ಸ್ಯಾಂಡಲ್‌ವುಡ್‌ನಲ್ಲಿ ಪ್ರತಿ ಬಾರಿಯೂ ಹೊಸ ಪ್ರತಿಭೆಗಳು ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡ್ತಾನೆ ಇರುತ್ತಾರೆ. ಇದೀಗ ಅದೇ ಭರವಸೆಯೊಂದಿಗೆ ಯುವ ಉತ್ಸಾಹಿ ಸಿನಿಮಾ ತಂಡವೊಂದು ಎಂಟ್ರಿ ಕೊಟ್ಟಿದೆ. ಎಂಟು ವರ್ಷಗಳ ಕಾಲ ಒಂದಷ್ಟು ಸಿನಿಮಾಗಳಲ್ಲಿ ಅಸಿಸ್ಟೆಂಟ್ ಡೈರೆಕ್ಟರ್ ಆಗಿ ಕೆಲಸ ಮಾಡಿ ಅನುಭವವಿರುವ ಕರ್ಣನ್ ಎಸ್ (Director Karnan) ಧೀರ ಭಗತ್ ರಾಯ್ ಸಿನಿಮಾಗೆ ಕಥೆ ಚಿತ್ರಕಥೆ, ಸಂಭಾಷಣೆ ಬರೆದು ನಿರ್ದೇಶನ ಮಾಡಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: 'ಏಪ್ರಿಲ್‌ 1 ರ ಬದಲು ಏಪ್ರಿಲ್ 8ಕ್ಕೆ ಬರಲಿದೆ ತ್ರಿಕೋನ'


ಧೀರ ಭಗತ್ ರಾಯ್ (Dheer Bhagat Roy) ಆಕ್ಷನ್ ಪೊಲಿಟಿಕಲ್ ಡ್ರಾಮಾ ಸಿನಿಮಾ ಆಗಿದೆ. ರಾಕೇಶ್ ದಳವಾಯಿ ಹೀರೋ ಆಗಿ ನಟಿಸುತ್ತಿದ್ದು, ಸುಚರಿತ ಸಹಾಯರಾಜ್ ನಾಯಕಿಯಾಗಿದ್ದಾರೆ. ಶರತ್ ಲೋಹಿತಾಶ್ವ ವಿಲನ್ ಖದರ್ ಚಿತ್ರದಲ್ಲಿ ವಿಶೇಷವಾಗಿದೆ. ಪ್ರವೀಣ್ ಎಚ್.ಸಿ, ತ್ರಿವಿಕ್ರಮ್,‌ ಮಠ‌ ಕೊಪ್ಪಳ, ಸುಧೀರ್ ಕುಮಾರ್ ಮುರೊಳ್ಳಿ ಗೋವಿಂದ್, ಶಶಿಕುಮಾರ್, ಫಾರೂಕ್ ಅಹ್ಮದ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.


ಧೀರ ಭಗತ್ ರಾಯ್ ಸಿನಿಮಾದ ಟೀಸರ್ (Dheer Bhagat Roy Teaser) ರಿಲೀಸ್ ಆಗಿದ್ದು, ಸಖತ್ ಪ್ರಾಮಿಸಿಂಗ್ ಆಗಿದೆ. ಅಧಿಕಾರಕ್ಕಾಗಿ ನಡೆಯುವ ಹೋರಾಟ, ಪ್ರೀತಿ-ಮಮತೆಯ ಸುತ್ತ ನಡೆಯುವ ಬಾಂಧವ್ಯದ ಕಥೆಯನ್ನು ಅಚ್ಚುಕಟ್ಟಾಗಿ ನಿರ್ದೇಶಕರು ಕಟ್ಟಿಕೊಟ್ಟಿದ್ದಾರೆ. 


ಇದನ್ನೂ ಓದಿ: Deepika Padakone: ರಣವೀರ್ ಸಿಂಗ್ ಪ್ರೀತಿಯಿಂದ ದೀಪಿಕಾಗೆ ಇಟ್ಟ ನಿಕ್‌ ನೇಮ್‌ ಏನು ಗೊತ್ತೇ..?


ಶ್ರೀ ಓಂ ಸಿನಿ ಎಂಟರ್ಟೈನರ್ಸ್ ಸಿನಿಮಾ ನಿರ್ಮಾಣ ಮಾಡುತ್ತಿದ್ದಾರೆ. ಧೀರ ಭಗತ್ ರಾಯ್ ಸಿನಿಮಾಗೆ ಲೂಸಿಯಾ ಖ್ಯಾತಿಯ ಪೂರ್ಣ ಚಂದ್ರ ತೇಜಸ್ವಿ (Purnachandra Tejaswi) ಸಂಗೀತ  ಸಂಯೋಜಿಸಿದ್ದು, ವಿಶ್ವ ಎನ್ ಎಂ ಸಂಕಲನ, ಎಂ ಸೆಲ್ವಂ ಜಾನ್ ಛಾಯಾಗ್ರಹಣ, ಕರಿಯಪ್ಪ ಎಸ್ ಪಾಲವ್ವನ ಹಳ್ಳಿ ಸಹ ನಿರ್ಮಾಣದ ಜವಾಬ್ದಾರಿ ಹೊತ್ತುಕೊಂಡಿದ್ದಾರೆ. ಈಗಾಗಲೇ ಶೇ 60ರಷ್ಟು ಶೂಟಿಂಗ್ ಕಂಪ್ಲೀಟ್ ಮಾಡಿರುವ  ಚಿತ್ರತಂಡ ಉಳಿದ ಭಾಗದ ಶೂಟಿಂಗ್ ನಲ್ಲಿ ಬ್ಯುಸಿಯಾಗಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ. 
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.