ಕರಾವಳಿ: ಕಾಮಿಡಿ ಪಕ್ಕಕ್ಕಿಟ್ಟು ಖಡಕ್ ವಿಲನ್ ಆದ ಮಿತ್ರ!
Karavali: ಕನ್ನಡದ ಖ್ಯಾತ ಕಾಮಿಡಿಯನ್ `ಮಿತ್ರ` ಪ್ರಜ್ವಲ್ ದೇವರಾಜ್ ಅವರ ಕರಾವಳಿ ಸಿನಿಮಾದಲ್ಲಿ ಮುಖ್ಯಪಾತ್ರವೊಂದರಲ್ಲಿ ಅಭಿನಯ ಮಾಡ್ತಿದ್ದಾರೆ. ಅದಕ್ಕಾಗಿ ಗೆಟಪ್ ಕೂಡ ಚೇಂಜ್ ಮಾಡಿಕೊಂಡಿದ್ದಾರೆ.
Actor Mithra New Look: 'ಮಿತ್ರ' ಅಂದ್ರೆ ಕನ್ನಡ ಸಿನಿಮಾರಂಗಕ್ಕೆ ಚಿರಪರಿಚಿತರು. ಕಳೆದ ಎರಡು ದಶಕಗಳಿಂದ ಮಿತ್ರ ಕನ್ನಡ ಚಿತ್ರರಂಗದಲ್ಲಿ ಹಿರಿತೆರೆ ಕಿರುತೆರೆ ಸೇರಿದಂತೆ ಎಲ್ಲೆಡೆ ಭಿನ್ನ ವಿಭಿನ್ನ ಪಾತ್ರಗಳ ಮೂಲಕ ಪ್ರೇಕ್ಷಕರನ್ನ ರಂಜಿಸುತ್ತಾ ಬಂದಿದ್ದಾರೆ. ಸಿಲ್ಲಿ-ಲಲ್ಲಿಯಲ್ಲಿ ನನಗೆ ಲೆಕ್ಕ ಮಾತ್ರ ಹೆಲ್ಬೇಡಿ ಅಂತ ಎಲ್ಲರ ಹೊಟ್ಟೆ ಹುಣ್ಣಾಗುವಷ್ಟು ನಗಿಸುತ್ತಾ ಕಾಮಿಡಿ ಪಾತ್ರಗಳಿಗೆ ಹೆಸರಾಗಿದ್ದ ಮಿತ್ರ ಎಮೋಷನ್ ಪಾತ್ರಕ್ಕೂ ತಮ್ಮನ್ನ ತಾವು ಒಗ್ಗಿಸಿಕೊಂಡು ಅಭಿನಯಿಸುತ್ತಾ ಪ್ರೇಕ್ಷಕರಿಂದ ಚಪ್ಪಾಳೆ ಗಿಟ್ಟಿಸಿಕೊಂಡಿದ್ದರು. ಇದೀಗ ಕರಾವಳಿಯಲ್ಲಿ ಮಿತ್ರ ಅವರ ಖದರ್ ಬದಲಾಗಿದ್ದು ಖಡಕ್ ವಿಲನ್ ಆಗಿ ಕಾಣಿಸಿಕೊಂಡಿದ್ದಾರೆ.
ಕರಾವಳಿ ಸಿನಿಮಾದಲ್ಲಿ ಮಿತ್ರ (Mithra) ಅವರ ಲುಕ್ ಬೇರೆಯದ್ದೇ ರೀತಿ ಇದೆ... ಹೌದು, ಮಿತ್ರ ಪ್ರಜ್ವಲ್ ದೇವರಾಜ್ (Prajwal Devraj) ಅವರ ಕರಾವಳಿ ಸಿನಿಮಾದಲ್ಲಿ ಮುಖ್ಯಪಾತ್ರವೊಂದರಲ್ಲಿ ಅಭಿನಯ ಮಾಡ್ತಿದ್ದಾರೆ. ಅದಕ್ಕಾಗಿ ಗೆಟಪ್ ಕೂಡ ಚೇಂಜ್ ಮಾಡಿಕೊಂಡಿದ್ದಾರೆ. ಒಂದು ಸಿನಿಮಾಗಾಗಿ ಮಾಡಿಕೊಂಡ ಲುಕ್ ಈಗ ಮಿತ್ರ ಅವ್ರ ಕೆರಿಯರ್ನಲ್ಲಿ ಟರ್ನಿಂಗ್ ಪಾಯಿಂಟ್ ಕೊಡ್ತಿದೆ.
ಇದನ್ನೂ ಓದಿ- ಸಿನಿಮಾಗೆ ಈಕೆ ಸುತಾರಾಮ್ ಸೂಟ್ ಆಗಲ್ಲ ಎಂದವರ ಮುಂದೆ ನಟಿ ಕಲ್ಪನಾ ಸ್ಟಾರ್ ಆಗಿ ಹಿಟ್ ಆಗಿದ್ದು ಹೇಗೆ ಗೊತ್ತಾ..?
