ಟೀಸರ್ ನಲ್ಲೇ ಮೋಡಿಮಾಡಿದ "ಕಪಟಿ"

Kapathi: ಇದು ನಮ್ಮ ಡಿ ಪಿಕ್ಚರ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ ಹನ್ನೆರಡನೇ ಚಿತ್ರ. ಹನ್ನೆರಡು ಚಿತ್ರಗಳಲ್ಲಿ ಹತ್ತು ಕನ್ನಡ ಹಾಗೂ ಎರಡು ತಮಿಳು ಚಿತ್ರಗಳು. ಹನ್ನೊಂದು ಚಿತ್ರಗಳನ್ನು ನಾನೇ ನಿರ್ಮಿಸಿ , ನಿರ್ದೇಶನವನ್ನೂ ಮಾಡಿದ್ದೇನೆ- ನಿರ್ಮಾಪಕ ದಯಾಳ್ ಪದ್ಮನಾಭನ್

Written by - Yashaswini V | Last Updated : Aug 2, 2024, 12:56 PM IST
  • ಸುಮಾರು ಏಳು ವರ್ಷಗಳ (ಕೋಮ ಚಿತ್ರದ) ನಂತರ ನಾವಿಬ್ಬರು ಮತ್ತೆ ನಿರ್ದೇಶಿಸಿರುವ ಚಿತ್ರವಿದು.
  • ಕನ್ನಡದಲ್ಲಿ ತೀರ ವಿರಳ ಎನ್ನಬಹುದಾದ ಕಥಾಹಂದರ ಹೊಂದಿರುವ ಚಿತ್ರವಿದು.
  • ಈ ಕಥೆಯನ್ನು ದಯಾಳ್ ಅವರ ಬಳಿ ಹೇಳಿದ ತಕ್ಷಣ ಒಪ್ಪಿ ನಿರ್ಮಾಣಕ್ಕೆ ಮುಂದಾದರು- ನಿರ್ದೇಶಕರಾದ ರವಿಕಿರಣ್ ಹಾಗೂ ಚೇತನ್ ಎಸ್‌ಪಿ
ಟೀಸರ್ ನಲ್ಲೇ ಮೋಡಿಮಾಡಿದ "ಕಪಟಿ"  title=

Kapathi Teaser Release: ಡಿ.ಪಿಕ್ಚರ್ಸ್ ಲಾಂಛನದಲ್ಲಿ ದಯಾಳ್ ಪದ್ಮನಾಭನ್ ನಿರ್ಮಿಸಿರುವ, ರವಿಕಿರಣ್ ಹಾಗೂ ಚೇತನ್ ಎಸ್.ಪಿ. ಅವರ ಜಂಟಿ ನಿರ್ದೇಶನದ ಹಾಗೂ ಸುಕೃತ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖಪಾತ್ರದಲ್ಲಿ ನಟಿಸಿರುವ "ಕಪಟಿ" ಚಿತ್ರದ ಟೀಸರ್ ಜಂಕಾರ್ ಮ್ಯೂಸಿಕ್ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ನಟ ಡಾರ್ಲಿಂಗ್ ಕೃಷ್ಣ ಟೀಸರ್ ಅನಾವರಣ ಮಾಡಿ ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.

ಇದು ನಮ್ಮ ಡಿ ಪಿಕ್ಚರ್ಸ್ (D Pictures) ಲಾಂಛನದಲ್ಲಿ ನಿರ್ಮಾಣವಾಗಿರುವ ಹನ್ನೆರಡನೇ ಚಿತ್ರ. ಹನ್ನೆರಡು ಚಿತ್ರಗಳಲ್ಲಿ ಹತ್ತು ಕನ್ನಡ ಹಾಗೂ ಎರಡು ತಮಿಳು ಚಿತ್ರಗಳು. ಹನ್ನೊಂದು ಚಿತ್ರಗಳನ್ನು ನಾನೇ ನಿರ್ಮಿಸಿ , ನಿರ್ದೇಶನವನ್ನೂ ಮಾಡಿದ್ದೇನೆ. ಆದರೆ ಈ ಚಿತ್ರವನ್ನು ನಾನು ನಿರ್ಮಾಣ ಮಾತ್ರ ಮಾಡಿದ್ದೇನೆ. ರವಿಕಿರಣ್ ಹಾಗೂ ಚೇತನ್ ಎಸ್.ಪಿ ನಿರ್ದೇಶನ ಮಾಡಿದ್ದಾರೆ. ಇವರು ಹಿಂದೆ "ಕೋಮ" ಎಂಬ ಚಿತ್ರವನ್ನು ನಿರ್ದೇಶಿಸಿದ್ದರು. ಇವರು ಬಂದು ಚಿತ್ರದ ಕಥೆ ಹೇಳಿದಾಗ ಇಷ್ಟವಾಯಿತು. ನಿರ್ಮಾಣಕ್ಕೆ ಮುಂದಾದೆ. "ಡಾರ್ಕ್ ನೆಟ್"  ಕಥಾಹಂದರವನ್ನು ಈ ಚಿತ್ರ ಹೊಂದಿದೆ. ಕನ್ನಡದಲ್ಲಿ "ಗುಲ್ಟು" ಚಿತ್ರದ ನಂತರ ಈ ಜಾನರ್ ನ ಚಿತ್ರ ಬಂದಿರಲಿಲ್ಲ. ಇನ್ನು, ಕಂಟೆಂಟ್ ಓರಿಯಂಟೆಡ್ ಚಿತ್ರಗಳಿಂದ ಯಾವತ್ತು ಯಾರಿಗೂ ನಷ್ಟವಾಗಲ್ಲ ಎಂದು ನಂಬಿರುವವನು ನಾನು. ಆದರೆ ಸ್ವಲ್ಪ ತಾಳ್ಮೆ ಇರಬೇಕು ಅಷ್ಟೇ. ಅದಕ್ಕೆ ಉದಾಹರಣೆ ನನ್ನ ಚಿತ್ರಗಳು. "ಕಪಟಿ" ಚಿತ್ರವನ್ನು ಇತ್ತೀಚೆಗೆ ಸ್ನೇಹಿತರ ಜೊತೆ ನೋಡಿದೆ. ಚೆನ್ನಾಗಿ ಬಂದಿದೆ‌. ಚಿತ್ರ ಆಗಸ್ಟ್ 23 ರಂದು ಬಿಡುಗಡೆಯಾಗಲಿದೆ. ಟೀಸರ್ ಬಿಡುಗಡೆ ಮಾಡಿಕೊಟ್ಟ ಡಾರ್ಲಿಂಗ್ ಕೃಷ್ಣ (Darling Krishna) ಅವರಿಗೆ ಧನ್ಯವಾದ ಎಂದರು ನಿರ್ಮಾಪಕ ದಯಾಳ್ ಪದ್ಮನಾಭನ್(Producer Dayal Padmanabhan).

