COVID-19 Effect: ಕೆಲಸವಿಲ್ಲದೆ ಕನ್ನಡ ಚಿತ್ರರಂಗದ ಕಾರ್ಮಿಕರ ಪರದಾಟ
ಕನ್ನಡ ಚಿತ್ರರಂಗದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಪರಿಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ.
ಬೆಂಗಳೂರು: ಕೊರೊನಾ ಮಹಾಮಾರಿ ಪ್ರತಿಯೊಂದು ರಂಗದ ಮೇಲೂ ಪರಿಣಾಮ ಬೀರಿದೆ. ಲಕ್ಷಾಂತರ ಜನರು ಕೆಲಸ ಕಳೆದುಕೊಂಡಿದ್ದರೆ, ಅನೇಕ ಕುಟುಂಬಗಳ ಬದುಕು ಬೀದಿಪಾಲಾಗಿದೆ. ಅದೇ ರೀತಿ ಕನ್ನಡ ಚಿತ್ರರಂಗ(Kannada Film Industry)ದಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಪರಿಸ್ಥಿತಿ ದೇವರಿಗೆ ಪ್ರೀತಿ ಎನ್ನುವಂತಾಗಿದೆ. ಸಾವಿರಾರು ಸ್ಯಾಂಡಲ್ ವುಡ್(Sandalwood) ಕಾರ್ಮಿಕರು ಕೆಲಸವಿಲ್ಲದೆ ಪರದಾಡುವಂತಾಗಿದೆ.
ಕಳೆದೊಂದು ವರ್ಷದಿಂದ ಕೊರೊನಾ ಲಾಕ್ ಡೌನ್(Corona Lockdown) ಇದ್ದಿದ್ದರಿಂದ ಚಿತ್ರರಂಗದ ಎಲ್ಲ ಕೆಲಸಗಳು ಸ್ಥಗಿತಗೊಂಡಿದ್ದವು. ಜೀವನಕ್ಕೆ ಚಿತ್ರರಂಗವನ್ನೇ ನೆಚ್ಚಿಕೊಂಡಿದ್ದವರ ಬದುಕಿನಲ್ಲಿ ಕೋವಿಡ್-19 ಬಿರುಗಾಳಿಯನ್ನೇ ಎಬ್ಬಿಸಿದೆ. ಸಿನಿ ಕಲಾವಿದರು, ತಂತ್ರಜ್ಞರು, ಕಾರ್ಮಿಕರು ಕೆಲಸವಿಲ್ಲದೆ ಜೀವನ ನಡೆಸಲು ಹೆಣಗಾಡಬೇಕಾಯಿತು. ಕೆಲ ಸ್ಟಾರ್ ನಟರು, ನಿರ್ಮಾಪಕರು, ನಿರ್ದೇಶಕರು ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಿದ್ದವರ ನೆರವಿಗೆ ಬಂದಿದ್ದರು. ಕೊರೊನಾ ಕಿಟ್ ಸೇರಿದಂತೆ ಆರ್ಥಿಕ ಸಹಾಯ ಮಾಡಿದ್ದರು.
ಇದನ್ನೂ ಓದಿ: Special Birthday Teaser: ಶಿವಣ್ಣನ ಹುಟ್ಟುಹಬ್ಬಕ್ಕೆ ಭಜರಂಗಿ 2 ಟೀಸರ್ ರಿಲೀಸ್
ಆದರೆ ಕೊರೊನಾ ನಡುವೆ ಬೆಲೆ ಏರಿಕೆಯೂ ಚಿತ್ರರಂಗದ ಕಾರ್ಮಿಕರ ಜೀವನದ ಮೇಲೆ ಬರೆ ಎಳೆದಿದೆ. ಕೆಲಸವಿಲ್ಲದೆ, ಆದಾಯವಿಲ್ಲದೆ ಬೆಂಗಳೂರಿನಲ್ಲಿ ಬದುಕು ನಡೆಸುವುದಾದರೂ ಹೇಗೆ..? ಮನೆ ಬಾಡಿಗೆ ಕಟ್ಟಲು, ಮನೆಗೆ ಅಗತ್ಯ ವಸ್ತುಗಳನ್ನು ತರಲೂ ಕೂಡ ಪರದಾಡುವಂತಹ ಪರಿಸ್ಥಿತಿ ಚಿತ್ರರಂಗದ ಕಾರ್ಮಿಕರಿಗೆ ಎದುರಾಗಿದೆ. ರಾಜ್ಯ ಸರ್ಕಾರ ಅನ್ ಲಾಕ್(Unlock) ಮಾರ್ಗಸೂಚಿ ಹೊರಡಿಸಿ ಚಿತ್ರರಂಗದ ಕಾರ್ಯಚಟುವಟಿಕೆಗಳಿಗೆ ಅನುಮತಿ ನೀಡಿದ್ದರೂ ಸರಿಯಾಗಿ ಕೆಲಸಗಳು ಇನ್ನೂ ಪ್ರಾರಂಭವಾಗಿಲ್ಲ. ಕೆಲವು ಸಿನಿಮಾಗಳ ಶೂಟಿಂಗ್ ಆರಂಭವಾಗಿದ್ದರೆ, ಇನ್ನೂ ಕೆಲ ಸಿನಿಮಾಗಳ ಕೆಲಸ ಇನ್ನಷ್ಟೇ ಆರಂಭವಾಗಬೇಕಾಗಿದೆ. ಹೀಗಾಗಿ ಚಿತ್ರರಂಗವನ್ನೇ ನಂಬಿಕೊಂಡಿರುವ ಸಾವಿರಾರು ಕಾರ್ಮಿಕರು ಜೀವನ ನಡೆಸಲು ಪರದಾಡಬೇಕಾಗಿದೆ.