ಇಷ್ಟು ದಿನಗಳ ಕಾಲ ಕಾಮಿಡಿ ಸ್ಟಾರ್ (Comedy Star) ಆಗಿ ಮಿಂಚ್ತಿದ್ದ ಮಿತ್ರ ಇನ್ನು ಮುಂದೆ ಸ್ಯಾಂಡಲ್ ವುಡ್ ನ ಖಡಕ್ ವಿಲನ್ ಆಗಲಿದ್ದಾರೆ. ಗಡ್ಡ ಬಿಟ್ಟು ಲುಕ್ ಬದಲಾಯಿಸಿಕೊಂಡ ಮೇಲೆ ಬೇರೆ ರೀತಿ ಪಾತ್ರಗಳು ಮಿತ್ರ ಅವರನ್ನು ಹುಡುಕಿ ಬರ್ತಿವೆಯಂತೆ. ಸದ್ಯ ಅದಕ್ಕಾಗಿ ಒಂದು ಸ್ಟೈಲಿಷ್ ವಿಲನ್ ಲುಕ್ ನಲ್ಲಿ ಫೋಟೋಶೂಟ್ ಮಾಡಿಸಿದ್ದಾರೆ ಮಿತ್ರ.
ಮಿತ್ರ ಅವರು ಮಾಡಿಸಿರುವ ಫೋಟೋಶೂಟ್ ಫೋಟೋಗಳನ್ನ ನೋಡ್ತಿದ್ರೆ ವಾವ್ಹ್ ಮಿತ್ರ ಅವ್ರು ಹೀಗೂ ಕಾಣ್ತಾರಾ ಅಂತ ಅನ್ನಿಸೋದು ಗ್ಯಾರೆಂಟಿ. ವಿಲನ್ ಲುಕ್ ನಲ್ಲಿ ಸಾಕಷ್ಟು ವಿಭಿನ್ನ ಶೇಡ್ ನಲ್ಲಿ ಮಿತ್ರ ಕ್ಯಾಮೆರಾಗೆ ಪೋಸ್ ಕೊಟ್ಟಿದ್ದಾರೆ. ಇನ್ನು ಈ ಫೋಟೋ ಶೂಟ್ ಮಾಡಿರೋದು ಕರಾವಳಿ ಸಿನಿಮಾದ ಸಿನಿಮಾಟೋಗ್ರಾಫರ್ ಅಭಿಮನ್ಯು ಸದಾನಂದ್.
ಇದನ್ನೂ ಓದಿ- 20ನೇ ವಯಸ್ಸಿನಲ್ಲಿ ತಾಯಿ.. ಎರಡು ಮದುವೆಯಾದರೂ ಒಂಟಿಯಾಗಿಯೇ ಜೀವನ ನಡೆಸುತ್ತಿರುವ ನಟಿ ಈಕೆ!!
ಮಿತ್ರ ಅವ್ರ ಲುಕ್ ಅನ್ನ ಸ್ಟೈಲಿಷ್ ಮಾಡಿರೋದು ಕಾಲಿವುಡ್ ನ ಸ್ಟೈಲಿಷ್ ಕಣ್ಮಣಿ. ಮಿತ್ರ ಅವರ ಈ ಲುಕ್ ಬರೀ ಲುಕ್ ಆಗಿಯೇ ಉಳಿದಿಲ್ಲ. ಕರಾವಳಿ ಸಿನಿಮಾ ಬಿಟ್ಟು ಕನ್ನಡದ ದೊಡ್ಡ ಎರಡು ಸ್ಟಾರ್ ಸಿನಿಮಾಗಳಲ್ಲಿ ಮಿತ್ರ ಖಡಕ್ ವಿಲನ್ ಆಗಿ ಕಾಣಿಸಿಕೊಳ್ತಿದ್ದಾರೆ. ಅದರ ಜೊತೆಗೆ ತಮಿಳಿನ ಒಂದು ಸಿನಿಮಾಗೆ ವಿಲನ್ ಆಗಿ ಆಯ್ಕೆ ಆಗಿದ್ದಾರೆ. ಕಲಾವಿದ ಆದವ್ರು ಎಂದಿಗೂ ಒಂದೇ ಪಾತ್ರಕ್ಕೆ ಅಂಟಿಕೊಳ್ಳಬಾರದು ವಯಸ್ಸಿಗೆ ತಕ್ಕಂತೆ ತಮ್ಮನ್ನ ನಾವು ಬದಲಾಯಿಸಿಕೊಳ್ಳಬೇಕು ಅನ್ನೋದನ್ನ ಮಿತ್ರ ಅವ್ರ ಫಾಲೋ ಮಾಡಿದಂತಿದೆ. ಸದ್ಯ ಸಾಲ್ಟ್ ಅಂಡ್ ಪೆಪ್ಪರ್ ಲುಕ್ ಹಾಗೂ ಮಿಲನ್ ಖದರ್ ನಲ್ಲಿ ಮಿತ್ರ ಸೂಪರ್ ಆಗಿ ಮಿಂಚ್ತಿದ್ದಾರೆ....
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.