ಇದನ್ನೂ ಓದಿ- ಬಚ್ಚನ್, ಕಪೂರ್ ಪರಿವಾರ ಅಲ್ಲ,ದೇಶದ ಅತ್ಯಂತ ಶ್ರೀಮಂತ ಸಿನಿ ಫ್ಯಾಮಿಲಿ ಇದು !12 ಸಾವಿರ ಮಂದಿಯನ್ನು ದತ್ತು ಪಡೆದಿರುವ ಉದಾರ ಪರಿವಾರ

ಸುಮಾರು ಏಳು ವರ್ಷಗಳ (ಕೋಮ ಚಿತ್ರದ) ನಂತರ ನಾವಿಬ್ಬರು ಮತ್ತೆ ನಿರ್ದೇಶಿಸಿರುವ ಚಿತ್ರವಿದು. ಕನ್ನಡದಲ್ಲಿ ತೀರ ವಿರಳ ಎನ್ನಬಹುದಾದ ಕಥಾಹಂದರ ಹೊಂದಿರುವ ಚಿತ್ರವಿದು. ಈ ಕಥೆಯನ್ನು ದಯಾಳ್ ಅವರ ಬಳಿ ಹೇಳಿದ ತಕ್ಷಣ ಒಪ್ಪಿ ನಿರ್ಮಾಣಕ್ಕೆ ಮುಂದಾದರು. ಇಡೀ ಚಿತ್ರತಂಡದ ಸಹಕಾರದಿಂದ ಚಿತ್ರ ಚೆನ್ನಾಗಿ ಬಂದಿದೆ. ನಮ್ಮ ಚಿತ್ರಕ್ಕೆ ನಿಮ್ಮ ಬೆಂಬಲವಿರಲಿ ಎಂದು ನಿರ್ದೇಶಕದ್ವಯರಾದ ರವಿಕಿರಣ್ ಹಾಗೂ ಚೇತನ್ ಎಸ್‌ಪಿ ತಿಳಿಸಿದರು.   

ನಾನು ಚಿತ್ರರಂಗವನ್ನು ಬಿಟ್ಟು ಉಡುಪಿಯಲ್ಲಿ ನೆಲೆಸಿದ್ದೆ. ನಿರ್ದೇಶಕರು ಹೇಳಿದ ಈ ಚಿತ್ರದ ಕಥೆ ಕೇಳಿ ಮೆಚ್ಚಿಕೊಂಡು ಬಹು ದಿನಗಳ ನಂತರ ಮತ್ತೆ ನಟಿಸಿದ್ದೇನೆ. ಈ ಚಿತ್ರದಲ್ಲಿ ನನ್ನ ಪಾತ್ರ ವಿಭಿನ್ನವಾಗಿದೆ ಎಂದರು "ಜಟ್ಟ" ಚಿತ್ರದ ಖ್ಯಾತಿಯ ಸುಕೃತ ವಾಗ್ಲೆ.     

ಇದನ್ನೂ ಓದಿ- Actress Bindiya: ಖ್ಯಾತ ಟೀಂ ಇಂಡಿಯಾ ಕ್ರಿಕೆಟಿಗನನ್ನ ಮದುವೆಯಾದ ಹಳ್ಳಿ ಮೇಷ್ಟ್ರು ನಟಿ ಬಿಂದಿಯಾ! ಈಗ ಹೇಗಿದ್ದಾರೆ ನೋಡಿ!!

ಪ್ರಮುಖಪಾತ್ರದಲ್ಲಿ ನಟಿಸಿರುವ ದೇವ್ ದೇವಯ್ಯ ಹಾಗೂ ಸಾತ್ವಿಕ್ ಕೃಷ್ಣನ್ ತಮ್ಮ ಪಾತ್ರದ ಬಗ್ಗೆ ಮಾಹಿತಿ ನೀಡಿ, ಅವಕಾಶ ನೀಡಿದ ನಿರ್ಮಾಪಕ ದಯಾಳ್ ಅವರಿಗೆ ಧನ್ಯವಾದ ಹೇಳಿದರು. ಬಳಿಕ ಸಂಗೀತ ನಿರ್ದೇಶಕ ಜೋಹನ್ ಮಾತನಾಡಿ ಚಿತ್ರದ ಹಾಡುಗಳ ಬಗ್ಗೆ ತಿಳಿಸಿದರು. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News