ಶೀಘ್ರದಲ್ಲೇ ಕಾಮಿಡಿ ಕಥಾಹಂದರ ಒಳಗೊಂಡ ಚಿತ್ರ ಫಾರೆಸ್ಟ್ ಟ್ರೈಲರ್ ರಿಲೀಸ್‌

ಅಡ್ವೆಂಚರಸ್ ಕಾಮಿಡಿ ಕಥಾಹಂದರ ಒಳಗೊಂಡ ಚಿತ್ರ "ಫಾರೆಸ್ಟ್"  ತನ್ನ ಟೈಟಲ್, ತಾರಾಗಣ ಹಾಗೂ ಕಾನ್ಸೆಪ್ಟ್ ಕಾರಣದಿಂದಲೇ ದೊಡ್ಡ ಮಟ್ಟದ ನಿರೀಕ್ಷೆ  ಹುಟ್ಟುಹಾಕಿದೆ.  

Written by - YASHODHA POOJARI | Last Updated : Aug 19, 2024, 06:19 PM IST
  • ಅಡ್ವೆಂಚರಸ್ ಕಾಮಿಡಿ ಕಥಾಹಂದರ ಒಳಗೊಂಡ ಚಿತ್ರ
  • ಶೀಘ್ರದಲ್ಲೇ ಫಾರೆಸ್ಟ್ ಸಿನಿಮಾದ ಟ್ರೈಲರ್ ರಿಲೀಸ್‌
  • ಕಾಡಲ್ಲಿ ನಡೆಯುವ ಅಡ್ವೆಂಚರಸ್ ಕಾಮಿಡಿ ಸ್ಟೋರಿ
ಶೀಘ್ರದಲ್ಲೇ ಕಾಮಿಡಿ ಕಥಾಹಂದರ ಒಳಗೊಂಡ ಚಿತ್ರ ಫಾರೆಸ್ಟ್ ಟ್ರೈಲರ್ ರಿಲೀಸ್‌  title=

ಅಡ್ವೆಂಚರಸ್ ಕಾಮಿಡಿ ಕಥಾಹಂದರ ಒಳಗೊಂಡ ಚಿತ್ರ "ಫಾರೆಸ್ಟ್"  ತನ್ನ ಟೈಟಲ್, ತಾರಾಗಣ ಹಾಗೂ ಕಾನ್ಸೆಪ್ಟ್ ಕಾರಣದಿಂದಲೇ ದೊಡ್ಡ ಮಟ್ಟದ ನಿರೀಕ್ಷೆ ಹುಟ್ಟುಹಾಕಿದೆ.  ಎನ್.ಎಂ.ಕೆ. ಸಿನಿಮಾಸ್ ಬ್ಯಾನರ್ ಅಡಿಯಲ್ಲಿ  ಎನ್.ಎಂ. ಕಾಂತರಾಜ್ ಅವರು ಚಿತ್ರವನ್ನು ನಿರ್ಮಿಸಿದ್ದಾರೆ. ಸಿನಿಮಾ ಬಗ್ಗೆ ತುಂಬಾ ಕಾಳಜಿ ಇಟ್ಟುಕೊಂಡಿರುವ ನಿರ್ಮಾಪಕರು  ಕ್ವಾಲಿಟಿ ವಿಷಯದಲ್ಲಿ ಎಲ್ಲೂ  ಕಾಂಪ್ರಮೈಸ್ ಆಗದೆ,  ಬಜೆಟ್ ಬಗ್ಗೆ ಯೋಚಿಸದೆ  ಧಾರಾಳವಾಗಿ  ಖರ್ಚು ಮಾಡಿದ್ದಾರೆ, ಡಬಲ್ ಇಂಜಿನ್ , ಬ್ರಹ್ಮಚಾರಿಯಂಥ   ರೊಮ್ಯಾಂಟಿಕ್ ಕಾಮಿಡಿ ಸಿನಿಮಾ ಮಾಡಿರುವ ಚಂದ್ರಮೋಹನ್  ಈ ಚಿತ್ರಕ್ಕೆ  ಆಕ್ಷನ್ ಕಟ್ ಹೇಳಿದ್ದಾರೆ, ಕಾಡಲ್ಲಿ ನಡೆಯುವ ಅಡ್ವೆಂಚರಸ್ ಕಾಮಿಡಿ ಸ್ಟೋರಿಯನ್ನು ಈ ಚಿತ್ರದ ಮೂಲಕ   ಹೇಳಹೊರಟಿದ್ದಾರೆ.  

ಹಾಸ್ಯನಟ ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್ ಹಾಗೂ ರಂಗಾಯಣ ರಘು ಅವರಂಥ ಸ್ಟಾರ್  ಕಲಾವಿದರೇ  ಅಭಿನಯಿಸಿದ ಮಲ್ಟಿ ಸ್ಟಾರರ್ ಚಿತ್ರ ಇದಾಗಿದೆ. ಫಾರೆಸ್ಟ್ ನಲ್ಲಿ ನಡೆಯೋ ಅಡ್ವೆಂಚರಸ್ ಕಾಮಿಡಿ ಕಾನ್ಸೆಪ್ಟ್ ಇರುವ ಈ  ಚಿತ್ರದ  ಬಹುತೇಕ ಕಥೆ  ಕಾಡಿನಲ್ಲಿಯೇ ನಡೆಯೋದು ಚಿತ್ರದ ಮತ್ತೊಂದು ವಿಶೇಷ.  

