Darshan: ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಬಂಧಿತ ಆರೋಪಿಗಳ ಚಲನವಲನ, ಅವರು ತೆರಳಿದ ಪ್ರದೇಶಗಳು, ರೇಣುಕಾಸ್ವಾಮಿ ಶವ ಕೊಂಡೊಯ್ದ ಮಾರ್ಗದ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ಸಂಗ್ರಹಿಸಿದ್ದಾರೆ. ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಸಂಗ್ರಹಿಸಿ ತನಿಖೆ ಆರಂಭಿಸಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣಕ್ಕೆ ಸಿಸಿಟಿವಿ ದೃಶ್ಯಾವಳಿ ಪ್ರಮುಖ ಸಾಕ್ಷಿಯಾಗಲಿದೆ ಎಂದು ಪ್ರಕರಣದ ತನಿಖೆ ನಡೆಸುತ್ತಿರುವ ಪೊಲೀಸ್ ಅಧಿಕಾರಿಯೊಬ್ಬರು ಮಾಧ್ಯಮಗಳಿಗೆ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

 ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ 33ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯಲಾಗಿದೆ. ಕೊಲೆಗೂ ಮುನ್ನ ರೇಣುಕಾಸ್ವಾಮಿ ಪಾರ್ಟಿ ಮಾಡಿದ್ದ ಸ್ಟೋನಿ ಬ್ರೂಕ್ ರೆಸ್ಟೋರೆಂಟ್‌ನ ಪಟ್ಟಗೆರೆ ಶೆಡ್, ರೆಸ್ಟೋರೆಂಟ್ನಲ್ಲಿನ ಸಿಸಿಟಿವಿ ದೃಶ್ಯಗಳನ್ನು ಸಂಗ್ರಹಿಸಲಾಗಿದೆ. ದರ್ಶನ್ ಹಾಗೂ ಪವಿತ್ರಾ ಗೌಡ ಅವರ ಮನೆಯ ಸಿಸಿಟಿವಿ ದೃಶ್ಯಾವಳಿಗಳನ್ನು ಈಗಾಗಲೇ ಸಂಗ್ರಹಿಸಲಾಗಿದೆ. ಈವರೆಗೆ 33ಕ್ಕೂ ಹೆಚ್ಚು ಸಿಸಿಟಿವಿ ದೃಶ್ಯಾವಳಿಗಳನ್ನು ಪಡೆಯಲಾಗಿದೆ.. ಇದನ್ನು ಎಫ್ ಎಸ್ ಎಲ್ ಗೆ ಕಳುಹಿಸಿರುವ ಪೊಲೀಸ್ ಅಧಿಕಾರಿಗಳು ವರದಿಗಾಗಿ ಕಾಯುತ್ತಿದ್ದಾರೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ-ʼಸಿನಿಮಾ ಆಫರ್‌ಗಾಗಿ ದೇಹದ ʼಆʼ ಭಾಗ ದೊಡ್ಡದಾಗಿ ಕಾಣಿಸುವಂತೆ ಸರ್ಜರಿ ಮಾಡಿಸಿಕೊಂಡೆʼ ಸತ್ಯ ಬಿಚ್ಚಿಟ್ಟ ಖ್ಯಾತ ಸಿರೀಯಲ್‌ ನಟಿ!!


 ಸಿಸಿಟಿವಿ ದೃಶ್ಯಾವಳಿಗಳನ್ನು ಎಫ್‌ಎಸ್‌ಎಲ್ ಮತ್ತು ಸಿಐಡಿ ತಾಂತ್ರಿಕ ಘಟಕಕ್ಕೆ ಕಳುಹಿಸಿರುವ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತಾಂತ್ರಿಕ ತಪಾಸಣೆ ನಡೆಸಲಿದ್ದಾರೆ. ಚಿತ್ರದುರ್ಗದ ರೇಣುಕಾಸ್ವಾಮಿ ಅವರನ್ನು ಅಪಹರಿಸಿ ಬೆಂಗಳೂರಿನ ಪಟ್ಟಗೆರೆ ಶೆಡ್‌ನಲ್ಲಿ ಬಂಧಿಸಿ, ಹಲ್ಲೆ ನಡೆಸಿ ಹತ್ಯೆಗೈದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.


ಪಟ್ಟಗೆರೆ ಶೆಡ್‌ನಲ್ಲಿ ರೇಣುಕಾಸ್ವಾಮಿಯನ್ನು ಹತ್ಯೆ ಮಾಡಿ ಶವವನ್ನು ಸ್ಕಾರ್ಫಿಯೋ ಕಾರಿನಲ್ಲಿ ಸಾಗಿಸಿ ಒಳಚರಂಡಿಗೆ ಎಸೆದಿದ್ದಾರೆ ಎಂದು ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಈಗಾಗಲೇ ರೇಣುಕಾಸ್ವಾಮಿ ಶವ ಸಾಗಿಸಲಾಗಿದ್ದ ಸ್ಕಾರ್ಫಿಯೋ ಕಾರನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ಎ1 ಆರೋಪಿಯಾಗಿ ನಟಿ ಪವಿತ್ರಾ ಗೌಡ, ಎ2 ಆರೋಪಿಯಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸೇರಿ ಒಟ್ಟು 17 ಮಂದಿಯನ್ನು ಬಂಧಿಸಲಾಗಿದೆ.. 


ಇದನ್ನೂ ಓದಿ-ಅಂಬಾನಿ ಮದುವೆಯಲ್ಲಿ ಮಿಂಚಿದ ವಿದೇಶಿ ಸಹೋದರಿಯರು..! ಲೆಹಂಗಾ, ಮೂಗುತಿ ಧರಿಸಿ ದೇಸಿ ಅವತಾರದಲ್ಲಿ ಹೃದಯ ಕದ್ದ ಚೆಲುವೆಯರು...


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.