Sudeep v/s Producer Kumar : ಕಿಚ್ಚ ಸುದೀಪ್ ಕನ್ನಡ ಚಿತ್ರರಂಗದ ಅತ್ಯಂತ ಜನಪ್ರಿಯ ನಟರಲ್ಲಿ ಒಬ್ಬರು. ಕೆಲವು ತಿಂಗಳ ಹಿಂದೆ ನಿರ್ಮಾಪಕ ಎಂಎನ್ ಕುಮಾರ್ ಮತ್ತು ಎನ್ಎಂ ಸುರೇಶ್ ನಟ ಸುದೀಪ್‌ ವಿರುದ್ಧ ವಂಚನೆ ಆರೋಪ ಮಾಡಿದ್ದರು. ಸುದ್ದಿಗೋಷ್ಠಿ ನಡೆಸಿ ಸುದೀಪ್‌ ಹಣ ಪಡೆದು ಸಿನಿಮಾ ಮಾಡುತ್ತಿಲ್ಲ ಎಂದು ಗಂಭೀರ ಆರೋಪ ಹೊರೆಸಿದ್ದರು. ಇದೇ ವಿಚಾರಕ್ಕೆ ಸಂಬಂಧಪಟ್ಟಂತೆ ನಟ ಸುದೀಪ್‌ ನ್ಯಾಯಾಲಯದಲ್ಲಿ ಮಾನನಷ್ಟ ಮೊಕದ್ದಮೆ ಹೂಡಿದ್ದರು. 


COMMERCIAL BREAK
SCROLL TO CONTINUE READING

ಇದೀಗ ಬೆಂಗಳೂರಿನ 13ನೇ ಎಸಿಎಂಎಂ ಕೋರ್ಟ್​ ಸುದೀಪ್‌ ವಿರುದ್ಧ ಆರೋಪಿಸಿದ್ದ ನಿರ್ಮಾಪಕರಾದ ಎಂಎನ್ ಕುಮಾರ್ ಹಾಗೂ ಸುರೇಶ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. ನ್ಯಾಯಾಧೀಶರಾದ ವೆಂಕಣ್ಣ ಬಸಪ್ಪ ಹೊಸಮನಿ ಅವರು ನಿರ್ಮಾಪಕರಾದ ಎಂಎನ್ ಕುಮಾರ್ ಹಾಗೂ ಸುರೇಶ್ ಅವರಿಗೆ ಸಮನ್ಸ್ ಜಾರಿ ಮಾಡಲು ಸೂಚಿಸಿದ್ದಾರೆ. ಆಗಸ್ಟ್ 26ರ ಒಳಗೆ ನ್ಯಾಯಾಲಯಕ್ಕೆ ಹಾಜರಾಗುವಂತೆ ಸೂಚನೆ ನೀಡಿದ್ದಾರೆ.


ಇದನ್ನೂ ಓದಿ: ಜೈಲರ್ ಮೊದಲ ದಿನದ ಕಲೆಕ್ಷನ್ ಎಷ್ಟು ಗೊತ್ತಾ? ಬಾಕ್ಸ್ ಆಫೀಸ್ ನಲ್ಲಿ ತಲೈವಾ ಹವಾ!


ಆಗಸ್ಟ್‌ 10 ರಂದು ನ್ಯಾಯಾಲಯದಲ್ಲಿ ನಟ ಸುದೀಪ್‌ ತಮ್ಮ ಹೇಳಿಕೆ ದಾಖಲಿಸಿದ್ದರು. ನಿರ್ಮಾಪಕ ಎಂ.ಎನ್ ಕುಮಾರ್ ಮತ್ತು ಎನ್.ಎಂ ಸುರೇಶ್ ಇಬ್ಬರೂ ತಮ್ಮ ವಿರುದ್ಧ ಮಾಧ್ಯಮಗಳಲ್ಲಿ ಸುಳ್ಳು ಆರೋಪ ಮಾಡಿದ್ದಾರೆ ಎಂದು ಸುದೀಪ್‌ ಹೇಳಿದ್ದರು. ಇದೀಗ ಆಗಸ್ಟ್‌ 11 ರಂದು ಕೋರ್ಟ್​ ಸುದೀಪ್‌ ವಿರುದ್ಧ ಆರೋಪಿಸಿದ್ದ ನಿರ್ಮಾಪಕರಾದ ಎಂಎನ್ ಕುಮಾರ್ ಹಾಗೂ ಸುರೇಶ್ ಅವರಿಗೆ ಸಮನ್ಸ್ ಜಾರಿ ಮಾಡಿದೆ. 


ನ್ಯಾಯಾಲಯಕ್ಕೆ ನೀಡಿದ ಹೇಳಿಕೆಯ ಸಂದರ್ಭದಲ್ಲಿ, ನಿರ್ಮಾಪಕರು ಕ್ಷಮೆಯಾಚಿಸಿದರೆ ಮತ್ತು ರಾಜಿಗೆ ಬರಲು ಸಿದ್ಧರಾಗಿದ್ದರೆ ಪ್ರಕರಣವನ್ನು ಕೈಬಿಡುತ್ತೀರಾ ಎಂದು ಸುದೀಪ್ ಅವರನ್ನು ಕೇಳಲಾಯಿತು, ಆದರೆ ಅವರು ಅದನ್ನು ನಿರಾಕರಿಸಿದ್ದಾರೆ. ಇದರಿಂದ ಇತರ ನಿರ್ಮಾಪಕರಿಗೆ ತಪ್ಪು ಸಂದೇಶ ರವಾನೆಯಾಗುತ್ತದೆ ಎಂದು ಅವರು ಹೇಳಿದ್ದಾರೆ.


ಇದನ್ನೂ ಓದಿ: ನಟಿ ಜಯಪ್ರದಾಗೆ 6 ತಿಂಗಳು ಜೈಲು ಶಿಕ್ಷೆ, 5 ಸಾವಿರ ದಂಡ ವಿಧಿಸಿದ ಕೋರ್ಟ್‌ 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.