ಬೆಂಗಳೂರು: ಇಡೀ ದೇಶಾದ್ಯಂತ ತಲ್ಲಣ ಸೃಷ್ಟಿಸಿರುವ ಕರೋನಾ ಅಲೆಯು ಮಹಾರಾಷ್ಟ್ರದಲ್ಲಿ ಅತಿ ಹೆಚ್ಚು ಪ್ರಭಾವ ಬೀರಿದೆ. ಈ ಹಿನ್ನಲೆಯಲ್ಲಿ ಮುಂಬೈ ತೊರೆದು ಸದ್ಯ ಬೆಂಗಳೂರಿನಲ್ಲಿರುವ ಕನ್ನಡತಿ ಖ್ಯಾತ ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಕರೋನಾ ಸೋಂಕಿಗೆ ತುತ್ತಾಗಿದ್ದಾರೆ ಎಂದು ವರದಿಯಾಗಿದೆ. ಆದರೆ ನಟಿಯು ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ಬಿಡುಗಡೆ ಮಾಡಿಲ್ಲ. ಈ ಮಧ್ಯೆ ರಣವೀರ್ ಸಿಂಗ್ ಆರೋಗ್ಯದ ಬಗ್ಗೆ ಅವರ ಅಭಿಮಾನಿಗಳು ಆತಂಕಕ್ಕೊಳಗಾಗಿದ್ದಾರೆ.
ನಟಿ ದೀಪಿಕಾ ಪಡುಕೋಣೆಗೆ ಕರೋನಾ:
ಸೆಲೆಬ್ರಿಟಿ ಛಾಯಾಗ್ರಾಹಕರಾದ ವಿರಲ್ ಭಯಾನಿ ಅವರು ಸಾಮಾಜಿಕ ಮಾಧ್ಯಮ ಪೋಸ್ಟ್‌ಗಳ ಮೂಲಕ ದೀಪಿಕಾ ಪಡುಕೋಣೆ ಕರೋನಾ ಸೋಂಕಿಗೆ ಒಳಗಾಗಿರುವ ಬಗ್ಗೆ ಮಾಹಿತಿ ನೀಡಿದ್ದಾರೆ. ಸುದ್ದಿ ತಿಳಿದ ಬಳಿಕ ದೀಪಿಕಾ ಆವರ ಅಭಿಮಾನಿಗಳು ನಟಿ ಶೀಘ್ರದಲ್ಲೇ ಗುನಮುಖರಾಗುವಂತೆ ಶುಭ ಹಾರೈಸುತ್ತಿದ್ದಾರೆ. ಈ ಸಮಯದಲ್ಲಿ, ದೀಪಿಕಾ ಪಡುಕೋಣೆ ಅವರ ಪತಿ ನಟ ರಣವೀರ್ ಸಿಂಗ್ (Ranveer Singh) ಕೂಡ ಬೆಂಗಳೂರಿನಲ್ಲೇ ಇದ್ದು ಅವರ ಆರೋಗ್ಯಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿ ಲಭ್ಯವಾಗಿಲ್ಲ. ಹೀಗಾಗಿ ರಣವೀರ್ ಸಿಂಗ್ ಆರೋಗ್ಯವಾಗಿದ್ದಾರೋ ಇಲ್ಲವೋ ಎಂದು ಆತಂಕದಲ್ಲಿರುವ ಅವರ ಅಭಿಮಾನಿಗಳು ನಟನ ಆರೋಗ್ಯ ಹೇಗಿದೆ ಎಂದು ಸೋಷಿಯಲ್ ಮೀಡಿಯಾದಲ್ಲಿ ನಿರಂತರವಾಗಿ ಪ್ರಶ್ನಿಸುತ್ತಿದ್ದಾರೆ. ಆದರೆ ನಟಿ ಮತ್ತು ಅವರ ಪತಿ ರಣವೀರ್ ಸಿಂಗ್ ಅವರು ಯಾವುದೇ ಅಧಿಕೃತ ಮಾಹಿತಿಯನ್ನು ಹಂಚಿಕೊಂಡಿಲ್ಲ.
ಇದನ್ನೂ ಓದಿ - Steam ಪಡೆಯುವುದರಿಂದ ಕರೋನಾದಿಂದ ರಕ್ಷಣೆ ಪಡೆಯಬಹುದೇ? ಇಲ್ಲಿದೆ ಸತ್ಯಾಸತ್ಯತೆ
ಇತರ ಕುಟುಂಬ ಸದಸ್ಯರು ಕರೋನಾ ಸೋಂಕಿಗೆ ಒಳಗಾಗಿದ್ದಾರೆ:
ದೀಪಿಕಾ ಪಡುಕೋಣೆ (Deepika Padukone) ಅವರ ಕುಟುಂಬದ ಇತರ ಸದಸ್ಯರು ಕೂಡ ಕರೋನಾ ಸೋಂಕಿಗೆ ಒಳಗಾಗಿದ್ದಾರೆ ಎಂಬ ಸುದ್ದಿ ಮಂಗಳವಾರ ಬೆಳಕಿಗೆ ಬಂದಿದೆ. ಅವರ ತಂದೆ ಪ್ರಕಾಶ್ ಪಡುಕೋಣೆ ಆರೋಗ್ಯದ ಸಮಸ್ಯೆಯಿಂದಾಗಿ ಆಸ್ಪತ್ರೆಗೆ ದಾಖಲಾಗಿದ್ದರು. ಇದಲ್ಲದೆ ದೀಪಿಕಾ ಪಡುಕೋಣೆ ಅವರ ತಾಯಿ ಉಜಲಾ ಮತ್ತು ಸಹೋದರಿ ಅನಿಷಾ ಕೂಡ ಕರೋನಾ ಸೋಂಕಿಗೆ ಒಳಗಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಅವರಿಬ್ಬರೂ ಹೋಂ ಕ್ವಾರೆಂಟೈನ್‌ನಲ್ಲಿದ್ದಾರೆ.
ಇದನ್ನೂ ಓದಿ - Fact check : ನಿಂಬೆರಸ ಮೂಗಿಗೆ ಹಾಕುವುದರಿಂದ ಕರೋನಾ ವೈರಸ್ ಸಾಯುತ್ತಾ? ಸತ್ಯಾಸತ್ಯತೆ ತಿಳಿಯಿರಿ
ಆಸ್ಪತ್ರೆಯಲ್ಲಿ ಪ್ರಕಾಶ್ ಪಡುಕೋಣೆ:
ಜ್ವರದಿಂದಾಗಿ ದೀಪಿಕಾ ಅವರ ತಂದೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಹೇಳಲಾಗುತ್ತಿದೆ. ಸದ್ಯ ಪ್ರಕಾಶ್ ಪಡುಕೋಣೆ ಅವರ ಸ್ಥಿತಿ ಮೊದಲಿಗಿಂತ ಉತ್ತಮವಾಗಿದೆ ಮತ್ತು ಅವರ ಸ್ಥಿತಿ ಸುಧಾರಿಸುತ್ತಿದೆ. ಅವರನ್ನು ಈ ವಾರದ ಅಂತ್ಯದ ವೇಳೆಗೆ ಆಸ್ಪತ್ರೆಯಿಂದ ಬಿಡುಗಡೆ ಮಾಡಬಹುದು ಎನ್ನಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.