ಧನ್ವೀರ್ ʼವಾಮನʼ ಚಿತ್ರದ ಆಕ್ಷನ್ ಟೀಸರ್ ರಿಲೀಸ್‌ಗೆ ಡೇಟ್‌ ಆಂಡ್‌ ಪ್ಲೇಸ್‌ ಫಿಕ್ಸ್‌..! ಎಲ್ಲಿ ಗೊತ್ತ...?

Vaamana movie teaser : ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ವಾಮನ" ಚಿತ್ರದ ಆಕ್ಷನ್ ಟೀಸರ್ ಬಿಡುಗಡೆಯಾಗಲಿದೆ. ಈಗಾಗಲೇ ಸ್ಥಳ ಮತ್ತು ಡೇಟ್‌ ಅನ್ನು ಚಿತ್ರತಂಡ ತಿಳಿಸಿದೆ. ಹೆಚ್ಚಿನ ಮಾಹಿತಿಗಾಗಿ ಸುದ್ದಿ ಓದಿ.

Written by - YASHODHA POOJARI | Edited by - Krishna N K | Last Updated : Aug 14, 2023, 04:13 PM IST
  • ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ವಾಮನ".
  • "ವಾಮನ" ಚಿತ್ರದ ಆಕ್ಷನ್ ಟೀಸರ್ ಬಿಡುಗಡೆಯಾಗಲಿದೆ.
  • ಟೀಸರ್‌ ರಿಲೀಸ್‌ ಸ್ಥಳ ಮತ್ತು ಡೇಟ್‌ ಅನ್ನು ಚಿತ್ರತಂಡ ತಿಳಿಸಿದೆ.
ಧನ್ವೀರ್ ʼವಾಮನʼ ಚಿತ್ರದ ಆಕ್ಷನ್ ಟೀಸರ್ ರಿಲೀಸ್‌ಗೆ ಡೇಟ್‌ ಆಂಡ್‌ ಪ್ಲೇಸ್‌ ಫಿಕ್ಸ್‌..! ಎಲ್ಲಿ ಗೊತ್ತ...? title=

Dhanveer Vaamana movie : ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನಗೆದ್ದಿರುವ ನಟ ಧನ್ವೀರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ "ವಾಮನ" ಚಿತ್ರದ ಆಕ್ಷನ್ ಟೀಸರ್ ಆಗಸ್ಟ್ 17 ರಂದು ಮೈಸೂರಿನಲ್ಲಿ ಬಿಡುಗಡೆಯಾಗಲಿದೆ. ಈಗಾಗಲೇ  ಚಿತ್ರದ ಎರಡು ಹಾಡುಗಳು ಸಖತ್ ಹಿಟ್ ಆಗಿದೆ.  ಸದ್ಯ ಆಕ್ಷನ್ ಟೀಸರ್ ಬಿಡುಗಡೆಯಾಗಲಿದ್ದು, ಅದೇ ದಿನ ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ ಸಹ ಇದೆ.

ಈಕ್ವಿನಾಕ್ಸ್ ಗ್ಲೋಬಲ್ ಎಂಟರ್ಟೈನ್ಮೆಂಟ್ (EQUINOX GLOBAL ENTERTAINMENT) ಲಾಂಛನದಲ್ಲಿ ಚೇತನ್ ಗೌಡ ಅವರು ನಿರ್ಮಿಸಿರುವ ಮೊದಲ ಚಿತ್ರವಿದು. ಶಂಕರ್ ರಾಮನ್ ಕಥೆ, ಚಿತ್ರಕಥೆ ಹಾಗೂ ಸಂಭಾಷಣೆ ಬರೆದು ನಿರ್ದೇಶಿಸಿರುವ ಈ ಚಿತ್ರಕ್ಕೆ ಅಜನೀಶ್ ಬಿ ಲೋಕನಾಥ್ ಸಂಗೀತ ನೀಡಿದ್ದಾರೆ. ಮಹೇನ್ ಸಿಂಹ ಛಾಯಾಗ್ರಹಣ, ಸುರೇಶ್ ಆರ್ಮುಗಂ ಸಂಕಲನ, ಭೂಷಣ್ ನೃತ್ಯ ನಿರ್ದೇಶನ, ಅರ್ಜುನ್ ರಾಜ್, ವಿಕ್ರಂ ಮೋರ್ ಹಾಗೂ ಜಾಲಿ ಬಾಸ್ಟಿನ್ ಸಾಹಸ ನಿರ್ದೇಶನ ಹಾಗೂ ನವೀನ್ ಹಾಡೋನಳ್ಳಿ ಅವರ ಕಲಾ ನಿರ್ದೇಶನ ಈ ಚಿತ್ರಕ್ಕಿದೆ.

ಇದನ್ನೂ ಓದಿ: Upendra : ಅಟ್ರಾಸಿಟಿ ಕೇಸ್‌.. ನಟ ಉಪೇಂದ್ರಗೆ ಹೈಕೋರ್ಟ್ ಬಿಗ್‌ ರಿಲೀಫ್‌

ಧನ್ವೀರ್ ಅವರಿಗೆ ನಾಯಕಿಯಾಗಿ ರೀಷ್ಮಾ ನಾಣಯ್ಯ ನಟಿಸಿದ್ದಾರೆ. ತಾರಾ, ಸಂಪತ್ ರಾಜ್, ಆದಿತ್ಯ ಮೆನನ್, ಅವಿನಾಶ್, ಅಚ್ಯುತಕುಮಾರ್, ಕಾಕ್ರೋಜ್ ಸುಧಿ, ಪೆಟ್ರೋಲ್ ಪ್ರಸನ್ನ, ಶಿವರಾಜ್ ಕೆ.ಆರ್ ಪೇಟೆ, ಕೆ.ಜಿ.ಸಚ್ಚು, ಅರುಣ್ ಶ್ರೀರಾಮಯ್ಯ ಮುಂತಾದವರು "ವಾಮನ" ಚಿತ್ರದ ತಾರಾಬಳಗದಲ್ಲಿದ್ದಾರೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

Trending News