Film productions) ಕಾರ್ಯಗಳು ಪುನಃ ಆರಂಭಗೊಂಡಿವೆ, ಆದರೆ ಕಡಿಮೆ ಕೆಲಸವಿದೆ. ಹೀಗಾಗಿ ನಮಗೆ ಸರಿಯಾದ ವೇತನವೂ ಸಿಗುತ್ತಿಲ್ಲ. ಮನೆ ಬಾಡಿಗೆ ಸೇರಿದಂತೆ ಯಾವೂದಕ್ಕೂ ಹಣ ಪಾವತಿಸಲು ಸಾಧ್ಯವಾಗುತ್ತಿಲ್ಲ. ನಟರು, ನಿರ್ದೇಶಕರು ಮತ್ತು ನಿರ್ಮಾಪಕರಿಂದ ನಮಗೆ ಫುಡ್ ಕಿಟ್ ಗಳು ಸಿಗುತ್ತಿವೆ ಎಂದು ಮೇಕಪ್ ಕಲಾವಿದೆ ಸ್ವಾತಿ ತಮ್ಮ ಸಂಕಷ್ಟವನ್ನು ತೋಡಿಕೊಂಡಿದ್ದಾರೆ.
ಇದನ್ನೂ ಓದಿ: Big Relief: ಸಿಂಗಲ್ ಸ್ಕ್ರೀನ್ ಚಿತ್ರಮಂದಿರಗಳಿಗೆ ಆಸ್ತಿ ತೆರಿಗೆ ಪಾವತಿಯಿಂದ ವಿನಾಯಿತಿ
ಸಂಕಷ್ಟಕ್ಕೆ ಸಿಲುಕಿರುವ ಕನ್ನಡ ಚಿತ್ರರಂಗದ ಕಾರ್ಮಿಕರ ನೆರವಿಗೆ ಮುಂದಾಗಿರುವ ಕೃಷಿ ಸಚಿವ ಹಾಗೂ ನಟ ಬಿ.ಸಿ.ಪಾಟೀಲ್(BC Patil), ಕೊರೊನಾದಿಂದ ಕೆಲಸವಿಲ್ಲದೆ ಮೇಕಪ್ ಕಲಾವಿದರು ಮತ್ತು ಛಾಯಾಗ್ರಾಹಕರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅವರ ನೆರವಿಗೆ ಬರುವಂತೆ ಕಾರ್ಮಿಕ ಸಚಿವರಲ್ಲಿ ಮನವಿ ಮಾಡಿಕೊಂಡಿದ್ದೆ. ಮನವಿಗೆ ಸ್ಪಂದಿಸಿ ಅವರು 1 ಸಾವಿರ ಫುಡ್ ಕಿಟ್(Food Kit) ನೀಡಿದ್ದಾರೆ. ಕನ್ನಡ ಚಿತ್ರರಂಗದ ಕಾರ್ಮಿಕರಿಗೆ ಹೆಚ್ಚಿನ ನೆರವು ನೀಡುವ ನಿಟ್ಟಿನಲ್ಲಿ ನಾನು ಕೆಲಸ ಮಾಡುತ್ತಿದ್ದೇನೆ ಎಂದು ಹೇಳಿದ್ದಾರೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.