ಸಿಎಂ ಭೇಟಿಯಾದ ಗೀತಾ -ಶಿವಣ್ಣ : ಇದರ ಹಿಂದಿದೆಯಾ ರಾಜಕೀಯ ಲೆಕ್ಕಾಚಾರ..!?

Shiva Rajkumar : ಹ್ಯಾಟ್ರಿಕ್‌ ಹಿರೋ ಶಿವರಾಜ್‌ ಕುಮಾರ್‌ ಅವರು ತಮ್ಮ ಪತ್ನಿ ಗೀತಾ ಅವರ ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಬೇಟಿಯಾಗಿದ್ದಾರೆ. ಇದು ಮೇಲ್ನೋಟಕ್ಕೆ ಸ್ನೇಹಪೂರ್ವಕ ಬೇಟಿ ಎನಿಸಿದರೂ ಇದರ ಹಿಂದೆ ರಾಜಕೀಯ ಲೆಕ್ಕಾಚಾರ ಇದೆ ಎಂಬ ಮಾತುಗಳು ಕೇಳಿಬರುತ್ತಿವೆ.  

Written by - Savita M B | Last Updated : Jun 14, 2023, 04:36 PM IST
  • ಸಿಎಂ ಅಧಿಕೃತ ನಿವಾಸಕ್ಕೆ ಬೇಟಿ ನೀಡಿದ ಶಿವಣ್ಣ ಹಾಗೂ ಗೀತಾ‌
  • ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಶಿವಣ್ಣ ಕಾಂಗ್ರೆಸ್‌ಗೆ ಒತ್ತಾಯ ಹೇರಿದ್ದರು
  • ವಿಧಾನಸಭಾ ಚುನಾವಣೆ ಬಳಿಕ ಸದ್ಯಕ್ಕೆ ಎಲ್ಲರ ಚಿತ್ತ 2024ರ ಲೋಕಸಭಾ ಚುನಾವಣೆಯತ್ತ ಇದೆ.
ಸಿಎಂ ಭೇಟಿಯಾದ ಗೀತಾ -ಶಿವಣ್ಣ : ಇದರ ಹಿಂದಿದೆಯಾ ರಾಜಕೀಯ ಲೆಕ್ಕಾಚಾರ..!? title=

Shirajkuamar Visited Siddaramaiah House : ಸ್ಯಾಂಡಲ್‌ವುಡ್‌ನ ಸ್ಟಾರ್‌ ನಟ ಶಿವರಾಜಕುಮಾರ್‌ ದಂಪತಿ ಸೋಮವಾರ ಬೆಳಿಗ್ಗೆ ಸಿಎಂ ಸಿದ್ದರಾಮಯ್ಯ ಅವರನ್ನು ಬೇಟಿಯಾಗಿದ್ದಾರೆ. ಸಿಎಂ ಅಧಿಕೃತ ನಿವಾಸಕ್ಕೆ ಬೇಟಿ ನೀಡಿದ ಶಿವಣ್ಣ ಹಾಗೂ ಗೀತಾ ಅವರು ಕೆಲ ಕಾಲ ಸಿದ್ದರಾಮಯ್ಯ ಅವರ ಜೊತೆ ಮಾತುಕತೆ ನಡೆಸಿದ್ದಾರೆ. 

ವಿಧಾನಸಭೆ ಚುನಾವಣೆಯ ಸಂದರ್ಭದಲ್ಲಿ ಗೀತಾ ಶಿವರಾಜ್‌ಕುಮಾರ್ ಅವರು ಕಾಂಗ್ರೆಸ್‌ ಪಕ್ಷಕ್ಕೆ ಸೇರ್ಪಡೆಗೊಂಡಿದ್ದರು. ಇದರ ಬೆನ್ನಲ್ಲೇ ಸಿದ್ದರಾಮಯ್ಯ, ಜಗದೀಶ ಶೆಟ್ಟರ್‌ ಸೇರಿದಂತೆ ಕಾಂಗ್ರೆಸ್‌ ನ ನಾಯಕರ ಪರವಾಗಿ ಶಿವಣ್ಣ ಚುನಾವಣಾ ಪ್ರಚಾರ ನಡೆಸಿದ್ದರು. ಕಾಂಗ್ರೆಸ್‌ ಅಧಿಕಾರದ ಚುಕ್ಕಾಣೆ ಹಿಡಿದ ನಂತರ ತಮ್ಮ ಸಂಬಂಧಿ ಮಧು ಬಂಗಾರಪ್ಪ ಅವರಿಗೆ ಸಚಿವ ಸ್ಥಾನ ನೀಡುವಂತೆ ಶಿವಣ್ಣ ಕಾಂಗ್ರೆಸ್‌ಗೆ ಒತ್ತಾಯ ಹೇರಿದ್ದರು ಎಂಬ ಮಾತುಗಳು ಕೇಳಿ ಬಂದಿದ್ದವು.

ಇದನ್ನೂ ಓದಿ-Gandii Baat: ವಿವಾದ ಸೃಷ್ಟಿಸಿದ ಏಕ್ತಾ ಕಪೂರ್ 'ಗಂಧೀಬಾತ್​' ಪೋಸ್ಟರ್..‌ ಲಕ್ಷ್ಮೀ ದೇವಿಗೆ ಇದೆಂಥ ಅವಮಾನ! ​

ವಿಧಾನಸಭಾ ಚುನಾವಣೆ ಬಳಿಕ ಸದ್ಯಕ್ಕೆ ಎಲ್ಲರ ಚಿತ್ತ 2024ರ ಲೋಕಸಭಾ ಚುನಾವಣೆಯತ್ತ ಇದೆ. ಇದೇ ಕಾರಣಕ್ಕೆ ಶಿವಣ್ಣ ಮತ್ತು ಶಿವರಾಜಕುಮಾರ್‌ ಅವರು ಸಿದ್ದರಾಮಯ್ಯ ಅವರನ್ನು ಬೇಟಿಯಾಗಿದ್ದಾರೆ ಎನ್ನುವ ಮಾತುಗಳು ಕೇಳಿ ಬರುತ್ತಿವೆ. ಆದರೆ ಸಿದ್ದರಾಮಯ್ಯ ಅವರು ತಮ್ಮ ಸೋಷಿಯಲ್‌ ಮಿಡಿಯಾದಲ್ಲಿ ಅವರ ನನ್ನನ್ನು ಅಭಿನಂದಿಸಲು ಬೇಟಿ ನೀಡಿದ್ದರು ಎಂದು ಬರೆದುಕೊಂಡಿದ್ದಾರೆ. 

ಇದನ್ನೂ ಓದಿ-ಸುಶಾಂತ್ ಸಿಂಗ್ ರಜಪೂತ್ ಪುಣ್ಯತಿಥಿ : ದುರಂತ ಅಂತ್ಯ ಕಂಡ ನಟನ ಅದ್ಭುತ ಸಿನಿಮಾಗಳಿವು..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News