮಣ್ಯಂ' ಇನ್ನಿಲ್ಲ

10ಕ್ಕಿಂತ ಹೆಚ್ಚು ಭಾಷೆಗಳಲ್ಲಿ 40 ಸಾವಿರಕ್ಕೂ ಮೀರಿ ಹಾಡುಗಳನ್ನು ಹಾಡಿದ ಕೀರ್ತಿ ಅವರದ್ದು.  ಕನ್ನಡ ಮತ್ತು ಕನ್ನಡಿಗರ ಬಗ್ಗೆ ವಿಶೇಷ ಅಭಿಮಾನವನ್ನು ಹೊಂದಿದ್ದರು.   ಪದ್ಮಶ್ರೀ, ಪದ್ಮವಿಭೂಷಣ ಪ್ರಶಸ್ತಿ ಹಾಗೂ ಇನ್ನಿತರ ಪ್ರಶಸ್ತಿ ಗೌರವಗಳನ್ನು ಪಡೆದ ಸುಪ್ರಸಿದ್ಧ ಗಾಯಕರು. ಅವರ ಹಾಡುಗಳು ಜನಮಾನಸದಲ್ಲಿ ಚಿರಸ್ಥಾಯಿಯಾಗಿ ನೆಲೆಸಿದೆ. ಅವರ ನಿಧನದಿಂದ ಸಂಗೀತ ಕ್ಷೇತ್ರದ ಪ್ರಮುಖ ಕೊಂಡಿಯೊಂದು ಕಳಚಿದಂತಾಗಿದೆ ಎಂದು ಹೇಳಿದ್ದಾರೆ.

ಗಾನ ಗಂದರ್ವ ಎಸ್.ಪಿ. ಬಾಲಸುಬ್ರಹ್ಮಣ್ಯಂ ಅವರ ಆರಂಭದ ದಿನಗಳು...

ಮೃತರ ಆತ್ಮಕ್ಕೆ ಶಾಂತಿ ದೊರೆಯಲಿ ಹಾಗೂ ಅವರ ಕುಟುಂಬ ಮತ್ತು ಕೋಟ್ಯಾಂತರ ಅಭಿಮಾನಿಗಳಿಗೆ ಭಗವಂತ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ತಮ್ಮ ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

Trending News