D 51 Movie : ತಮಿಳು ಚಿತ್ರರಂಗದ ನಾಯಕ ನಟ ಧನುಷ್‌ ಅವರು ನಟಿಸಿದ ಮತ್ತು ಅರುಣ್ ಮಾಥೇಶ್ವರ್ ನಿರ್ದೇಶನದ ಕ್ಯಾಪ್ಟನ್ ಮಿಲ್ಲರ್ ಚಿತ್ರ ಈ ವರ್ಷ ದೀಪಾವಳಿಗೆ ಬಿಡುಗಡೆಯಾಗಲಿದೆ ಎನ್ನಲಾಗುತ್ತಿದೆ. ಇನ್ನು ಈ ಚಿತ್ರದಲ್ಲಿ ಪ್ರಿಯಾಂಕಾ ಮೋಹನ್ ನಾಯಕಿಯಾಗಿ ನಟಿಸುತ್ತಿದ್ದಾರೆ.  ಈ ಚಿತ್ರ ಪ್ಯಾನ್ ಇಂಡಿಯಾ ಚಿತ್ರವಾಗಿಯೂ ಬಿಡುಗಡೆಯಾಗಲಿದೆ.  


COMMERCIAL BREAK
SCROLL TO CONTINUE READING

ಇತ್ತೀಚೆಗಷ್ಟೇ ಈ ಕ್ಯಾಪ್ಟನ್‌ ಮಿಲ್ಲರ್‌ ಚಿತ್ರದ ಫಸ್ಟ್ ಲುಕ್ ಮತ್ತು ಟೀಸರ್ ಬಿಡುಗಡೆಯಾಗಿ ಚಿತ್ರದ ಮೇಲಿನ ನಿರೀಕ್ಷೆ ಹೆಚ್ಚಿಸಿದೆ. ಇದಲ್ಲದೇ ನಟ  ಧನುಷ್  ತಮ್ಮ 50ನೇ ಚಿತ್ರವನ್ನು ತಾವೇ ನಿರ್ದೇಶನ ಮಾಡುತ್ತಿದ್ದಾರೆ. ಇದಕ್ಕೆ ತಾತ್ಕಾಲಿಕವಾಗಿ 'ಡಿ 50' ಎಂದು ಹೆಸರಿಡಲಾಗಿದೆ. ಈ ಚಿತ್ರವನ್ನು ಸನ್ ಪಿಕ್ಚರ್ಸ್ ನಿರ್ಮಾಣ ಮಾಡಲಿದೆ. ಅಲ್ಲದೆ, ಎಸ್.ಜೆ.ಸೂರ್ಯ, ಅಪರ್ಣಾ ಮುರಳಿ, ಸೆಲ್ವರಗವನ್ ಮುಂತಾದವರು ಪ್ರಮುಖ ಪಾತ್ರಧಾರಿಗಳಾಗಿ ನಟಿಸಿ ನಿರ್ದೇಶಿಸುತ್ತಿರುವ ಈ ಚಿತ್ರಕ್ಕಾಗಿ ಧನುಷ್ ಡಿಪ್ರೇಂಟ್‌ ಆಗಿ ರೆಡಿಯಾಗಿದ್ದಾರೆ. 


ಇದನ್ನೂ ಓದಿ-Bigg Boss: ಬಿಗ್ ಬಾಸ್ ಸೀಸನ್ 10 ಸ್ಪರ್ದಿಗಳ ಹೆಸರು ಲೀಕ್...ಈ ಬಾರಿ ದೊಡ್ಮನೆಯಲ್ಲಿ ಮಿಂಚಲಿದ್ದಾರೆ ಈ ಕಂಟೆಸ್ಟಂಟ್ಸ್‌!


ಇನ್ನು ಇದೇ ವೇಳೆ ನಟ ಧನುಷ್ ಈಗ ನಿರ್ದೇಶಕ ಶೇಖರ್ ಕಮ್ಮುಲ ಜೊತೆ ಕೈ ಜೋಡಿಸಿದ್ದಾರೆ. ಈ ಚಿತ್ರಕ್ಕೆ  'ಟಿ51'  ಎಂದು ತಾತ್ಕಾಲಿಕವಾಗಿ ಹೆಸರಿಡಲಾಗಿದ್ದು, ಈ ಸಿನಿಮಾ ತಮಿಳು, ತೆಲುಗು ಮತ್ತು ಹಿಂದಿ ಮೂರು ಭಾಷೆಗಳಲ್ಲಿ ತಯಾರಾಗಾಲಿದೆ.  ಅಲ್ಲದೆ, ಈ ವರ್ಷದ ಕೊನೆಯಲ್ಲಿ ಚಿತ್ರದ ಶೂಟಿಂಗ್ ಆರಂಭವಾಗಲಿದ್ದು, ನಾಯಾಕಿಯಾಗಿ ರಶ್ಮಿಕಾ ಮಂದಣ್ಣ ಅವರು ಕಾಣಿಸಿಕೊಳ್ಳಲಿದ್ದಾರೆ. 


ಇದರ ಬೆನ್ನಲ್ಲೇ ಇದೀಗ ಮತ್ತೊಂದು ಬಿಗ್‌ ಅಪ್‌ಡೇಟ್‌ ಹೊರಬಿದ್ದಿದ್ದು, ಅಷ್ಟೆಲ್ಲಾ ಸಿನಿಮಾಗಳನ್ನು ತಮ್ಮ ಲಿಸ್ಟ್ ನಲ್ಲಿಟ್ಟುಕೊಂಡಿರುವ ನಟ ಧನುಷ್ ತಮ್ಮ ನಿರ್ಮಾಣ ಸಂಸ್ಥೆಯಾದ ವಂಡರ್ ಬಾರ್ ನಿರ್ಮಿಸುತ್ತಿರುವ ಅರುಣ್ ಮಾಥೇಶ್ವರನ್ ನಿರ್ದೇಶನದ ಮುಂದಿನ ಸಿನಿಮಾದಲ್ಲಿ ಮತ್ತೊಮ್ಮೆ ನಟಿಸಲಿದ್ದಾರೆ ಎಂಬ ಸುದ್ದಿ ಹೊರಬಿದ್ದಿದೆ. ಈ ಬಗ್ಗೆ ನಟ ಧನುಷ್ ತಮ್ಮ ಟ್ವಿಟ್ಟರ್ ಪೇಜ್ ನಲ್ಲಿ ಅಧಿಕೃತ ಪ್ರಕಟಣೆ ಹೊರಡಿಸಿದ್ದಾರೆ. 


ಇದನ್ನೂ ಓದಿ-ಆಚಾರ್ ಆ್ಯಂಡ್ ಕೋ OTT ಬಿಡುಗಡೆ ದಿನಾಂಕ ಅನೌನ್ಸ್‌, ಎಲ್ಲಿ ಯಾವಾಗ ರಿಲೀಸ್‌?


 


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.