ಇದನ್ನೂ ಓದಿ: ಅಂದು ದರ್ಶನ್‌ ಕೆನ್ನೆಗೆ ಬಾರಿಸಿದ್ದ ಈಕೆ ಇಂದು ಜನಪ್ರಿಯ ನಟಿ... ಯಾರೆಂದು ಗೆಸ್‌ ಮಾಡಿ ನೋಡೋಣ..

ಸದ್ಯದಲ್ಲೇ ಈ ಸಿನಿಮಾದ ಮೊದಲಪ್ರತಿ ಹೊರಬರಲಿದೆ. ಅತಿದೊಡ್ಡ ಕಳ್ಳತನವೊಂದರ ಸುತ್ತ ನಡೆಯುವ  ಘಟನೆಗಳನ್ನು ಈ  ಚಿತ್ರದಲ್ಲಿ ಹೇಳಲಾಗಿದೆ. ಬೆಂಗಳೂರು, ಮಡಿಕೇರಿ, ಚಿಕ್ಕಮಗಳೂರು, ಸಂಪಾಜೆ ಫಾರೆಸ್ಟ್ ಹಾಗೂ ಮಲೆ ಮಾದೇಶ್ವರ ಬೆಟ್ಟದ ಸುತ್ತಮುತ್ತ ೮೦ ದಿನಗಳ ಕಾಲ ಈ ಚಿತ್ರದ ಚಿತ್ರೀಕರಣ ನಡೆದಿದೆ. 

ಕೆಲವು ಕಡೆ ಡಬಲ್ ಕಾಲ್‌ಶೀಟ್ ಆಗಿದ್ದರಿಂದ ಶೂಟಿಂಗ್ ದಿನಗಳು ಹೆಚ್ಚಾಗಿದೆ ಎಂದು ನಿರ್ಮಾಪಕ ಕಾಂತರಾಜು ತಿಳಿಸಿದ್ದಾರೆ,  ಈಗಾಗಲೇ  ಚಿತ್ರದ  ಟ್ರೈಲರ್ ಸಿದ್ದವಾಗಿದ್ದು, ಈ ತಿಂಗಳ ಅಂತ್ಯದಲ್ಲಿ ರಿಲೀಸ್ ಮಾಡವುದಾಗಿಯೂ ಹಾಗೂ ಸೆಪ್ಟೆಂಬರ್ ನಲ್ಲಿ  ಚಿತ್ರವನ್ನು ಬಿಡುಗಡೆ ಮಾಡಬೇಕೆಂದು  ನಿರ್ಮಾಪಕ  ಕಾಂತರಾಜು ಅವರು  ಯೋಜನೆ ಹಾಕಿಕೊಂಡಿದ್ದಾರೆ, 

ಅಲ್ಲದೆ  ಚಿತ್ರದ ಮತ್ತೊಂದು ಹಾಡನ್ನು ಸದ್ಯದಲ್ಲೇ ರಿಲೀಸ್  ಮಾಡುವುದಾಗಿಯೂ  ನಿರ್ಮಾಪಕರು ಹೇಳಿದ್ದಾರೆ,  ಚೇತನ್ ಕುಮಾರ್ ಅವರ ರಚನೆಯ ಈ ಹಾಡಿಗೆ ಗಾಯಕ ಚಂದನ್ ಶೆಟ್ಟಿ  ದನಿಯಾಗಿದ್ದಾರೆ. 

ಇದನ್ನೂ ಓದಿ: P. Susheela:  ಖ್ಯಾತ ಗಾಯಕಿ ಪಿ. ಸುಶೀಲಾ ಅಸ್ವಸ್ಥ..! ಆಸ್ಪತ್ರೆಗೆ ದಾಖಲು, ಆತಂಕದಲ್ಲಿ ಅಭಿಮಾನಿಗಳು

ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಕಥೆ, ಚಿತ್ರಕಥೆ ರಚಿಸಿದ್ದಾರೆ. ಅಲ್ಲದೆ  ಸತ್ಯಶೌರ್ಯ ಸಾಗರ್ ಸಂಭಾಷಣೆ ರಚಿಸಿದ್ದಾರೆ.  ಆನಂದ್‌ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ  ಛಾಯಾಗ್ರಹಣ, ಅರ್ಜುನ್ ಕಿಟ್ಟು  ಅವರ ಸಂಕಲನ, ಅಮರ್ ಅವರ ಕಲಾ ನಿರ್ದೇಶನ ಹಾಗೂ ಡಾ.ರವಿವರ್ಮ ಅವರ  ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ.  

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟಿಗೆ, ರಂಗಾಯಣ ರಘು, ಅವಿನಾಶ್, ಪ್ರಕಾಶ್ ತುಮ್ಮಿನಾಡು, ದೀಪಕ್ ರೈ ಪಾಣಂಜೆ, ಸೂರಜ್ ಪಾಪ್ಸ್, ಸುನೀಲ್‌ಕುಮಾರ್ ಮುಂತಾದ ಹಿರಿಯ ಹಾಗೂ ಕಿರಿಯ ಕಲಾವಿದರು ಫಾರೆಸ್ಟ್  ಚಿತ್ರದ ಪ್ರಮುಖ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News