Salman khan mamata banerjee : ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಬಾಲಿವುಡ್‌ ನಟ ಸಲ್ಮಾನ್‌ ಖಾನ್‌ ಅವರ ಜೊತೆ ವೇದಿಕೆ ಮೇಲೆ ಡ್ಯಾನ್ಸ್‌ ಮಾಡಿದ್ದಾರೆ. ಈ ಕುರಿತು ವಿಡಿಯೋ ಒಂದು ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ವೈರಲ್‌ ಆಗುತ್ತಿದೆ.


COMMERCIAL BREAK
SCROLL TO CONTINUE READING

ಹೌದು.. ಇತ್ತೀಚಿಗೆ ಕೋಲ್ಕತ್ತಾದಲ್ಲಿ ನಡೆದ 29ನೇ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಸಿಎಂ ಬ್ಯಾನರ್ಜಿಯವರು ಭಾಗವಹಿಸಿದ್ದರು. ಈ ಕಾರ್ಯಕ್ಕೆ ಹಲವು ಬಾಲಿವುಡ್‌ ಸೆಲೆಬ್ರಿಟಿಗಳು ಸೇರಿದಂತೆ ಮುಖ್ಯ ಅತಿಥಿಯಾಗಿ ಸಲ್ಮಾನ್ ಖಾನ್ ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಧಾಟಿಸಿದ ಮಮತಾ ಬ್ಯಾನರ್ಜಿ, ಥೀಮ್ ಸಾಂಗ್​ಗೆ ಬಾಲಿವುಡ್​ ನಟರ ಜೊತೆ ಹೆಜ್ಜೆ ಹಾಕಿ ಗಮನ ಸೆಳೆದರು.


ಕುಡಿದ ಮತ್ತಿನಲ್ಲಿ ನಡುರಾತ್ರಿ ರಸ್ತೆ ಮೇಲೆ ತೂರಾಡಿದ ಬಾಲಿವುಡ್‌ ನಟ..! ಸನ್ನಿ ಡಿಯೋಲ್‌ ವಿಡಿಯೋ ವೈರಲ್‌


ಚಲನಚಿತ್ರೋತ್ಸವದಲ್ಲಿ, ಬಾಲಿವುಡ್‌ ತಾರೆಗಳಾದ ಅನಿಲ್ ಕಪೂರ್, ಮಹೇಶ್ ಭಟ್, ಶತ್ರುಘ್ನ ಸಿನ್ಹಾ, ಸೋನಾಕ್ಷಿ ಸಿನ್ಹಾ, ಸೇರಿದಂತೆ ಅನೇಕ ಗಣ್ಯರು ಭಾಗವಹಿಸಿದ್ದರು. ಇನ್ನು ನಗರದ 23 ಚಿತ್ರಮಂದಿರಗಳಲ್ಲಿ ಸಿನಿಮಾಗಳು ಪ್ರದರ್ಶನಗೊಳ್ಳಿದ್ದು, ಸಿನಿ ಪ್ರೇಮಿಗಳಿಗೆ ಹಬ್ಬದ ವಾತಾರವಣ ಸೃಷ್ಟಿಯಾಗಿದೆ.


72 ಚಲನಚಿತ್ರಗಳು, 50 ಕಿರುಚಿತ್ರಗಳು ಹಾಗೂ ಸಾಕ್ಷ್ಯಚಿತ್ರಗಳನ್ನು ಸ್ಪರ್ಧಾತ್ಮಕ ವಿಭಾಗದಲ್ಲಿ ಪ್ರದರ್ಶಿಸಲಾಗುವುದು. ಸ್ಪರ್ಧೆಯೇತರ ವಿಭಾಗದಲ್ಲಿ 97 ಚಿತ್ರಗಳಿವೆ. ಈ ಬಾರಿ 39 ದೇಶಗಳ ಚಿತ್ರಗಳು ನಾಮನಿರ್ದೇಶನಗೊಂಡಿದ್ದು, ಈ ಪೈಕಿ ಒಟ್ಟು 219 ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಅಲ್ಲದೆ, ಬೆಂಗಾಲಿ ಪನೋರಮಾ ವಿಭಾಗದಲ್ಲಿ ಏಳು ಬೆಂಗಾಲಿ ಚಿತ್ರಗಳು ಪ್ರದರ್ಶನಗೊಳ್ಳಲಿವೆ. ಈ ಸಿನಿಹಬ್ಬ ಡಿಸೆಂಬರ್ 12ರವರೆಗೆ ನಡೆಯಲಿದೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.