ನವದೆಹಲಿ: ಭಾರತೀಯ ಕ್ರಿಕೆಟಿಗ ಆಟಗಾರ ಹಾಗೂ ಕನ್ನಡಿಗ ಮನೀಶ್ ಪಾಂಡೆ ಡಿಸೆಂಬರ್ 2 ರಂದು ಮುಂಬೈನಲ್ಲಿ ನಟಿ ಅಶ್ರಿತಾ ಶೆಟ್ಟಿ ಅವರೊಂದಿಗೆ ವಿವಾಹವಾಗಲಿದ್ದಾರೆ ಎಂದು ವರದಿಯಾಗಿದೆ.


COMMERCIAL BREAK
SCROLL TO CONTINUE READING

ಪ್ರಸ್ತುತ ನಡೆಯುತ್ತಿರುವ ವಿಜಯ್ ಹಜಾರೆ ಟ್ರೋಫಿಯಲ್ಲಿ ಪಾಂಡೆ ಕರ್ನಾಟಕ ತಂಡವನ್ನು ಮುನ್ನಡೆಸುತ್ತಿದ್ದಾರೆ.ಅವರ ಸಂಬಂಧಿಕರು ಮತ್ತು ಆಪ್ತರ ಸಮ್ಮುಖದಲ್ಲಿ ಮುಂಬೈನಲ್ಲಿ ಮದುವೆ ನಡೆಯಲಿದೆ ಎಂದು ಮಿಡ್-ಡೇ ಪತ್ರಿಕೆ ವರದಿ ಮಾಡಿದೆ. ಮುಂಬೈನಲ್ಲಿ ಭಾರತ ವೆಸ್ಟ್ ಇಂಡೀಸ್ ವಿರುದ್ಧ ಟಿ 20 ಪಂದ್ಯವನ್ನು ಆಡಲಿರುವುದರಿಂದ ಕೆಲವು ಭಾರತೀಯ ಆಟಗಾರರು ಮದುವೆಯಲ್ಲಿ ಪಾಲ್ಗೊಳ್ಳುವ ನಿರೀಕ್ಷೆಯಿದೆ.


ಇನ್ನು ಮನೀಶ್ ಪಾಂಡೆ ಮದುವೆಯಾಗಲಿರುವ  26 ವರ್ಷದ ನಟಿ ಅಶ್ರಿತಾ ಶೆಟ್ಟಿ ಇದುವರೆಗೆ ಇಂದ್ರಜಿತ್, ಒರು ಕನ್ನಿಯಮ್ ಮೂನು ಕಲಾವಾನಿಕಲಮ್, ಮತ್ತು ಉದಯಂ ಎನ್ಎಚ್ 4 ಚಿತ್ರಗಳಲ್ಲಿ ಕಾಣಿಸಿಕೊಂಡಿದ್ದಾರೆ. ಇನ್ನೊಂದೆಡೆಗೆ ಐಪಿಎಲ್ ಕ್ರಿಕೆಟ್ ನಲ್ಲಿ ಶತಕ ಗಳಿಸಿದ ಮೊದಲ ಭಾರತೀಯ ಆಟಗಾರ ಎನ್ನುವ ಖ್ಯಾತಿಗೆ ಒಳಗಾಗಿರುವ ಪಾಂಡೆ, ದೇಶಿಯ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ನೀಡಿದರೂ ಕೂಡ ರಾಷ್ಟ್ರೀಯ ತಂಡದಲ್ಲಿ ಸ್ಥಾನ ಪಡೆಯಲು ಹೆಣಗಾಡುತ್ತಿದ್ದಾರೆ. 


ಏಕದಿನ ಸರಣಿಯಲ್ಲಿ ಆಸ್ಟ್ರೇಲಿಯಾ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪಾದಾರ್ಪಣೆ ಮಾಡಿದ ಅವರು ತಮ್ಮ ವೃತ್ತಿಜೀವನದ ಅತ್ಯುತ್ತಮ ಇನ್ನಿಂಗ್ಸ್‌ಗಳನ್ನು ಆಡಿದರು. ಇದುವರೆಗೆ 23 ಏಕದಿನ, 31 ಟಿ 20 ಮತ್ತು 89 ಪ್ರಥಮ ದರ್ಜೆ ಪಂದ್ಯಗಳಲ್ಲಿ ಪ್ರತಿನಿಧಿಸಿದ್ದಾರೆ.