ಬೆಂಗಳೂರು : ಚಿಯಾನ್ ವಿಕ್ರಮ್ ಅಭಿನಯದ, ಪ. ರಂಜಿತ್ ನಿರ್ದೇಶನದ ಹೊಸ ಚಿತ್ರಕ್ಕೆ ಕೊನೆಗೂ ಟೈಟಲ್ ಸಿಕ್ಕಿದೆ. ಈ ಚಿತ್ರಕ್ಕೆ ‘ತಂಗಲಾನ್’ ಎಂದು ನಾಮಕರಣ ಮಾಡಲಾಗಿದ್ದು, ಚಿತ್ರದ ಮೊದಲ ಪೋಸ್ಟರ್ ಬಿಡುಗಡೆಯಾಗಿದೆ. ಈ ಹಿಂದೆ ರಜನಿಕಾಂತ್ ಅಭಿನಯದ ಕಬಾಲಿ, ಕಾಲ ಮುಂತಾದ ಚಿತ್ರಗಳನ್ನು ನಿರ್ದೇಶಿಸಿದ್ದ ಪ. ರಂಜಿತ್, ವಿಕ್ರಮ್ ಅಭಿನಯದಲ್ಲಿ ಕೋಲಾರ ಗೋಲ್ಡ್ ಫೀಲ್ಡ್ ಹಿನ್ನೆಲೆಯಲ್ಲಿ ಒಂದು ಚಿತ್ರ ಮಾಡುತ್ತಾರೆ ಎಂಬ ಸುದ್ದಿ ಇತ್ತು. ಈ ಚಿತ್ರ ಈಗ ಅಧಿಕೃತವಾಗಿರುವುದಷ್ಟೇ ಅಲ್ಲ, ಸೋಮವಾರ ದೀಪಾವಳಿ ಹಬ್ಬದ ಪ್ರಯುಕ್ತ ಚಿತ್ರದ ಟೈಟಲ್ ಟೀಸರ್ ಸಹ ಅನಾವರಣಗೊಂಡಿದೆ.


COMMERCIAL BREAK
SCROLL TO CONTINUE READING

‘ತಂಗಲಾನ್’ ಚಿತ್ರದಲ್ಲಿ ವಿಕ್ರಮ್ ವಿಭಿನ್ನ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದು, ಹಬ್ಬದ ದಿನ ಅವರ ಚಿತ್ರವೊಂದರ ಟೀಸರ್ ಬಿಡುಗಡೆಯಾಗಿದ್ದು ಅಭಿಮಾನಿಗಳಲ್ಲಿ ಸಂತಸ ತಂದಿದೆ. ಈ ಚಿತ್ರದಲ್ಲಿ ವಿಕ್ರಮ್ ಜೊತೆಗೆ ಪಾರ್ವತಿ, ಮಾಳವಿಕಾ ಮೋಹನನ್, ಪಶುಪತಿ, ಹರಿಕೃಷ್ಣನ್, ಅನ್ಬುದುರೈ ಮುಂತಾದ ಪ್ರತಿಭಾವಂತ ಕಲಾವಿದರ ದಂಡೇ ಇದೆ. ಈ ಚಿತ್ರಕ್ಕೆ ಎ. ಕಿಶೋರ್ ಛಾಯಾಗ್ರಹಣ ಮಾಡುತ್ತಿದ್ದು, ಜಿ.ವಿ. ಪ್ರಕಾಶ್ ಕುಮಾರ್ ಸಂಗೀತ ಸಂಯೋಜಿಸುತ್ತಿದ್ದಾರೆ. 


ಇದನ್ನೂ ಓದಿ: ಭಾರತ - ಪಾಕ್ ಕ್ರಿಕೆಟ್ ಪಂದ್ಯದಲ್ಲಿ ರಾರಾಜಿಸಿದ "ಘೋಸ್ಟ್‌" ಚಿತ್ರದ ಪೋಸ್ಟರ್


ಪ. ರಂಜಿತ್ ಅವರೇ ಈ ಚಿತ್ರಕ್ಕೆ ಕಥೆ-ಚಿತ್ರಕಥೆ ಬರೆದಿದ್ದು ಅವರಿಗೆ ಬರವಣಿಗೆಯಲ್ಲಿ ತಮಿಳ್ ಪ್ರಭಾ ಸಹಾಯ ಮಾಡಿದ್ದಾರೆ. ಎಸ್.ಎಸ್. ಮೂರ್ತಿ ಕಲಾನಿರ್ದೇಶನ ಮತ್ತು ಆರ್.ಕೆ. ಸೆಲ್ವಾ ಅವರ ಸಂಕಲನವಿದೆ. ಕೆಜಿಎಫ್ ಹಿನ್ನೆಲೆಯಲ್ಲಿ ಸಾಗುವ ಈ ಆಕ್ಷನ್ ಚಿತ್ರವನ್ನು ಸ್ಟುಡಿಯೋ ಗ್ರೀನ್ ಸಂಸ್ಥೆಯಡಿ ಕೆ.ಇ. ಜ್ನಾನವೇಲ್ ರಾಜ ನಿರ್ಮಿಸುತ್ತಿದ್ದಾರೆ. ದೊಡ್ಡ ಬಜೆಟ್ನಲ್ಲಿ ಈ ಚಿತ್ರ ತಯಾರಾಗುತ್ತಿದ್ದು, ನಿರ್ಮಾಣದಲ್ಲಿ ಪ. ರಂಜಿತ್ ಅವರ ನೀಲಂ ಪ್ರೊಡಕ್ಷನ್ಸ್ ಸಹ ಕೈಜೋಡಿಸಿದೆ.https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