ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ಪ್ರಕರಣದ ಪ್ರಮುಖ ಸಾಕ್ಷಿ ಬಹಿರಂಗ..! 

Sushant singh rajput Death : ಬಾಲಿವುಡ್‌ ನಟ ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ಪುರಾವೆಗಳನ್ನು ಅಧಿಕಾರಿಗಳು ಪರಿಶೀಲಿಸುತ್ತಿದ್ದಾರೆ ಎಂದು ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಬಹಿರಂಗಪಡಿಸಿದ್ದಾರೆ.

Written by - Krishna N K | Last Updated : Jul 1, 2023, 05:02 PM IST
  • ನಟ ಸುಶಾಂತ್ ಸಿಂಗ್ ರಜಪೂತ್ ಅಪಾರ ಅಭಿಮಾನಿ ಬಳಗವನ್ನು ಬಿಟ್ಟು ಬಾರದ ಲೋಕಕ್ಕೆ ಪಯಣ ಬೆಳೆಸಿದ್ದಾರೆ.
  • ಇಂದಿದೂ ನಟನ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ.
  • ಇದೀಗ ಸುಶಾಂತ್‌ ಸಾವಿನ ಕುರಿತು ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ.
ಸುಶಾಂತ್ ಸಿಂಗ್ ರಜಪೂತ್ ನಿಗೂಢ ಸಾವಿನ ಪ್ರಕರಣದ ಪ್ರಮುಖ ಸಾಕ್ಷಿ ಬಹಿರಂಗ..!  title=

Sushant Singh Rajput : ಸುಮಾರು ಮೂರು ವರ್ಷಗಳ ಹಿಂದೆ ನಟ ಸುಶಾಂತ್ ಸಿಂಗ್ ರಜಪೂತ್ ಅಪಾರ ಅಭಿಮಾನಿ ಬಳಗವನ್ನು ಬಿಟ್ಟು ಬಾರದ ಲೋಕಕ್ಕೆ ಪಯಣ ಬೆಳೆಸಿದರು. ಇಂದಿದೂ ನಟನ ಸಾವಿಗೆ ನಿಖರವಾದ ಕಾರಣ ತಿಳಿದು ಬಂದಿಲ್ಲ. ಇದೀಗ ಸುಶಾಂತ್‌ ಸಾವಿನ ಕುರಿತು ಮಾಹಾರಾಷ್ಟ್ರ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್‌ ಪ್ರಮುಖ ಮಾಹಿತಿಯನ್ನು ತಿಳಿಸಿದ್ದಾರೆ.

ಸುಶಾಂತ್‌ ಸಾವಿನ ಪ್ರಕರಣವನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ತನಿಖೆಗಾಗಿ ಹಸ್ತಾಂತರಿಸಲಾಗಿದೆ. ಆದರೆ, ಇದುವರೆಗೂ ಪ್ರಕರಣದಲ್ಲಿ ಯಾವುದೇ ಮಹತ್ವದ ಪ್ರಗತಿ ಕಂಡುಬಂದಿದ್ದಿಲ್ಲ. ಇದೀಗ ಸುದ್ದಿ ವಾಹಿನಿಯೊಂದಕ್ಕೆ ನೀಡಿದ ಸಂದರ್ಶನದಲ್ಲಿ ಮಹಾರಾಷ್ಟ್ರದ ಉಪ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಪ್ರಕರಣದ ಬಗ್ಗೆ ಹೊಸ ಮಾಹಿತಿಯನ್ನು ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: ʼಆದಿಪುರುಷʼ ಸೋಲು..! ಪ್ರಭಾಸ್‌ ಕಮ್‌ಬ್ಯಾಕ್‌ ಮಾಡೋಕೆ ಈ ಎರಡು ಸಿನಿಮಾ ಗೆಲ್ಲಲೇಬೇಕು..

ಸಂದರ್ಶನದಲ್ಲಿ ಸುಶಾಂತ್‌ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಬಳಿ ಸಾಕಷ್ಟು ಪುರಾವೆಗಳಿವೆ ಎಂದು ಹೇಳಿದ್ದಾರೆ. ಅಲ್ಲದೆ, ಅಧಿಕಾರಿಗಳು ಸಲ್ಲಿಸಿರುವ ಪುರಾವೆಗಳ ವಿಶ್ವಾಸಾರ್ಹತೆಯನ್ನು ಪರಿಶೀಲಿಸುವ ಪ್ರಕ್ರಿಯೆ ನಡೆಯುತ್ತಿದೆ. ತನಿಖೆ ಇನ್ನೂ ಪ್ರಗತಿಯಲ್ಲಿದ್ದು, ಪ್ರಕರಣದ ಫಲಿತಾಂಶದ ಬಗ್ಗೆ ಯಾವುದೇ ಕಾಮೆಂಟ್‌ಗಳನ್ನು ನೀಡುವುದಿಲ್ಲ ಎಂದು ಫಡ್ನವಿಸ್ ಹೇಳಿದರು.

ಬಾಲಿವುಡ್‌ ನಟ ಸುಶಾಂತ್‌ ಸಿಂಗ್‌ ರಜಪೂತ್‌ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿ ಇದುವರೆಗೂ ಯಾವುದೇ ನಿಖರ ಮಾಹಿತಿ ದೊರೆತಿಲ್ಲ. ಅಲ್ಲದೆ, ಸುಶಾಂತ್ ಗೆಳತಿ ರಿಯಾ ಚಕ್ರವರ್ತಿ ಮಾದಕವಸ್ತು ಪ್ರಕರಣದಲ್ಲಿ ಸುಮಾರು ಒಂದು ತಿಂಗಳು ಜೈಲಿನಲ್ಲಿ ಕಳೆದಿದ್ದರು. ಇದೀಗ ಸುಶಾಂತ್‌ ಕೇಸ್‌ ತನಿಖೆ ಚುರುಕು ಪಡೆದುಕೊಂಡಿದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News