Paramvah Song release : ಸಂತೋಷ್ ಕೈದಾಳ ನಿರ್ದೇಶಿಸಿರುವ ಈ ಚಿತ್ರಕ್ಕಾಗಿ ನಾಗೇಶ್ ಕುಂದಾಪುರ, ಶ್ರೀ ತಲಗೇರಿ ಹಾಗೂ ಶಿವರಾಜ್ ಸೇರಿ ಬರೆದಿರುವ "ಭೂರಮೆಲಿ ಮತ್ಯಾರು" ಎಂಬ ತಂದೆ - ಮಗನ ಭಾವನಾತ್ಮಕ ಪಯಣಕ್ಕೆ ಮುನ್ನುಡಿಯಾಗಿರುವ ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿದೆ. ಅಪರಾಜಿತ್ ಹಾಗೂ ಜೋಸ್ ಜೋಸ್ಸೆ ಸಂಗೀತ ನೀಡಿದ್ದಾರೆ. ಖ್ಯಾತ ಗಾಯಕ ರಾಜೇಶ್ ಕೃಷ್ಣನ್ ಹಾಡಿದ್ದಾರೆ. ನಟ ರಾಕ್ಷಸ ಡಾಲಿ ಧನಂಜಯ ಚಿತ್ರದ ಈ ಮೊದಲ ಹಾಡಿನ ಲಿರಿಕಲ್ ವಿಡಿಯೋ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಶಿವಣ್ಣ ʼಭೈರತಿ ರಣಗಲ್ʼ ಅಬ್ಬರಕ್ಕೆ ಮುಹೂರ್ತ..! ರಾಕ್ಷಸನೋ... ರಕ್ಷಕನೋ..


ಚಿತ್ರದ ನಾಯಕ ವೀರಗಾಸೆ ಕಲಾವಿದ. ಅವರ ಕುಟಂಬವೇ ವೀರಗಾಸೆ ಕುಟುಂಬ. ನಾಯಕನಿಗೆ ತಂದೆಯಂದರೆ ಪ್ರಾಣ. ತಂದೆಗೆ ಮಗನೇ ಜೀವ. ಇಂತಹ ವಿಭಿನ್ನ ಕಥಾಹಂದರ ಹೊಂದಿರುವ "ಪರಂವಃ" ಚಿತ್ರದ ಚಿತ್ರೀಕರಣ ಹಾಗೂ ನಂತರದ ಚಟುವಟಿಕೆಗಳು ಮುಕ್ತಾಯವಾಗಿದೆ. ಜುಲೈನಲ್ಲಿ ಚಿತ್ರವನ್ನು  ತೆರೆಗೆ ತರುವ ಪ್ರಯತ್ನ ನಡೆಯುತ್ತಿದೆ ಎಂದು ನಿರ್ದೇಶಕ ಸಂತೋಷ್ ಕೈದಾಳ ತಿಳಿಸಿದ್ದಾರೆ.


ಪೀಪಲ್ ವಲ್ಡ್ ಫಿಲಂಸ್ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ. ಎ.ಎಸ್ ಶೆಟ್ಟಿ ಛಾಯಾಗ್ರಹಣ, ಅಪರಾಜಿತ್ - ಜೋಸ್ ಜೋಸ್ಸೆ ಸಂಗೀತ ನಿರ್ದೇಶನ, ಪೂರ್ಣಚಂದ್ರ ತೇಜಸ್ವಿ ಹಿನ್ನೆಲೆ ಸಂಗೀತ ಹಾಗೂ ವೆಂಕಿ ಯು ಡಿ ವಿ - ವಿಕಾಸ್ ಚಂದ್ರ ಅವರ ಸಂಕಲನ ಈ ಚಿತ್ರಕ್ಕಿದೆ.


ಪ್ರೇಮ್ ಸಿಡ್ಗಲ್, ಮೈತ್ರಿ ಜೆ ಕಶ್ಯಪ್, ಗಣೇಶ್ ಹೆಗ್ಗೋಡು, ನಾಜರ್, ಶೃತಿ, ಮುಕುಂದ್, ಅವಿನಾಶ್, ಶಬರೀಶ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.


ಇದನ್ನೂ ಓದಿ: ಆಫ್ ಶೋಲ್ಡರ್ ಗೌನ್‌ನಲ್ಲಿ ರೆಡ್ ಕಾರ್ಪೆಟ್ ಮೇಲೆ ಹೆಜ್ಜೆ ಹಾಕಿದ ಅನುಷ್ಕಾ ಶರ್ಮಾ


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 
Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.