Devil The Hero Update On Darshan Birthday: ಸ್ಯಾಂಡಲ್‌ವುಡ್‌ ಚಾಲೆಂಜಿಂಗ್ ಸ್ಟಾರ್ ದರ್ಶನ್ ಸದ್ಯ 'ಕಾಟೇರ' ಸಕ್ಸಸ್ ಸಂಭ್ರಮದಲ್ಲಿದ್ದಾರೆ. ಇನ್ನೇನು ಕೆಲವು ದಿನಗಳಲ್ಲೇ ನಟ  ದರ್ಶನ್ ಹುಟ್ಟುಹಬ್ಬ ಬರುತ್ತಿದ್ದು, ಅಂದು ತಮ್ಮ ಅಭಿಮಾನಿಗಳಿಗೆ ಭರ್ಜರಿ ಗಿಫ್ಟ್ ನೀಡಲು ಮುಂದಾಗಿದ್ದಾರೆ. ಈಗಾಗಲೇ ದರ್ಶನ್‌ನ 57ನೇ ಚಿತ್ರ ಮಿಲನಾ ಪ್ರಕಾಶ್ ನಿರ್ದೇಶನ ಮಾಡಲಿದ್ದಾರೆ ಎಂಬ ವಿಷಯ ಘೋಷಣೆಯಾಗಿದ್ದು, ಚಿತ್ರಕ್ಕೆ 'ಡೆವಿಲ್- ದಿ ಹೀರೊ' ಎನ್ನುವ ಟೈಟಲ್ ಫಿಕ್ಸ್ ಆಗಿದೆ. 


COMMERCIAL BREAK
SCROLL TO CONTINUE READING

'ಡೆವಿಲ್- ದಿ ಹೀರೊ' ಸಿನಿಮಾಗೆ ಸರಳವಾಗಿ ಪೂಜೆ ನೆರವೇರಿಸಿ ಚಿತ್ರಕ್ಕೆ ಚಾಲನೆ ಕೊಡಲಾಗಿದೆ. ಈ ಹಿಂದೆ ದರ್ಶನ್ ಹಾಗೂ ಪ್ರಕಾಶ್ ಕಾಂಬಿನೇಷನ್‌ನಲ್ಲಿ 'ತಾರಕ್' ಚಿತ್ರ ಗೆದಿದ್ದು, ಇದೀಗ ಅದೇ ಕಾಂಬಿನೇಷನ್‌ನಲ್ಲಿ ಮತ್ತೊಂದು ಆಕ್ಷನ್ ಎಂಟರ್‌ಟೈನರ್ ಸಿನಿಮಾ ನಿರ್ಮಾಣ ನಡೀತಿದೆ. ಹಲವು ವರ್ಷಗಳಿಂದ ಯಾವುದೇ ಚಿತ್ರ ಮಾಡದ ನಿರ್ದೇಶಕರು ಈ ಚಿತ್ರಕ್ಕಾಗಿ ಸಿದ್ಧತೆ ನಡೆಸಿರುವುದರಿಂದ,ಸಿನಿಮಾ ಬಗ್ಗೆ ನಿರೀಕ್ಷೆ ಹೆಚ್ಚಾಗಿದೆ. ಟೈಟಲ್‌ನಿಂದಲೇ 'ಡೆವಿಲ್' ಸಿನಿಮಾ ಇನ್ನಷ್ಟು ಕುತೂಹಲ ಮೂಡಿಸಿರುವುದು ಸುಳ್ಳಲ್ಲ. 


ಇದನ್ನೂ ಓದಿ: ‘ಒಂದು ಸರಳ ಪ್ರೇಮಕಥೆ’ಗೆ ವಿಜಯ್ ಸೇತುಪತಿ ಸಾಥ್…ಸ್ವಾತಿಷ್ಠ ಕೃಷ್ಣನ್ ಕ್ಯಾರೆಕ್ಟರ್ ಟೀಸರ್ ರಿಲೀಸ್


ದರ್ಶನ್ ಹುಟ್ಟುಹಬ್ಬಕ್ಕೆ 'ಡೆವಿಲ್' ಚಿತ್ರದ ಫಸ್ಟ್ ಲುಕ್ ರಿಲೀಸ್ ಮಾಡಲು ದರ್ಶನ್ ಮುಂದಾಗಿದ್ದು, ಈಗಾಗಲೇ ಫೋಟೊಶೂಟ್ ನಡೆದಿರುವ ಬಗ್ಗೆ ಸುಳಿವು ಸಿಗುತ್ತಿದೆ. ಇತ್ತೀಚೆಗೆ ಚಾಲೆಂಜಿಂಗ್‌ ಸಾರ್‌ ತಮ್ಮ ಅಭಿಮಾನಿಗಳ ಜೊತೆ ತೆಗೆಸಿಕೊಂಡಿರುವ ಫೋಟೊಗಳನ್ನು ತಲೆ ಕೂದಲಿಗೆ ಕಲರ್ ಹಾಕಿಕೊಂಡು ಸ್ಟೈಲಿಶ್ ಲುಕ್‌ನಲ್ಲಿ ಕಾಣಿಸಿಕೊಂಡಿರುವುದನ್ನು ನೋಡಬಹುದು. 'ಡೆವಿಲ್' ಲುಕ್‌ ಟೆಸ್ಟ್‌ಗಾಗಿಯೇ ಈ ಸ್ಟೈಲ್ ಎನ್ನಲಾಗ್ತಿದೆ. 


ಡೆವಿಲ್- ದಿ ಹೀರೊ' ಸಿನಿಮಾಗೆ ಅಜನೀಶ್ ಲೋಕನಾಥ್ ಸಂಗೀತ ಸಂಯೋಜಿಸಿದ್ದು, ಸುಧಾಕರ್ ರಾಜ್ ಛಾಯಾಗ್ರಹಣ ಚಿತ್ರಕ್ಕಿದೆ. ನಟ ದರ್ಶನ್‌ ಫೋಟೊಶೂಟ್ ಮಾಡಿಸಿ ಹುಟ್ಟುಹಬ್ಬಕ್ಕೆ ಸಣ್ಣ ಮೋಷನ್ ಪೋಸ್ಟರ್ ರಿಲೀಸ್ ಮಾಡುವ ಸಾಧ್ಯತೆಯಿದ್ದು, ಅಜನೀಶ್ ಬಿಜಿಎಂ ಹಿನ್ನೆಲೆಯಲ್ಲಿ 'ಡೆವಿಲ್' ದರ್ಶನ್ ಖದರ್ ನೋಡಲು ಫ್ಯಾನ್ಸ್‌ ಉತ್ಸುಕರಾಗಿದ್ದಾರೆ. ದುಷ್ಯಂತ್ ಜೊತೆ ಸೇರಿ ನಿರ್ದೇಶಕ ಪ್ರಕಾಶ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. 
.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.