ʻರಜತ ಮಹೋತ್ಸವʼ ಸಂಭ್ರಮದಲ್ಲಿ ದರ್ಶನ್.. ʻಬೆಳ್ಳಿ ಪರ್ವʼ ಬೃಹತ್ ವೇದಿಕೆ ಸಜ್ಜು!

Challenging star Darshan: ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಂದನವನಕ್ಕೆ ಪದಾರ್ಪಣೆ ಮಾಡಿ ಭರ್ತಿ 25 ವರ್ಷಗಳಾಗಿವೆ. ಇದೇ ಶುಭ ಸಂದರ್ಭದಲ್ಲಿ ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅರ್ಥಪೂರ್ಣವಾದ ಸಮಾರಂಭವೊಂದನ್ನು ಏರ್ಪಡಿಸಿದ್ದಾರೆ. 

Written by - YASHODHA POOJARI | Last Updated : Feb 13, 2024, 09:29 AM IST
  • ಚಾಲೆಂಜಿಂಗ್ ಸ್ಟಾರ್ ದರ್ಶನ್
  • ದರ್ಶನ್‌ ಸಿನಿ ಜರ್ನಿಗೆ 25 ವರ್ಷ
  • ಫೆಬ್ರವರಿ 17ರ ಸಂಜೆ 5 ಗಂಟೆಗೆ ಬೆಳ್ಳಿ ಪರ್ವ
ʻರಜತ ಮಹೋತ್ಸವʼ ಸಂಭ್ರಮದಲ್ಲಿ ದರ್ಶನ್.. ʻಬೆಳ್ಳಿ ಪರ್ವʼ ಬೃಹತ್ ವೇದಿಕೆ ಸಜ್ಜು! title=

Challenging star Darshan: ಚಾಲೆಂಜಿಂಗ್ ಸ್ಟಾರ್ ದರ್ಶನ್ ಚಂದನವನಕ್ಕೆ ಪದಾರ್ಪಣೆ ಮಾಡಿ ಭರ್ತಿ 25 ವರ್ಷಗಳಾಗಿವೆ. ಇದೇ ಶುಭ ಸಂದರ್ಭದಲ್ಲಿ ದರ್ಶನ್ ಅವರ ನೆಚ್ಚಿನ ಸೆಲೆಬ್ರಿಟಿಗಳು, ಸ್ನೇಹಿತರು ಹಾಗೂ ಹಿತೈಷಿಗಳು ಅರ್ಥಪೂರ್ಣವಾದ ಸಮಾರಂಭವೊಂದನ್ನು ಏರ್ಪಡಿಸಿದ್ದಾರೆ. ಶ್ರೀ ಆದಿಚುಂಚನಗಿರಿ ಶ್ರೀಗಳು, ಶ್ರೀ ಸುತ್ತೂರು ಶ್ರೀಗಳು, ಬೀಬಿಮಠದ ಶ್ರೀಗಳ ಸಾನಿಧ್ಯದಲ್ಲಿ ಹಾಗೂ ಸಂಸದೆ, ಚಿತ್ರನಟಿ ಸುಮಲತಾ ಅಂಬರೀಶ್ ಅವರ ಉಪಸ್ಥಿತಿಯಲ್ಲಿ ಕಾರ್ಯಕ್ರಮ ನೆರವೇರಲಿದೆ.

ಫೆಬ್ರವರಿ 17ರ ಶನಿವಾರ ಸಂಜೆ 5 ಗಂಟೆಗೆ ಬೆಳ್ಳಿ ಪರ್ವ ಡಿ- 25 ಎಂಬ ಕಾರ್ಯಕ್ರಮ ನಡೆಯಲಿದೆ. ಸಾವಿರಾರು ಅಭಿಮಾನಿಗಳ ಸಮ್ಮುಖದಲ್ಲಿ ಈ ಸಮಾರಂಭ ನಡೆಯಲಿದ್ದು, ಕನ್ನಡ ಚಿತ್ರರಂಗದಲ್ಲಿ 25 ವರ್ಷ ಪೂರೈಸಿರುವ ದರ್ಶನ್ ಅವರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜತೆಗೆ ವಿ.ಹರಿಕೃಷ್ಣ ಸಂಗೀತ ಸಂಜೆ ಸೇರಿದಂತೆ ಹಲವು ಮನರಂಜನಾ ಕಾರ್ಯಕ್ರಮಗಳು ಇರಲಿವೆ. 

ಇದನ್ನೂ ಓದಿ: ಅಮಿರ್​ ಖಾನ್ ಪುತ್ರನ ಜತೆ ಸಾಯಿ ಪಲ್ಲವಿ ಸುತ್ತಾಟ, ಫೋಟೋ ವೈರಲ್​ 

ವಿನೋದ್ ರಾಜ್ ಕುಮಾರ್, ವಿನೋದ್ ಪ್ರಭಾಕರ್, ಸತೀಶ್ ನೀನಾಸಂ, ಡಾಲಿ ಧನಂಜಯ್, ಅಭಿಷೇಕ್ ಅಂಬರೀಶ್, ಧನ್ವೀರ್, ಚಿಕ್ಕಣ್ಣ, ಝೈದ್ ಖಾನ್, ಶಿವರಾಜ್ ಕೆ.ಆರ್ ಪೇಟೆ ಹಾಗೂ ಸೂರಜ್ ಸೇರಿದಂತೆ ಸಾಕಷ್ಟು ನಟ, ನಟಿಯರು ಮುಖ್ಯ ಅತಿಥಿಗಳಾಗಿ ಆಗಮಿಸಲಿದ್ದಾರೆ. ನಿಮಿಕಾ ರತ್ನಾಕರ್, ನಿಶ್ವಿಕಾ ನಾಯ್ಡು, ಬೃಂದಾ ಆಚಾರ್ಯ, ಶರಣ್ಯ ಶೆಟ್ಟಿ, ನಮ್ರತಾ ಗೌಡ, ತನ್ವಿಯ ಬಾಲರಾಜ್, ಪ್ರಿಯಾಂಕ ಗೌಡ ನೃತ್ಯ ಮಾಡಲಿದ್ದಾರೆ.

ಹಲವು ಸಾಮಾಜಿಕ ಕಾರ್ಯಕ್ರಮಗಳು ಇದೇ ವೇಳೆ ಜರುಗಲಿದೆ. ಇವೆಲ್ಲ ಕಾರ್ಯಗಳ ಉಸ್ತುವಾರಿಯನ್ನು ದರ್ಶನ್ ಅವರ ಆತ್ಮೀಯರಾದ ಎಸ್.ಸಚ್ಚಿದಾನಂದ ಇಂಡುವಾಳು ವಹಿಸಿಕೊಂಡಿದ್ದಾರೆ. ಶ್ರೀರಂಗ ಪಟ್ಟಣದ ಶ್ರೀ ರಂಗನಾಥ ಸ್ವಾಮಿ ದೇವಸ್ಥಾನ ಮೈದಾನದಲ್ಲಿ ಬೆಳ್ಳಿ ಪರ್ವ ಕಾರ್ಯಕ್ರಮ ನಡೆಯಲಿದೆ.

ಇದನ್ನೂ ಓದಿ: ಕಿಚ್ಚ ಸುದೀಪ್‌ʼಗೆ ಈ ಬಾಲಿವುಡ್‌ ನಟಿಯ ಮೇಲೆ ಕ್ರಶ್ ಅಂತೆ ‌!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

Trending News