Darshan Visited Kalahasta With Vijayalakshmi: ಚಂದನವನದ ಖ್ಯಾತ ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್ ಇತ್ತೀಚೆಗೆ 'ಕಾಟೇರ' ಸಿನಿಮಾ ಸಕ್ಸಸ್ ಸಂಭ್ರಮದಲ್ಲೂ ತೇಲುತ್ತಿರುವಾಗಲೇ ತಮ್ಮ ವೈಯಕ್ತಿಕ ವಿಚಾರಗಳಿಂದ ಭಾರೀ ಸುದ್ದಿ ಆಗಿದ್ದರು. ಇತ್ತೀಚೆಗೆ ನಟಿ ಪವಿತ್ರಾ ಗೌಡ ಹತ್ತು ವರ್ಷಗಳಿಂದ ನಟ ದರ್ಶನ್ ಜೊತೆ ರಿಲೇಷನ್‌ಶಿಪ್‌ನಲ್ಲಿ ಇರುವುದಾಗಿ ಸೋಶಿಯಲ್ ಮೀಡಿಯಾದಲ್ಲಿ ಬಹಿರಂಗಪಡಿಸಿದ್ದರು. ಈ ಕಾರಣದಿಂದ ಈ ಬಗ್ಗೆ ವಿಜಯಲಕ್ಷ್ಮಿ ದರ್ಶನ್ ಹಾಗೂ ಪವಿತ್ರಾ ಗೌಡ ನಡುವೆ ತಿಕ್ಕಾಟ ಶುರುವಾಗಿತ್ತು. ಬಳಿಕ ಇಬ್ಬರೂ ಸುಮ್ಮನಾಗಿದ್ದರು. 


COMMERCIAL BREAK
SCROLL TO CONTINUE READING

ಇದೆಲ್ಲದರ ನಡುವೆ ದರ್ಶನ್ ಕುಟುಂಬಸ್ಥರು ಹಾಗೂ ಸ್ನೇಹಿತರ ಜೊತೆ ತಿರುಪತಿ, ಕಾಳಹಸ್ತಿ ದೇವಸ್ಥಾನಗಳಿಗೆ ಭೇಟಿ ನೀಡಿದ್ದಾರೆ.  ನಟ ದರ್ಶನ್‌, ಪತ್ನಿ ವಿಜಯಲಕ್ಷ್ಮಿ ಹಾಗೂ ಪುತ್ರ ವಿನೀಶ್ ಜೊತೆ ತಿರುಪತಿ ಹಾಗೂ ಕಾಳಹಸ್ತಿಗೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದು, ಅದಕ್ಕೆ ಸಂಬಂಧಿಸಿದ ಫೋಟೊಗಳು ವೈರಲ್ ಆಗುತ್ತಿದೆ. ಈ ಹಿಂದೆ ತಮಿಳುನಾಡಿನ ತಿರುನಲ್ಲೂರ್ ದೇವಸ್ಥಾನಕ್ಕೆ ಭೇಟಿ ನೀಡಿದ್ದ ಫೋಟೊಗಳು ಸೋಶಿಯಲ್ ಮೀಡಿಯಾದಲ್ಲಿ ಹರಿದಾಡಿತ್ತು. 


Darshan:ಕಾಟೇರ ಸಕ್ಸಸ್ ಖುಷಿಯಲ್ಲಿ ಸ್ನೇಹಿತರೊಡನೆ ತಿಮ್ಮಪ್ಪನ ದರ್ಶನ ಪಡೆದ ಚಾಲೆಂಜಿಂಗ್‌ ಸ್ಟಾರ್!


ನಟ ದರ್ಶನ್ ಅವರ ಈ ಬಾರಿಯ ಹುಟ್ಟುಹಬ್ಬಕ್ಕೆ ಇನ್ನೇನು ಆರು ದಿನಗಳು ಮಾತ್ರ ಬಾಕಿಯಿದೆ. ಇನ್ನೊಂದೆಡೆ 'ಕಾಟೇರ' ಸಕ್ಸಸ್ ಬೆನ್ನಲ್ಲೇ ದರ್ಶನ್ 'ಡೆವಿಲ್' ಸಿನಿಮಾ ಚಿತ್ರೀಕರಣಕ್ಕೆ ಮುಂದಾಗಿದ್ದು, ಅದಕ್ಕೂ ಮುನ್ನ ತಿರುಪತಿ ಹಾಗೂ ಕಾಳಹಸ್ತಿಗೆ ಭೇಟಿ ನೀಡಿದ್ದಾರೆ. 'ಡೆವಿಲ್' ಚಿತ್ರಕ್ಕೆ ನಿರ್ದೇಶಕ ಮಿಲನಾ ಪ್ರಕಾಶ್ ಆಕ್ಷನ್ ಕಟ್ ಹೇಳಲಿದ್ದಾರೆ. ನಟ ದರ್ಶನ್‌ ಹಾಗೂ ಡೈರೆಕ್ಟರ್‌ ಮಿಲನಾ ಪ್ರಕಾಶ್ ಈ ಹಿಂದೆ ತಾರಕ್‌ ಸಿನಿಮಾದಲ್ಲಿ ಒಟ್ಟಾಗಿ ಕೆಲಸ ಮಾಡಿದ್ದು, ಇದೀಗ ಮತ್ತೊಂದು ಚಿತ್ರವನ್ನು ಮಾಡಲು ಸಜ್ಜಾಗಿದ್ದಾರೆ.


ಇನ್ನೇನು ನಟ ದರ್ಶನ್‌ ಹುಟ್ಟುಹಬ್ಬದಂದು ನಿರ್ದೇಶಕ ಮಿಲನಾ ಪ್ರಕಾಶ್ ಡಿವಿಲ್‌ ಚಿತ್ರದ ಫಸ್ಟ್ ಲುಕ್ ಜೊತೆ ಒಂದಷ್ಟು ಮಾಹಿತಿಯನ್ನ ಹಂಚಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. ಹಾಗೆಯೇ ದರ್ಶನ್‌ ಸಹ ಪ್ರತಿ ವರ್ಷದಂತೆ ಈ ವರ್ಷ ಕೂಡ ತಮ್ಮ ಅಭಿಮಾನಿಗಳಲ್ಲಿ ಮನವಿ ಮಾಡಿಕೊಂಡು ತಮ್ಮ ಹುಟ್ಟುಹಬ್ಬಕ್ಕೆ, ಬ್ಯಾನರ್, ಕೇಕ್ ಹಾಗೂ ಹಾರಗಳನ್ನು ದಯಮಾಡಿ ತರಬೇಡಿ. ಈ ವರ್ಷವೂ ಅದೇ ಹಣದಲ್ಲಿ ಅಕ್ಕಿ, ಬೇಳೆ, ಸಕ್ಕರೆ ಇತರೆ ದವಸ ಧಾನ್ಯಗಳನ್ನು ದಾನ ನೀಡಿ. ಅದನ್ನು ಒಗ್ಗೂಡಿಸಿ ಅವಶ್ಯಕತೆ ಇರುವ ಅನಾಥಾಶ್ರಮಗಳಿಗೆ ತಲುಪಿಸುವ ಜವಾಬ್ದಾರಿ ನನ್ನದು ಎಂದಿದ್ದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=I87DcFM35WY
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.