ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ, ಬಹುನಿರೀಕ್ಷಿತ "ದಿಲ್ ಪಸಂದ್" ಚಿತ್ರ ನವೆಂಬರ್ 11ರಂದು ಬಿಡುಗಡೆಯಾಗುತ್ತಿದೆ. ಚಿತ್ರ ಬಿಡುಗಡೆ ದಿನಾಂಕವನ್ನು ಚಿತ್ರತಂಡ ಇತ್ತೀಚೆಗೆ ಘೋಷಣೆ ಮಾಡಿದೆ. 


COMMERCIAL BREAK
SCROLL TO CONTINUE READING

ಇದನ್ನೂ ಓದಿ: Shivaji Surathkal-2: "IKEA"ದಲ್ಲಿ ಬಿಡುಗಡೆಯಾದ ‘ಶಿವಾಜಿ ಸುರತ್ಕಲ್ 2’ ಟೀಸರ್


ರಶ್ಮಿ ಫಿಲಂಸ್ ಬ್ಯಾನರ್ ಅಡಿಯಲ್ಲಿ ಸುಮಂತ್ ಕ್ರಾಂತಿ ಅವರು ನಿರ್ಮಿಸಿರುವ ಈ ಚಿತ್ರವನ್ನು ಶಿವತೇಜಸ್ ನಿರ್ದೇಶಿಸಿದ್ದಾರೆ. ಪ್ರೇಮಕಥೆಯೊಂದಿಗೆ, ಕೌಟುಂಬಿಕ ಕಥಾಹಂದರವನ್ನು ಈ ಚಿತ್ರ  ಹೊಂದಿದೆ. ಬೆಂಗಳೂರಿನಲ್ಲಿ ಬಹುತೇಕ ಚಿತ್ರೀಕರಣ ನಡೆದಿದೆ.


ಚಿತ್ರೀಕರಣ ನಂತರದ ಚಟುವಟಿಕೆಗಳು ಬಿರುಸಿನಿಂದ ಸಾಗುತ್ತಿದ್ದು, ಮಾಸಾಂತ್ಯಕ್ಕೆ ಟೀಸರ್ ಬಿಡುಗಡೆಯಾಗುವ ಸಾಧ್ಯತೆಯಿದೆ.


ನಾಲ್ಕು ಸುಮಧುರ ಹಾಡುಗಳಿಗೆ ಮ್ಯೂಸಿಕ್ ‌ಮಾಂತ್ರಿಕ ಅರ್ಜುನ್ ಜನ್ಯ ಅವರ ಸಂಗೀತ ನಿರ್ದೇಶನವಿದೆ. ಶೇಖರ್ ಚಂದ್ರ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ, ವಿನೋದ್ ಸಾಹಸ ನಿರ್ದೇಶನ ಹಾಗೂ ಮುರಳಿ ಅವರ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ. 


ಇದನ್ನೂ ಓದಿ: SIIMA 2022 Award: ಪುನೀತ್ ರಾಜ್​ಕುಮಾರ್​​ಗೆ ಅತ್ಯುತ್ತಮ ನಟ ಪ್ರಶಸ್ತಿ, ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ


ಡಾರ್ಲಿಂಗ್ ಕೃಷ್ಣ ಅವರಿಗೆ ನಾಯಕಿಯಾಗಿ ನಿಶ್ವಿಕಾ‌ ನಾಯ್ಡು ಅಭಿನಯಿಸಿದ್ದಾರೆ. ಮೇಘ ಶೆಟ್ಟಿ, ಸಾಧು ಕೋಕಿಲ, ರಂಗಾಯಣ ರಘು, ತಬಲ ನಾಣಿ, ಗಿರಿ, ಅರುಣಾ ಬಾಲರಾಜ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.